
ಮಡಿಕೇರಿ ಜು.14 NEWS DESK : ಕೊಡಗು ಪ್ರೆಸ್ ಕ್ಲಬ್‌ನ ಖಜಾಂಚಿಯಾಗಿ ಆರ್.ಆರ್.ಮನೋಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ನಿದೇರ್ಶಕರಾಗಿ ಪಿ.ವಿ.ಅಕ್ಷಯ್, ಟಿ.ಜೆ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










