Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*
  • *ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*
  • *ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*
  • *ಎಸ್‍ಐಆರ್ : ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದು : ವಿ.ಆರ್.ಸುದರ್ಶನ್ ಆರೋಪ*
  • *ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*
  • *ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*
  • *ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.16 NEWS DESK : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ ಎಂದು ಶ್ರೀ ನಂಜುಂಡಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಕೊಡ್ಲಿಪೇಟೆಯ ಶ್ರೀ ನಂಜುಂಡಸ್ವಾಮಿ ವಿದ್ಯಾಸಂಸ್ಥೆ ಆವರಣದಲ್ಲಿ ಗುರುವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಾಲ್ಕು ದಿಕ್ಕುಗಳಲ್ಲಿ ನಡೆಯುವ ಘಟನೆಗಳು, ಬೆಳವಣಿಗೆಗಳು ಹಾಗೂ ಸಮಾಜದ ವಿವಿಧ ವಿಚಾರಗಳನ್ನು ಒಂದೆಡೆ ತಂದು ಜನರಿಗೆ ತಲುಪಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ. ಆದ್ದರಿಂದ ಪತ್ರಿಕೆಗಳ ಪಾತ್ರ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದರು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳನ್ನು ಖರೀದಿಸಿ ಓದುವ ಮೂಲಕ ಮಾಧ್ಯಮಗಳನ್ನು ಪ್ರೋತ್ಸಾಹಿಸಬೇಕು. ಪತ್ರಿಕೆಗಳಲ್ಲಿ ದೊರೆಯುವ ಮಾಹಿತಿಗಳು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಇತರ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುತ್ತವೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕಿ ಸವಿತಾ ರೈ ಅವರು, ನಿಖರ ಹಾಗೂ ವಿಶ್ವಾಸಾರ್ಹ ಮಾಹಿತಿಯನ್ನು ಸಮಾಜಕ್ಕೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಮಾಧ್ಯಮ ಕ್ಷೇತ್ರದಲ್ಲಿಯೂ ಬಳಕೆಯಾಗುತ್ತಿದೆ. ಆದರೂ ಪತ್ರಿಕೆಯ ಮಹತ್ವವನ್ನು ವಿದ್ಯಾರ್ಥಿಗಳು ಮೊದಲು ಅರಿತುಕೊಳ್ಳಬೇಕು. ಪ್ರತಿದಿನ ಸುದ್ದಿಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಗುರುವಿನ ಆಶೀರ್ವಾದ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಯಶಸ್ಸಿನತ್ತ ಸಾಗಲು ಸಾಧ್ಯ. ಹಿಂದೆ ಗುರು- ಮುಂದೆ ಗುರಿ ಇರಬೇಕು. ವಿದ್ಯಾರ್ಥಿಗಳು ತಮ್ಮದೇ ಆದ ಛಾಪು ಮೂಡಿಸಿಕೊಂಡು ಮುನ್ನಡೆಯಬೇಕು ಎಂದರು. ಹಿರಿಯ ಪತ್ರಕರ್ತ ಎಸ್. ಮಹೇಶ್ ಮಾತನಾಡಿ, ಸಮಾಜದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳು, ಬೆಳವಣಿಗೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಜನರಿಗೆ ತಲುಪಿಸುವ ಮಹತ್ತರ ಕಾರ್ಯವನ್ನು ಮಾಧ್ಯಮಗಳು ನಿರ್ವಹಿಸುತ್ತಿವೆ. ಪತ್ರಿಕೆಗಳು ಕೇವಲ ಸುದ್ದಿಮಾಧ್ಯಮವಲ್ಲ, ಅವುಗಳಲ್ಲಿ ಬರುವ ಸುದ್ದಿಗಳು ಭವಿಷ್ಯಕ್ಕೆ ದಾಖಲೆಯಾಗಿ ಉಳಿಯುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಿಗಷ್ಟೇ ಸೀಮಿತವಾಗದೆ, ವಿಶ್ವಾಸಾರ್ಹ ಮಾಧ್ಯಮ ಹಾಗೂ ಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು ಪತ್ರಿಕಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 5 ರಿಂದ 7ನೇ ತರಗತಿ ವಿಭಾಗದಲ್ಲಿ ಚಿಂತನ ಡಿ.ಎನ್. ಪ್ರಥಮ, ಬಿಲ್ವಿಕ್ ಎಸ್.ಜಿ. ದ್ವಿತೀಯ ಹಾಗೂ ವರ್ಷಿತಾ ಕೆ.ಆರ್. ತೃತೀಯ ಸ್ಥಾನ ಪಡೆದರು. 8 ರಿಂದ 10ನೇ ತರಗತಿ ವಿಭಾಗದಲ್ಲಿ ಮೋಕ್ಷ ಹೆಚ್.ಎಂ. ಪ್ರಥಮ, ಸಾನಿಕ ಡಿ. ದ್ವಿತೀಯ ಹಾಗೂ ಜವೇರಿಯ ತೃತೀಯ ಸ್ಥಾನ ಗಳಿಸಿದರು. ಹಿರಿಯ ಪತ್ರಕರ್ತ ಎಸ್.ಮಹೇಶ್, ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಹಿರಿಕರ ರವಿ ಹಾಗೂ ಲಕ್ಷ್ಮೀಕಾಂತ್ ಕೊಮಾರಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಮುಳ್ಳೂರು ವಹಿಸಿದ್ದರು. ವಿಜಯ್ ಹಾನಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿತಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಂಬೂರು, ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಅಭಿಲಾಶ್, ಸಂಸ್ಥೆಯ ಕಾರ್ಯದರ್ಶಿ ದಿವಾಕರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*

ಜುಲೈ 16, 2026

*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 16, 2026

*ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*

ಜುಲೈ 16, 2026

*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.16 NEWS DESK : ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿಮೂರ್ಲನೆ ಮಾಡಲು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.…

*ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*

ಜುಲೈ 16, 2026

*ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*

ಜುಲೈ 16, 2026

*ಎಸ್‍ಐಆರ್ : ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದು : ವಿ.ಆರ್.ಸುದರ್ಶನ್ ಆರೋಪ*

ಜುಲೈ 16, 2026

*ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*

ಜುಲೈ 16, 2026

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 2026

*ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*

ಜುಲೈ 16, 2026

*ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*

ಜುಲೈ 16, 2026

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.