Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*

ಜುಲೈ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.17 : ಮಡಿಕೇರಿಯ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ವತಿಯಿಂದ ತಂಡದ ಸ್ಥಾಪಕಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ನೇತೃತ್ವದಲ್ಲಿ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ 14 ಡಬಲ್ಸ್ ತಂಡಗಳು ಭಾಗವಹಿಸಿ ಕ್ರೀಡಾಸ್ಫೂರ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದವು. ರೋಚಕ ಅಂತಿಮ ಪಂದ್ಯದಲ್ಲಿ ಡಾ.ಕರುಣಾಕರ್ ಹಾಗೂ ಹುಸೇನ್ ಜೋಡಿ ಚಾಂಪಿಯನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಚೇತನ್ ಹಾಗೂ ಅಯ್ಯನ್ ಗೌಡ ಜೋಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿತು. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು. ಪಂದ್ಯಾವಳಿಗೆ ಕ್ರೀಡಾಭಿಮಾನಿಗಳಿಂದ ಉತ್ತಮ ಸ್ಪಂದನೆ ದೊರೆಯಿತು. ಅಂತಿಮ ಪಂದ್ಯವನ್ನು ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ ಹಾಗೂ ಕುಕ್ಕೇರ ಜಯ ಚಿಣ್ಣಪ್ಪ ಅವರು ಉದ್ಘಾಟಿಸಿದರು. ವಿ.ಟಿ.ವಿಸ್ಮಯಿ ಅವರು ಮಾತನಾಡಿ ಕ್ರೀಡೆಯು ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ, ಶಿಸ್ತು ಹಾಗೂ ಉತ್ತಮ ಜೀವನ ಶೈಲಿಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಪ್ರತಿನಿತ್ಯ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿರುವ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ಸದಸ್ಯರನ್ನು ಅಭಿನಂದಿಸಿದ ಅವರು, ಸಮಾಜದಲ್ಲಿ ಆರೋಗ್ಯಕರ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುತ್ತಿರುವ ತಂಡದ ಕಾರ್ಯವನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಕ್ಕೇರ ಜಯ ಚಿಣ್ಣಪ್ಪ ಅವರು ಮಾರ್ನಿಂಗ್ ಗುಡ್‌ಮಿಂಟನ್ ತಂಡದ ಉದ್ದೇಶ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಸೀಮಿತವಾಗಿಲ್ಲ. ಆರೋಗ್ಯಕರ ಜೀವನ ಶೈಲಿ, ಸ್ನೇಹ, ಸೌಹಾರ್ಧತೆ ಹಾಗೂ ಉತ್ತಮ ಬಾಂಧವ್ಯವನ್ನು ಬೆಳೆಸುವುದು ಕೂಡ ಪ್ರಮುಖ ಧ್ಯೇಯವಾಗಿದೆ ಎಂದು ತಿಳಿಸಿದರು. ಪಂದ್ಯಾವಳಿಯ ಯಶಸ್ಸಿಗೆ ಸಹಕರಿಸಿದ ಆಟಗಾರರು, ಪ್ರಾಯೋಜಕರು, ಸ್ವಯಂಸೇವಕರು ಹಾಗೂ ಎಲ್ಲಾ ಕ್ರೀಡಾಭಿಮಾನಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಜಂಟಿ ಕಾರ್ಯದರ್ಶಿ ಸತ್ಯ ಚೆಯ್ಯಂಡ ಅವರು ಅತಿಥಿಗಳನ್ನು ಸ್ವಾಗತಿಸಿದರು.
*ನೂತನ ಪದಾಧಿಕಾರಿಗಳ ಆಯ್ಕೆ* ಇದೇ ಸಂದರ್ಭ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಕುಕ್ಕೇರ ಜಯ ಚಿಣ್ಣಪ್ಪ ಅವರು ಸ್ಥಾಪಕ ಅಧ್ಯಕ್ಷರಾಗಿರುವ ತಂಡದ ನೂತನ ಅಧ್ಯಕ್ಷರಾಗಿ ಶಮ್ಮಿ ಸುಬ್ಬಯ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ.ಕರುಣಾಕರ್, ಕ್ಯಾಪ್ಟನ್ ಶೆಟ್ಟಿ, ಗೌರವ ಕಾರ್ಯದರ್ಶಿಯಾಗಿ ಕವಿ ಪ್ರಸಾದ್, ಜಂಟಿ ಕಾರ್ಯದರ್ಶಿಯಾಗಿ ಸತ್ಯ ಚೆಯ್ಯಂಡ, ಖಜಾಂಚಿಯಾಗಿ ಹುಸೇನ್ ಹಾಗೂ ಜಂಟಿ ಖಜಾಂಚಿಯಾಗಿ ರಜಿನಿಕಾಂತ್ ಅವರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಶಮ್ಮಿ ಸುಬ್ಬಯ್ಯ ಅವರು ಮಾತನಾಡಿ, ಮಾರ್ನಿಂಗ್ ಗುಡ್‌ಮಿಂಟನ್ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರ ಜೊತೆಗೆ ಯುವ ಪ್ರತಿಭೆಗಳನ್ನು ಉತ್ತೇಜಿಸಲಾಗುವುದು. ಭವಿಷ್ಯದಲ್ಲಿ ಮತ್ತಷ್ಟು ಕ್ರೀಡಾಕೂಟಗಳು ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.