Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ : ಗೃಹಲಕ್ಷ್ಮಿ ಯೋಜನೆ ವದಂತಿಗಳಿಗೆ ಕಿವಿಗೊಡದಿರಿ : ತೀತಿರ ಧರ್ಮಜ ಉತ್ತಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ : ಗೃಹಲಕ್ಷ್ಮಿ ಯೋಜನೆ ವದಂತಿಗಳಿಗೆ ಕಿವಿಗೊಡದಿರಿ : ತೀತಿರ ಧರ್ಮಜ ಉತ್ತಪ್ಪ*

ಜುಲೈ 10, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.10 NEWS DESK : ಗೃಹಜ್ಯೋತಿ ಯೋಜನೆ ಸಂಬಂಧಿಸಿದಂತೆ ದಾಖಲೆ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಫಲಾನುಭವಿಗಳು ಕೇಳಿರುವ ಮಾಹಿತಿ ಒದಗಿಸುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಅರ್ಹರಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪಿಸಬೇಕು ಎಂಬುದು ಉದ್ದೇಶವಾಗಿದೆ. ಆದ್ದರಿಂದ ಮಾಹಿತಿ ಕೇಳುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಭಾವಚಿತ್ರ ಮತ್ತಿತರ ಮಾಹಿತಿ ಒದಗಿಸುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಕೋರಿದರು. ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಜೀವಂತ ಪ್ರಮಾಣ ಪತ್ರ ನೀಡಬೇಕೆಂದು ಸೈಬರ್ ಕೇಂದ್ರಗಳಿಗೆ ಓಡಾಡುತ್ತಿದ್ದು, ಇಂತಹ ಮಾಹಿತಿಗೆ ಕಿವಿಗೊಡಬಾರದು, ಯಾರೂ ಸಹ ಗಾಬರಿಗೆ ಒಳಗಾಗುವುದು ಬೇಡ ಎಂದು ಧರ್ಮಜ ಉತ್ತಪ್ಪ ಅವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮರದ ಕೊಂಬೆಗಳು ಬೀಳುತ್ತಿವೆ. ಇವುಗಳನ್ನು ತೆರವುಗೊಳಿಸಬೇಕು ಎಂದು ಧರ್ಮಜ ಉತ್ತಪ್ಪ ಅವರು ನಿರ್ದೇಶನ ನೀಡಿದರು.
ಕಳೆದ ಮೂರು ನಾಲ್ಕು ದಿನದಲ್ಲಿ ದಕ್ಷಿಣ ಕೊಡಗಿನಲ್ಲಿ ಹೆಚ್ಚಿನ ಮಳೆಯಾಗಿದೆ. ಶ್ರೀಮಂಗಲ, ಬಿರುನಾಣಿ, ತೆರಾಲು, ಬಾಡಗಕೇರಿ, ಬಿ.ಶೆಟ್ಟಿಗೇರಿ, ಕುಟ್ಟಂದಿ, ಭಾಗಮಂಡಲ, ಶಾಂತಳ್ಳಿ, ಸೂರ್ಲಬ್ಬಿ ಮತ್ತಿತರ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ವಿದ್ಯುತ್ ಕಂಬಗಳು ಸಹ ಬೀಳುತ್ತಿದ್ದು, 24 ಗಂಟೆಯೊಳಗೆ ಸರಿಪಡಿಸಿ ವಿದ್ಯುತ್ ಪೂರೈಸಬೇಕು ಎಂದು ಧರ್ಮಜ ಉತ್ತಪ್ಪ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಅಣ್ಣಯ್ಯ ಅವರು ಗುಮ್ಮನಕೊಲ್ಲಿ ಬಳಿ 11 ಕೆ.ವಿ. ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸುವಂತೆ ಕಳೆದ ಆರು ತಿಂಗಳಿನಿಂದ ಮನವಿ ಮಾಡುತ್ತಾ ಬರಲಾಗಿದೆ. ಅಲ್ಲಿನ ಒಂದು ಮಗುವಿಗೆ ಮುಖ ಸುಟ್ಟು ಹೋಗಿದ್ದು, ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ ಮಗುವಿಗೆ ನ್ಯಾಯ ಒದಗಿಸಬೇಕು ಎಂದು ಕೋರಿದರು. ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಆ ಭಾಗದಲ್ಲಿ ತೊಂದರೆಯಾಗಿದೆ ಎಂದು ಅವರು ಗಮನ ಸೆಳೆದರು. ಈ ಸಂಬಂಧ ಪರಿಶೀಲಿಸಿ ಅಗತ್ಯ ಕ್ರಮವಹಿಸಲಾಗುವುದು ಎಂದು ಸೆಸ್ಕ್ ಇಇ ರಾಮಚಂದ್ರ ಅವರು ಹೇಳಿದರು. ದಕ್ಷಿಣ ಕೊಡಗಿನ ಸುಮಾರು 513 ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿ, ಗೃಹಜ್ಯೋತಿ ಯೋಜನೆ ಕಲ್ಪಿಸಲಾಗಿದೆ ಎಂದು ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಜ ಉತ್ತಪ್ಪ ಅವರು ಹೊಸ ವಿದ್ಯುತ್ ಸಂಪರ್ಕಕ್ಕೆ ಹೆಚ್ಚಿನ ಹಣ ಪಡೆಯುತ್ತಿರುವ ದೂರುಗಳು ಕೇಳಿ ಬರುತ್ತಿದ್ದು, ಈ ರೀತಿ ಆಗದಂತೆ ಎಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಸಂದರ್ಭದಲ್ಲಿ ಸೆಸ್ಕ್ ಇಲಾಖೆಯವರು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ನಾಸೀರ್ ಅವರು ಮಾತನಾಡಿ ಗೃಹಲಕ್ಷ್ಮಿ ಯೋಜನೆ ಸಂಬಂಧ ಹೆಸರು ನೋಂದಾಯಿಸಿಕೊಂಡಿರುವ ಫಲಾನುಭವಿಗಳಿಂದ ಜೀವಂತ ಪ್ರಮಾಣ ಪತ್ರ ಕಡ್ಡಾಯ ಮಾಡಿಸಬೇಕು ಎಂದು ಮಾಹಿತಿಗಳು ಕೇಳಿ ಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಾರ್ವಜನಿಕರು ಗಾಬರಿಯಾಗದಂತೆ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು. ಫಲಾನುಭವಿಗಳು ಸುಳ್ಳು ಮಾಹಿತಿಗಳಿಗೆ ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಅವರು ಕೋರಿದರು. ಗೃಹಲಕ್ಷ್ಮಿ ಯೋಜನೆಯಡಿ ಮೇ ತಿಂಗಳವರೆಗೆ ಹಣ ಬಿಡುಗಡೆಯಾಗಿದ್ದು. ಸದ್ಯ 1,17,905 ಫಲಾನುಭವಿಗಳಿಗೆ ಹಣ ಪಾವತಿಯಾಗಲಿದೆ. ಇದುವರೆಗೆ ಶೇ.98 ರಷ್ಟು ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ ಎಂದರು. ಅನ್ನಭಾಗ್ಯ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಬಡವರಿಗೆ ಆಹಾರ ತಲುಪಿಸಬೇಕು. ಎಪಿಎಲ್ ಕಾರ್ಡ್‍ಗಳನ್ನು ಬಿಪಿಎಲ್ ಕಾರ್ಡ್‍ಗೆ ವರ್ಗಾಯಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಕಾಳಿಮಾಡ ಪ್ರಶಾಂತ್ ಅವರು ಮನೆ ಮನೆಗೆ ಆಹಾರ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ಮಾಡಬೇಕಿದೆ. ಆದರೆ ತಹಶೀಲ್ದಾರರೇ ಸ್ಥಳ ಪರಿಶೀಲಿಸಬೇಕು ಎಂದು ವರದಿ ನೀಡುತ್ತಿದ್ದಾರೆ. ಇದು ಸರಿಯಲ್ಲ. ಕೆಲವು ಕುಟುಂಬಗಳಲ್ಲಿ ಬಿಪಿಎಲ್ ಪಡಿತರ ಚೀಟಿಗಳು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಗೊಂಡಿದ್ದು, ಇದನ್ನು ಸರಿಪಡಿಸುವಂತಾಗಬೇಕು ಎಂದು ಕೋರಿದರು. ಶ್ರೀಮಂಗಲ ವಿಎಸ್‍ಎಸ್‍ಎನ್ ನ್ಯಾಯಬೆಲೆ ಅಂಗಡಿಯಲ್ಲಿ 60 ಚೀಲ ಅಕ್ಕಿ ಉಳಿದಿದ್ದು, ಇದನ್ನು ಗ್ರಾಹಕರಿಗೆ ವಿತರಿಸಬೇಕು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಜಾನ್ಸನ್ ಅವರು ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ 900 ಪಡಿತರ ಕಾರ್ಡ್‍ಗಳನ್ನು ಅಮಾನತ್ತಿನಲ್ಲಿ ಇಟ್ಟಿದ್ದು, ಈ ಕಾರ್ಡ್‍ಗಳನ್ನು ಪುನರ್ ಪರಿಶೀಲಿಸಿ ಮುಂದುವರಿಸುವಂತಾಗಬೇಕು ಎಂದು ಅವರು ಹೇಳಿದರು. ಎಪಿಎಲ್ ಕಾರ್ಡ್‍ಗಳು ಸಹ ದಾಖಲೆ ಉದ್ದೇಶಕ್ಕೆ ಬೇಕಿದ್ದು, ಈ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪಡಿತರ ಕಾರ್ಡ್‍ಗಳನ್ನು ವಿತರಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷರಾದ ನಾಸೀರ್ ಅವರು ವಿರಾಜಪೇಟೆ-ಗೋಣಿಕೊಪ್ಪ-ಮೈಸೂರು ಮಾರ್ಗಕ್ಕೆ ಬಸ್ಸು ಕಲ್ಪಿಸುವಂತೆ ಕೋರಲಾಗಿತ್ತು,. ಇದು ಕಾರ್ಯಗತಗೊಂಡಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ರಜೆ ದಿನಗಳಲ್ಲಿಯೂ ಕೆಎಸ್‍ಆರ್‍ಟಿಸಿ ಬಸ್ಸುಗಳು ಸಂಚರಿಸುತ್ತಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗಿದೆ ಎಂದರು. ಧರ್ಮಜ ಉತ್ತಪ್ಪ ಅವರು ಮಾತನಾಡಿ ಪೊನ್ನಂಪೇಟೆಯ ಹರಿಹರಕ್ಕೆ ಬಸ್ಸು ಕಲ್ಪಿಸಬೇಕು. ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಮತ್ತೊಬ್ಬ ಸಮಿತಿ ಸದಸ್ಯರಾದ ವಿ.ಪಿ.ಶಶಿಧರ ಅವರು ಮಾತನಾಡಿ ಕೊಡಗು ಜಿಲ್ಲೆಗೆ ನಾಲ್ಕು ಹೊಸ ಬಸ್ಸುಗಳು ಬಂದಿದ್ದು, ಬೆಂಗಳೂರು-ಮಡಿಕೇರಿ ಮಾರ್ಗ ಸಂಚರಿಸುತ್ತವೆ ಎಂದು ಹೇಳಿದರು. ಗುಡ್ಡೆ ಹೊಸೂರು ಬಳಿ ಕೆಎಸ್‍ಆರ್‍ಟಿಸಿ ಡಿಪೋ ನಿರ್ಮಾಣವಾಗಿದೆ. ಎನ್‍ಒಸಿ ಸಹ ಕೊಡಿಸಲಾಗಿದೆ. ಇಂಧನ ಬಂಕ್ ಆದಲ್ಲಿ ಶೀಘ್ರ ಉದ್ಘಾಟಿಸಬಹುದಾಗಿದೆ ಎಂದರು. ಯುವನಿಧಿ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಪ್ರಾಂಶುಪಾಲರ ಜೊತೆ ಚರ್ಚಿಸಿದ್ದಲ್ಲಿ ವಿದ್ಯಾರ್ಥಿಗಳ ಪಟ್ಟಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ಯುವನಿಧಿ ಯೋಜನೆಯ ಪ್ರಗತಿ ಸಾಧಿಸಬಹುದು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಕಾಂತರಾಜು ಅವರು ತಾಲ್ಲೂಕು ಮಟ್ಟದಲ್ಲಿ ಉದ್ಯೋಗ ಮೇಳ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಲ್ಲಿ ಉದ್ಯೋಗಾಧಿಕಾರಿಗೆ ವಾಹನ ಇಲ್ಲದೆ ಓಡಾಟಕ್ಕೆ ತೊಂದರೆಯಾಗಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು. ಆಹಾರ ಇಲಾಖೆಯ ಸಹಾಯಕ ನಿರ್ದೇಶಕರಾದ ರಮಾ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಎಎವೈ 8,659, ಬಿಪಿಎಲ್ 97,159, ಎಪಿಎಲ್ 41902 ಒಟ್ಟು 1,47,720 ಪಡಿತರ ಚೀಟಿದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್ ಅವರು ಮಾಹಿತಿ ನೀಡಿ ಜೂನ್-2026 ರ ಮಾಸಾಂತ್ಯಕ್ಕೆ 1935 ಪದವೀಧರ ಫಲಾನುಭವಿಗಳಿಗೆ ಮತ್ತು 30 ಡಿಪ್ಲೋಮಾ ಫಲಾನುಭವಿಗಳಿಗೆ ಒಟ್ಟು 1965 ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಗೃಹಜ್ಯೋತಿ ಯೋಜನೆಯಡಿ ಶೇ.99 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ರಾಮಚಂದ್ರ ಅವರು ಹೇಳಿದರು. ಸಮಿತಿ ಉಪಾಧ್ಯಕ್ಷರಾದ ಪಂಕಜ, ಸಂಜಯ್, ಸದಸ್ಯರಾದ ಮಂದ್ರೀರ ಮೋಹನ್ ದಾಸ್, ಬಶೀರ್, ಧನ್ಯ, ಇತರರು ಹಲವು ವಿಷಯಗಳ ಕುರಿತು ಪ್ರಸ್ತಾಪಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.