Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ

ಜುಲೈ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪ್ರಶಸ್ತಿಯತ್ತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ.  ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಆತಿಥೇಯ ತುಮಕೂರು ತಂಡವನ್ನು ಎದುರಿಸಿದ ಕೊಡಗು ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 8-0 ಗೋಲುಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿತು. ತಂಡದ ಪರ ಸಬಿತ್ ಎರಡು ಗೋಲು, ಸವಾದ್ ಎರಡು ಗೋಲು, ಫಾರೂಕ್ ಒಂದು ಗೋಲು, ಅಜಿತ್ ಒಂದು ಗೋಲು ಹಾಗೂ ದಿವಾಕರ್ ಒಂದು ಗೋಲು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕೊಡಗು ತಂಡದ ಸಮನ್ವಯದ ಆಟ, ವೇಗದ ಪಾಸ್‌ಗಳು ಮತ್ತು ಪರಿಣಾಮಕಾರಿ ದಾಳಿ ಎದುರಾಳಿ ತಂಡವನ್ನು ಸಂಪೂರ್ಣವಾಗಿ ಕಟ್ಟಿಹಾಕಿತು. ಎರಡನೇ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವನ್ನು ಎದುರಿಸಿದ ಕೊಡಗು ತಂಡವು ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿತು. ಪಂದ್ಯದುದ್ದಕ್ಕೂ ಎದುರಾಳಿಗೆ ಯಾವುದೇ ಅವಕಾಶ ನೀಡದ ಕೊಡಗು ತಂಡವು 4-0 ಗೋಲುಗಳ ಅಂತರದಿಂದ ಜಯಭೇರಿ ಬಾರಿಸಿತು. ಈ ಪಂದ್ಯದಲ್ಲಿ ರಂಗ ಎರಡು ಗೋಲು, ತಂಡದ ನಾಯಕ ವಿಜು ಒಂದು ಗೋಲು ಹಾಗೂ ಮುಸ್ತಾಕ್ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಖಚಿತಪಡಿಸಿದರು.
ಕೊಡಗು ತಂಡದ ನಾಯಕನಾಗಿ ವಿಜು ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಮುಖ್ಯ ಕೋಚ್ ಜಗದೀಶ್ ಪಾಣತಾಲೆ ಅವರ ಮಾರ್ಗದರ್ಶನದಲ್ಲಿ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ವ್ಯವಸ್ಥಾಪಕರಾಗಿ ದರ್ಶನ್ ಸುಕುಮಾರ್ ಹಾಗೂ ಸಹಾಯಕ ಕೋಚ್ ಆಗಿ ದೀಪು ಮಾಚ್ಚಯ್ಯ ತಂಡದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಪಂದ್ಯಾವಳಿಯಲ್ಲಿ ಕೊಡಗು ತಂಡದ ಸತತ ಎರಡು ಗೆಲುವು ಜಿಲ್ಲೆಯ ಫುಟ್‌ಬಾಲ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ಮುಂದಿನ ಪಂದ್ಯಗಳಲ್ಲಿಯೂ ಇದೇ ಪ್ರದರ್ಶನ ಮುಂದುವರಿಸಿ ಪ್ರಶಸ್ತಿ ಗೆಲ್ಲಲಿ ಎಂದು ಜಿಲ್ಲೆಯ ಕ್ರೀಡಾಭಿಮಾನಿಗಳು ಶುಭ ಹಾರೈಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.