
ಮಡಿಕೇರಿ NEWS DESK ಜು.15 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಬೆಂಗಳೂರು ವತಿಯಿಂದ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಹಾಗೂ ಕುಂದಲ್ಪಾಡಿ ಪೆರಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ವಿವಿಧ ಲೇಖಕರ ಆರು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಲಾಯಿತು. ಸಮಿತಿಯಲ್ಲಿ ಕುಮಾರ್ ಅವರು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ಅತಿ ಹೆಚ್ಚು ಸದಸ್ಯತ್ವ ಮಾಡಿದ ಕಾರಣಕ್ಕಾಗಿ ಗೌರವಿಸಲಾಯಿತು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಸಿ.ಆರ್.ಚಂದ್ರಶೇಖರ್, ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಲೇಖಕ ಹಾಗೂ ಚಿಂತಕ ಅಬ್ದುಲ್ ರೆಹಮಾನ್ ಪಾಷ, ವಿಮರ್ಶಕ ನಿರಂಜನ್, ರಾಜ್ಯ ಕಾರ್ಯದರ್ಶಿ ಈ ಬಸವರಾಜ್ ಮತ್ತಿತರ ಪ್ರಮುಖರು ಸನ್ಮಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.









