Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 

ಜುಲೈ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ತಮ್ಮ ಜನ್ಮದಿನದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ, ಕ್ಷೇತ್ರದಾದ್ಯಂತ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. :: ದೇವಾಲಯಕ್ಕೆ ಭೇಟಿ :: ​ಶಾಸಕರು ಮೊದಲಿಗೆ ಪ್ರಸಿದ್ಧ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ತಾಯಿ ಕಾವೇರಿಗೆ ಪ್ರಾರ್ಥನೆ ಸಲ್ಲಿಸಿ, ಕ್ಷೇತ್ರದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. :: ​ಮಕ್ಕಳೊಂದಿಗೆ ಜನ್ಮದಿನದ ಸಂಭ್ರಮ :: ಧಾರ್ಮಿಕ ಕಾರ್ಯಕ್ರಮಗಳ ನಂತರ ಭಾಗಮಂಡಲದ ಅಟಲ್ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಸಂದರ್ಭ ಮಕ್ಕಳಿಗೆ ಜೀವನದಲ್ಲಿ ಶಿಸ್ತು ಮತ್ತು ವಿದ್ಯಾಭ್ಯಾಸದ ಮಹತ್ವದ ಕುರಿತು ಸಲಹೆ ನೀಡಿದರು. :: ರಸ್ತೆ ಹಾಗೂ ಬಸ್ ತಂಗುದಾಣ ಲೋಕಾರ್ಪಣೆ :: 
ಭಾಗಮಂಡಲ ಹಾಗೂ ಕುಂದಚೇರಿಯಲ್ಲಿ ನೂತನವಾಗಿ ನಿರ್ಮಾಣವಾದ ರಸ್ತೆಗಳನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಗೋಣಿಕೊಪ್ಪಲುವಿನಲ್ಲಿ ‘ಕೊಳ್ಳಿಮಾಡ ಸಿ. ಕರುಂಬಯ್ಯ’ ಅವರ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾರ್ವಜನಿಕ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಪೊನ್ನಂಪೇಟೆಯ ನೂತನ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪೊನ್ನಂಪೇಟೆಯ ಪ್ರಮುಖರು ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. :: ​ಪುತ್ಥಳಿ ಅನಾವರಣ ಮತ್ತು ಹಕ್ಕು ಪತ್ರ ವಿತರಣೆ :: ಗೋಣಿಕೊಪ್ಪಲುವಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪಂದ್ಯಂಡ ಬೆಳ್ಳಿಯಪ್ಪ ಅವರ ಪುತ್ಥಳಿಯನ್ನು ಶಾಸಕರು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಬಹಳ ದಿನಗಳಿಂದ ಹಕ್ಕು ಪತ್ರದಿಂದ ವಂಚಿತರಾಗಿದ್ದ ಗೋಣಿಕೊಪ್ಪ ಭಾಗದ ನೂರಾರು ನಿವಾಸಿಗಳಿಗೆ ಶಾಸಕರ ಹಸ್ತದಿಂದ ಹಕ್ಕು ಪತ್ರಗಳನ್ನು ವಿತರಿಸಲಾಯಿತು. :: ಆರೋಗ್ಯ ಶಿಬಿರ ಮತ್ತು ವೃದ್ಧಾಶ್ರಮಕ್ಕೆ ಭೇಟಿ :: ವಿರಾಜಪೇಟೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರ ಜನ್ಮದಿನದ ಪ್ರಯುಕ್ತ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಶಾಸಕರು ಭಾಗವಹಿಸಿದರು. ಬಳಿಕ ಹೆಗ್ಗಳ ಗ್ರಾಮದಲ್ಲಿರುವ ವೃದ್ಧಾಶ್ರಮಕ್ಕೆ ನೇರವಾಗಿ ತೆರಳಿದ ಶಾಸಕರು, ಅಲ್ಲಿನ ಹಿರಿಯ ಜೀವಗಳೊಂದಿಗೆ ಕೇಕ್ ಕತ್ತರಿಸಿ ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ವೃದ್ಧಾಶ್ರಮದ ನಿವಾಸಿಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಶಾಸಕರು, ತಮ್ಮ ಸ್ವಂತ ವೆಚ್ಚದಲ್ಲಿ ಆಶ್ರಮಕ್ಕೆ ಫ್ಯಾನ್, ಟೇಬಲ್ ಹಾಗೂ ಟಿವಿಯನ್ನು ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮಗಳಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ಪುತ್ರಿಯರು, ಶಾಸಕರ ಸಹೋದರ ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್‌ನ ಮಿದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷ ಸೌಕಾತ್ ಆಲಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳು, ವಲಯ ಮತ್ತು ಬೂತ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದು ಶಾಸಕರಿಗೆ ಶುಭ ಹಾರೈಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.