Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*

ಜುಲೈ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.7 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜು.8 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರೀ ಗಾಳಿ ಮಳೆಯಿಂದಾಗಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನದಿ ನೀರು ರಸ್ತೆಯನ್ನು ಆವರಿಸಿದೆ. ಜಿಲ್ಲಾ ಕೇಂದ್ರ‍್ರ ಮಡಿಕೇರಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೇ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳುವ ಇಳಿಜಾರು ರಸ್ತೆಯ ಒಂದು ಪಾರ್ಶ್ವದಲ್ಲಿನ ಕಾಲ್ನಡಿಗೆಯ ಹಾದಿ ಕುಸಿದು ಹೋಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿನ ವಾಹನ ಸಂಚಾರವನ್ನು ಸೀಮಿತಗೊಳಿಸಲಾಗಿದ್ದು, ಬಸ್‌ಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ.
ಈ ಭೂ ಕುಸಿತದ ಹಿನ್ನೆಲೆ ಮುಖ್ಯ ರಸ್ತೆ ಅಪಾಯಕ್ಕೆ ಸಿಲುಕಿದ್ದು, ರಸ್ತೆಯಲ್ಲಿ ಏಕಮುಖ ಸಂಚಾರ ಜಾರಿ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳು ಕೈಗಾರಿಕಾ ಬಡಾವಣೆ ಮೂಲಕ, ರಾಜಾಸೀಟ್ ಮಾರ್ಗವಾಗಿ ಹಾದು ಹೋಗಲು ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ಕುಸಿದ ರಸ್ತೆ- ದಕ್ಷಿಣ ಕೊಡಗಿನ ಹಾತೂರು ಗ್ರಾಮ ಪಂಚಾಯ್ತಿಯ ಕೊಳತ್ತೊಡು ಬೈಗೋಡು ಗ್ರಾಮದ ಮುಖ್ಯ ರಸ್ತೆಯ ಒಂದು ಪಾರ್ಶ್ವ ಭಾರೀ ಮಳೆಯಿಂದ ಸಂಪೂರ್ಣ ಕುಸಿದಿದ್ದು, ಗ್ರಾಮೀಣರ ಸಂಚಾರಕ್ಕೆ ತೊಡಕುಂಟಾಗಿದೆ.
ಮನೆಯ ಮೇಲಕ್ಕೆ ಉರುಳಿದ ಮರ- ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ ನಾಲ್ಕೇರಿ ವೃತ್ತದ ಬೊಮ್ಮಾಡುವಿನಲ್ಲಿ ದಾಸಿ ಎಂಬವರ ವಾಸದ ಮನೆಯ ಮೇಲೆ ನಿನ್ನೆ ಸುರಿದ ಗಾಳಿ ಮಳೆಗೆ ಮರ ಬಿದ್ದು, ಮನೆಯ ಹೆಂಚುಗಳು ಒಡೆದು ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಮೈದುಂಬಿಕೊಳ್ಳುತ್ತಿರುವ ಜಲ ಮೂಲಗಳು- ಮುಂಗಾರಿನ ಆರಂಭವಾದರು ಜೂನ್ ತಿಂಗಳಿನಲ್ಲಿ ಕಾಣಿಸಿಕೊಳ್ಳದ ಮಳೆ, ಜುಲೈನಲ್ಲಿ ತನ್ನ ಪ್ರತಾಪ ತೋರಲಾರಂಭಿಸಿದೆ. ಕಳೆದ ಕೆಲ ದಿನಗಳಿಂದ ಕೊಡಗಿನ ಬಹುತೇಕ ಭಾಗಗಳಲ್ಲಿ ಸುರಿಯುತ್ತಿರುವ ಮಳೆೆಯಿಂದ ಜೀವನದಿ ಕಾವೇರಿ ಸೇರಿದಂತೆ, ಕಿರು ತೊರೆಗಳು ಮೈದುಂಬಿಕೊಳ್ಳಲಾರAಭಿಸಿದೆ.


ಕಾವೇರಿ ಕ್ಷೇತ್ರದಲ್ಲಿ 6 ಇಂಚಿಗೂ ಹಚ್ಚಿನ ಮಳೆ- ಕಾವೇರಿಯ ಕ್ಷೇತ್ರ ಭಾಗಮಂಡಲ ಮತ್ತು ತಲಕಾವೇರಿ ವಿಭಾಗದಲ್ಲಿ ಕಳೆದೊಂದು ಅವಧಿಯಲ್ಲಿ ಭಾರೀ ಮಳೆಯಾಗಿದ್ದು, ಸರಿ ಸುಮಾರು 165 ಮಿ.ಮೀ. ಮಳೆÉ ದಾಖಲಾಗಿದೆ. ಇದರಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿಯ ನೀರಿನ ಮಟ್ಟ ಏರಿಕೆಯನ್ನು ಕಂಡಿದೆ.
ನದಿ ಪಾತ್ರದ ನಾಪೋಕ್ಲು, ಮೂರ್ನಾಡು. ಸಿದ್ದಾಪುರ ವಿಭಾಗಗಳಲ್ಲು ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಉತ್ತರ ಕೊಡಗಿನ ಶಾಂತಳ್ಳಿ, ಕೊಡ್ಲಿಪೇಟೆ ವಿಭಾಗಗಳಲ್ಲು ಉತ್ತಮ ಮಳೆÉಯಾಗುತ್ತಿದೆ.
ಜಲಪಾತಗಳಿಗೆ ಜೀವಕಳೆ -ಉತ್ತಮ ಮಳೆÉಯ ಹಿನ್ನೆಲೆಯಲ್ಲಿ ಮಡಿಕೇರಿ ಅಂಚಿನ ಅಬ್ಬಿ ಜಲಪಾತ, ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತ ಸೇÉರಿದಂತೆ ವಿವಿಧ ಜಲಪಾತಗಳು ಮೈದುಂಬಿ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದೆ. ಇಂತಹ ಜಲಪಾತಗಳು ಪ್ರವಾಸಿ ಆಕರ್ಷಣೆಯ ತಾಣಗಳಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ದಿನದ ಹಿಂದಷ್ಟೆ ಮಲ್ಲಳ್ಳಿಯಲ್ಲಿ ಪ್ರವಾಸಿಗರಿಬ್ಬರು ಮಲ್ಲಳ್ಳಿ ಜಲಪಾತದ ಪ್ರದೇಶದಲ್ಲಿ ಜಲ ದಿಗ್ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಈಗಾಗÀಲೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.