Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಗಣತಿ ನಮೂನೆ ವಿತರಣೆಯಲ್ಲಿ ಶೇ.99 ರಷ್ಟು ಸಾಧನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಗಣತಿ ನಮೂನೆ ವಿತರಣೆಯಲ್ಲಿ ಶೇ.99 ರಷ್ಟು ಸಾಧನೆ

ಜುಲೈ 14, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜು.14 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ‘ಗಣತಿ ನಮೂನೆ’ಯನ್ನು ಮತದಾರರಿಗೆ ವಿತರಿಸುವ ಕಾರ್ಯವನ್ನು ಶೇ.99 ರಷ್ಟು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಸಂಬAಧಿಸಿದAತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಕಾರ್ಯದ ಬಗ್ಗೆ ಹಲವು ನಿರ್ದೇಶನ ನೀಡಿದರು. ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಿಸಿ ಬಿಎಲ್‌ಒ ಆಪ್‌ನಲ್ಲಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಜುಲೈ, 29 ರವರೆಗೆ ನಡೆಯಲಿದೆ. ಜೊತೆಗೆ ಡಿಜಿಟಲೀಕರಣ ಕಾರ್ಯವೂ ಸಹ ನಡೆಯಲಿದೆ ಎಂದರು. ಆನ್‌ಲೈನ್ ಮೂಲಕವೂ ಸಹ ಗಣತಿ ನಮೂನೆಯನ್ನು 952 ಮಂದಿ ಮತದಾರರು ಸಲ್ಲಿಸಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 70 ಗೈರು, 2228 ಕುಟುಂಬಗಳು ಸ್ಥಳಾಂತರ, 1629 ಮರಣ, 274 ಡೂಪ್ಲಿಕೇಟ್, 14 ಇತರೆ ಒಟ್ಟು 4,215 ಮತದಾರರ ಸಂಖ್ಯೆಯನ್ನು ಹೊಂದಿದೆ ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ. ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4,68,657 ಮತದಾರರು ಇದ್ದು, 4,68,657 ಗಣತಿ ನಮೂನೆ ಮುದ್ರಣವಾಗಿದ್ದು, ಇದರಲ್ಲಿ 4,63,301 ಗಣತಿ ನಮೂನೆಯನ್ನು ವಿತರಿಸಿ, 1,21,226 ಗಣತಿ ನಮೂನೆಯನ್ನು ಮತದಾರರಿಂದ ಸಂಗ್ರಹಿಸಿ ಡಿಜಿಟಲೀಕರಣ ಮಾಡಿ. ಗಣತಿ ನಮೂನೆ ವಿತರಣೆಯಲ್ಲಿ ಶೇ.98.86 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೋಮಶೇಖರ್ ಅವರು ತಿಳಿಸಿದರು. ಬೂತ್ ಮಟ್ಟದ ಅಧಿಕಾರಿಗಳು ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆ ವಿತರಿಸುವುದರ ಜೊತೆಗೆ ನಿಯಮಗಳನ್ನು ಪಾಲಿಸಬೇಕು ಎಂದರು. ಮುಖ್ಯ ಚುನಾವಣಾಧಿಕಾರಿ ಅವರ ಕಚೇರಿಯಿಂದ ನೀಡಿರುವ ಸ್ಟಿಕ್ಕರ್‌ಗಳನ್ನು ಅಂಟಿಸಿರುವ ಬಗ್ಗೆ ಪರಿಶೀಲಿಸುವುದು, ಲಾಕ್ ಆಗಿರುವ ಮನೆಗಳಿಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿರುವ ಬಗ್ಗೆ ಪರಿಶೀಲಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಮತದಾರರಿಂದ ಗಣತಿ ನಮೂನೆ ಪಡೆದು ಬಿಎಲ್‌ಒ ಆಪ್‌ನಲ್ಲಿ ಕ್ರಮಬದ್ಧವಾಗಿ ಡಿಜಿಟಲೀಕರಣ ಮಾಡಿರುವ ಬಗ್ಗೆ ಪರಿಶೀಲಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ನಿಗದಿತ ಸಮಯದೊಳಗೆ ಡಿಜಿಟಲೀಕರಣ ಪೂರ್ಣಗೊಳಿಸಿ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡುವುದು ಅತ್ಯಗತ್ಯವಾಗಿದೆ. ಹಾಗೆಯೇ ಬಿಎಲ್‌ಒ ಕೇಂದ್ರಗಳು ಹಾಗೂ ಮತದಾರರ ಕೇಂದ್ರಗಳಲ್ಲಿ ವಿಶೇಷ ಶಿಬಿರ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಬಿಎಲ್‌ಒಗಳು ಮತದಾರರ ಸ್ಥಳಾಂತರ, ಯಾರಾದರೂ ನಿಧನ ಹೊಂದಿದ್ದಲ್ಲಿ ಮಾಹಿತಿ ನೀಡುವುದು ಹಾಗೆಯೇ ಇತರೆ ಪ್ರಕರಣಗಳು ಇದ್ದಲ್ಲಿ ಮತ್ತಿತರ ಬಗ್ಗೆ ಪರಿಶೀಲಿಸಬೇಕಿದೆ ಎಂದರು. ಬಿಎಲ್‌ಒಗಳು ಬಿಎಲ್‌ಎ ಸಭೆಯನ್ನು ಮಾಡಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಡಿಜಿಟಲೀಕರಣ ಸಂಬoಧಿಸಿದoತೆ ವಿಶೇಷ ಕ್ಯಾಂಪ್‌ಗಳನ್ನು ಮಾಡಿರುವ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಯಾವುದೇ ರೀತಿಯ ದೂರುಗಳಿಗೆ ಸಂಬoಧಿಸಿದoತೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡ ಬಗ್ಗೆ ಮಾಹಿತಿ ಒದಗಿಸಬೇಕು. ಗಣತಿ ನಮೂನೆ ಹಾಗೂ ದಾಖಲೆಗಳನ್ನು ಸಂಬoಧಪಟ್ಟ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಿರುವ ಬಗ್ಗೆ ಪರಿಶೀಲಿಸಬೇಕು. ಚುನಾವಣಾ ಆಯೋಗವು ನೀಡಿರುವ ಸೂಚನೆಗಳಂತೆ ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನೋಡಲ್ ಅಧಿಕಾರಿಗಳು ಗಮನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಭಾರತ ಚುನಾವಣಾ ಆಯೋಗವು ನೀಡಿರುವ ಸೂಚನೆಯಂತೆ ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನೋಡಲ್ ಅಧಿಕಾರಿಗಳು ಗಮನಿಸಬೇಕು ಎಂದರು. ರಾಜಕೀಯ ಪಕ್ಷಗಳ ಸಭೆ ಏರ್ಪಡಿಸಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮಾಹಿತಿ ನೀಡುವುದು ಅತ್ಯಗತ್ಯ. ರಾಜಕೀಯ ಪಕ್ಷಗಳ ಸಹಕಾರ ಜೊತೆಗೆ ವಿಶೇಷವಾಗಿ ಹಾಡಿಗಳಲ್ಲಿ ವಿಶೇಷ ಕ್ಯಾಂಪ್ ಏರ್ಪಡಿಸಿ ಗಣತಿ ನಮೂನೆಗಳನ್ನು ಭರ್ತಿ ಮಾಡಲು ಹಾಗೂ ಡಿಜಿಟಲೀಕರಣ ಮಾಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಹೇಳಿದರು. ವಿತರಿಸಲು ಬಾಕಿ ಇರುವ ಗಣತಿ ನಮೂನೆಗಳನ್ನು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿತರಿಸಲು, ಗುರುತು ಮಾಡಲು ಕ್ರಮವಹಿಸುವುದು. ಜೊತೆಗೆ ಯಾವುದೇ ಕಾರ್ಯ ವಿಧಾನ ತಪ್ಪಾಗದಂತೆ ಎಲ್ಲಾ ದಾಖಲೆಗಳನ್ನು ನಿರ್ವಹಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಭಾರತ ಚುನಾವಣಾ ಆಯೋಗವು ನೀಡಿರುವ ವೇಳಾ ಪಟ್ಟಿಯಂತೆ ಎಲ್ಲಾ ಚುನಾವಣಾ ಕೆಲಸಗಳನ್ನು ಪೂರ್ಣಗೊಳಿಸಲು ಸಂಪೂರ್ಣವಾಗಿ ಅಧಿಕಾರಿಗಳು ತೊಡಗಿಸಿಕೊಂಡು ಕ್ಷೇತ್ರ ಮಟ್ಟದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಹಲವು ನಿರ್ದೇಶನ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.