
ಮಡಿಕೇರಿ ಜು.15 NEWS DESK : ಬಿಳಿಗೇರಿ ಹಾಗೂ ಅರ್ವತೋಕ್ಲು ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.18 ಮತ್ತು 19, ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಬಿಳಿಗೇರಿಯ ತುಂತಜೆ ಕುಟುಂಬಸ್ಥರ ಕೆಸರುಗದ್ದೆಯಲ್ಲಿ ಕ್ರೀಡಾ ಹಬ್ಬ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸ್ಪರ್ಧೆಗಳು ಆರಂಭವಾಗಲಿವೆ. ಕ್ರೀಡಾಕೂಟದಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕವಾಗಿ ವಿವಿಧ ಸಾಂಪ್ರದಾಯಿಕ ಮತ್ತು ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ. :: ಕ್ರೀಡಾಕೂಟದ ಪ್ರಮುಖ ಆಕರ್ಷಣೆಗಳು ಮತ್ತು ವಿಭಾಗಗಳು :: ಪುರುಷರ ವಿಭಾಗ :: ಕೆಸರುಗದ್ದೆ ಕ್ರಿಕೆಟ್, ಹಗ್ಗಜಗ್ಗಾಟ, ವಾಲಿಬಾಲ್, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ (.22 ಹಾಗೂ ತೋಟದ ಕೋವಿ ಬಳಕೆಗೆ ಅವಕಾಶ), :: ಮಹಿಳೆಯರ ವಿಭಾಗ :: ಹಗ್ಗಜಗ್ಗಾಟ, ವಿವಿಧ ಮನರಂಜನಾ ಸ್ಪರ್ಧೆಗಳು ನಡೆಯಲಿದೆ. :: ಮಕ್ಕಳು, ಪುರುಷರು ಮತ್ತು ಮಹಿಳೆಯರಿಗಾಗಿ :: ವಯೋಮಿತಿಗೆ ಅನುಗುಣವಾಗಿ ವಿವಿಧ ಓಟದ ಸ್ಪರ್ಧೆಗಳು ಹಾಗೂ ವಿಶೇಷ ಮನರಂಜನಾ ಆಟಗಳು. :: ಹೆಸರು ನೋಂದಣಿ :: ಕ್ರಿಕೆಟ್, ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳು ಜು.17ರಂದು ಮಧ್ಯಾಹ್ನ 2 ಗಂಟೆಯೊಳಗೆ ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕಾಗಿ ಆಯೋಜಕರು ತಿಳಿಸಿದ್ದಾರೆ. ಕ್ರೀಡಾಕೂಟದಲ್ಲಿ ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಕ್ರೀಡಾಕೂಟದಲ್ಲಿ ಹಿಂದೂ ಸಮುದಾಯದ ಸ್ಪರ್ಧಾಳುಗಳಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಕೂಟಕ್ಕೆ ಆಗಮಿಸುವ ಸ್ಪರ್ಧಿಗಳು ಹಾಗೂ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. :: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :: ಕ್ರಿಕೆಟ್: ಮಿತ್ರ ಪೂಜಾರಿ (9663253025), ದರ್ಶನ ಪಾರ್ಲಕೋಟಿ (9353934589), ವಾಲಿಬಾಲ್ : ಮನೋಜ್ ಬಾಲಡಿ (9483780634), ಸಂತು ತುಂತಜ್ಜೆ (9449219265), ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ : ಗಗನ್ ಪೈಕೇರ (9741026552), ಕೀರ್ತಿ ಪರ್ಲಕೋಟಿ (9900407142), ಸಂಪರ್ಕಿಸಬಹುದಾಗಿದೆ. ಕ್ರೀಡಾಕೂಟಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ಲಾಂಟರ್ಸ್ ಕ್ಲಬ್‌ನ ಅಧ್ಯಕ್ಷರು ಹಾಗೂ ಸದಸ್ಯ ಮಂಡಳಿ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.









