
ಮಡಿಕೇರಿ ಜು.14 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜುಲೈ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್‍ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ. :: ಜು.16 ರಂದು ವಿದ್ಯುತ್ ವ್ಯತ್ಯಯ :: ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು, ಎಫ್5 ಹೊದ್ದೂರು ಹಾಗೂ ಎಫ್6 ತಲಕಾವೇರಿ ಫೀಡರ್‍ನಲ್ಲಿ ಜುಲೈ, 16 ರಂದು ಬೆಳಗ್ಗೆ 9.30 ಯಿಂದ ಸಂಜೆ 4.30 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.








