
ಮಡಿಕೇರಿ ಜು.16 NEWS DESK : ನಗರದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಉತ್ತೇಜಿಸಲು ಮತ್ತು ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಿದರು.









