Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಗ್ರಾಹಕ ಜಾಗೃತಿ ಕಾರ್ಯಕ್ರಮ : ಗ್ರಾಹಕರ ಹಕ್ಕುಗಳು ಪರಿಣಾಮಕಾರಿಯಾಗಿ ಬಳಕೆಯಾಗಬೇಕು : ಸೋಮಶೇಖರ್ ವಿ.ಕೆ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಗ್ರಾಹಕ ಜಾಗೃತಿ ಕಾರ್ಯಕ್ರಮ : ಗ್ರಾಹಕರ ಹಕ್ಕುಗಳು ಪರಿಣಾಮಕಾರಿಯಾಗಿ ಬಳಕೆಯಾಗಬೇಕು : ಸೋಮಶೇಖರ್ ವಿ.ಕೆ ಕರೆ*

ಜುಲೈ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.17 : ಪ್ರಸ್ತುತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲಾ ಕಾರ್ಯಗಳು ಜನಪ್ರತಿನಿಧಿಗಳಿಂದಲೇ ಆಗುತ್ತದೆ ಎನ್ನುವ ಭ್ರಮೆಯಿಂದ ಜನರು ಹೊರ ಬಂದು ಗ್ರಾಹಕರ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಸ್ಥಾಪಕ ಮುಖ್ಯ ಪೋಷಕ ಸೋಮಶೇಖರ್ ವಿ.ಕೆ ಅವರು ಕರೆ ನೀಡಿದ್ದಾರೆ. ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ವತಿಯಿಂದ ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಹಾಗೂ ಕೊಡಗು ಜಿಲ್ಲಾ ಗ್ರಾಹಕರ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಸರಕಾರಿ ಪಿಯು ಕಾಲೇಜು ಸಭಾಂಗಣದಲ್ಲಿ ‘ಟೆಲಿಕಾಂ ಮತ್ತು ಬ್ರಾಡ್‌ಕಾಸ್ಟಿಂಗ್ ನಲ್ಲಿ ಶುಲ್ಕ ಹಾಗೂ ಬಿಲ್ಲಿಂಗ್’ ವಿಷಯದ ಕುರಿತು ಗ್ರಾಹಕ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೋಮಶೇಖರ್ ವಿ.ಕೆ ಗ್ರಾಹಕರು ಎಂಬುವುದು ಜಾತಿ, ಮತ, ಧರ್ಮ, ಬಣ್ಣ, ಪಕ್ಷ ಭೇದವಿಲ್ಲದ ಒಂದು ಒಗ್ಗಟ್ಟಿನ ವರ್ಗವಾಗಿದೆ. ಗ್ರಾಹಕರ ಹಕ್ಕುಗಳಿಗಾಗಿ ಗ್ರಾಹಕ ಚಳುವಳಿ ನಿರಂತರವಾಗಿರಬೇಕು ಎಂದರು. ಇoದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಜನರಿಂದ ಜನರಿಗಾಗಿ’ ಎನ್ನುವ ಚಿಂತನೆ ಭ್ರಮೆಯಾಗಿ ಮಾರ್ಪಟ್ಟಿದೆ. ಒಂದು ಮತ ಹಾಕಿದ ತಕ್ಷಣ ಪ್ರಜಾಪ್ರಭುತ್ವವನ್ನು ಉಳಿಸುವುದು ಶಾಸಕರ, ಸಂಸದರ ಮತ್ತಿತರ ಜನಪ್ರತಿನಿಧಿಗಳ ಜವಾಬ್ದಾರಿ ಎಂದು ಜನರು ಸುಮ್ಮನಾಗಬಾರದು ಮತ್ತು ತಮ್ಮ ಜವಾಬ್ದಾರಿಯನ್ನು ಮರೆಯಬಾರದು. ಪ್ರಜೆಗಳಿಂದಲೇ ಪ್ರಜಾಪ್ರಭುತ್ವ ಉಳಿಯಬೇಕಾಗಿದೆ, ಇಂದು ಪ್ರತಿಯೊಬ್ಬ ಪ್ರಜೆಯೂ ಗ್ರಾಹಕನಾಗಿರುವುದರಿಂದ ಗ್ರಾಹಕರ ಹಕ್ಕುಗಳ ಪ್ರತಿಪಾದನೆ ಅತಿ ಮುಖ್ಯವಾಗಿದೆ ಎಂದು ತಿಳಿಸಿದರು.
ಭಾರತ ಸರಕಾರ ಜಾರಿಗೊಳಿಸಿರುವ ಗ್ರಾಹಕ ಸಂರಕ್ಷಣಾ ಕಾಯ್ದೆ–2019 ಗ್ರಾಹಕರಿಗೆ ಹಲವು ಪ್ರಮುಖ ಹಕ್ಕುಗಳನ್ನು ನೀಡಿದೆ. ಸುರಕ್ಷಿತ ವಸ್ತುಗಳನ್ನು ಪಡೆಯುವ ಹಕ್ಕು, ಸರಿಯಾದ ಮಾಹಿತಿಯನ್ನು ತಿಳಿದುಕೊಳ್ಳುವ ಹಕ್ಕು, ಆಯ್ಕೆ ಮಾಡುವ ಹಕ್ಕು, ದೂರು ಸಲ್ಲಿಸಿ ಪರಿಹಾರ ಪಡೆಯುವ ಹಕ್ಕು ಸೇರಿದಂತೆ ಅನೇಕ ಹಕ್ಕುಗಳನ್ನು ಈ ಕಾಯ್ದೆ ಒದಗಿಸಿದೆ. ಆದರೆ ಈ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಜಾಗೃತಿ ಅತ್ಯಗತ್ಯವಾಗಿದೆ. “ಜಾಗೃತ ಗ್ರಾಹಕನೇ ಸುರಕ್ಷಿತ ಗ್ರಾಹಕ” ಎಂಬ ಸಂದೇಶವನ್ನು ಪ್ರತಿಯೊಬ್ಬರಿಗೂ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆಹಾರ, ಔಷಧಿ, ಶಿಕ್ಷಣ, ಆರೋಗ್ಯ, ಬ್ಯಾಂಕಿoಗ್, ವಿಮೆ, ಆನ್‌ಲೈನ್ ಸೇವೆಗಳು ಸೇರಿದಂತೆ ನಾವು ಪಡೆಯುವ ಪ್ರತಿಯೊಂದು ಸೇವೆ ಮತ್ತು ವಸ್ತುವಿನಲ್ಲೂ ಗ್ರಾಹಕರ ಹಕ್ಕುಗಳು ರಕ್ಷಿಸಲ್ಪಡಬೇಕು. ಆದರೆ ಜಾಗೃತಿಯ ಕೊರತೆಯಿಂದ ಅನೇಕರು ಮೋಸಕ್ಕೆ ಒಳಗಾಗುತ್ತಿದ್ದಾರೆ. ಪ್ರತಿಯೊಬ್ಬ ಗ್ರಾಹಕ ಜಾಗೃತನಾದಾಗ ಮಾತ್ರ ವಂಚನೆಯಿoದ ತಪ್ಪಿಸಿಕೊಳ್ಳಬಹುದು ಎಂದು ಸೋಮಶೇಖರ್ ವಿ.ಕೆ ತಿಳಿಸಿದರು. ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಬಿ.ಪಿ.ಕೃಷ್ಣಮೂರ್ತಿ ಅವರು ಉಪನ್ಯಾಸ ನೀಡಿ ಹಣ ನೀಡಿ ವಸ್ತುಗಳನ್ನು ಖರೀದಿಸುವ ಗ್ರಾಹಕನಿಗೆ ಗುಣಮಟ್ಟ ಪರಿಶೀಲಿಸುವ, ಬೆಲೆಯ ಬಗ್ಗೆ ಖಾತ್ರಿ ಪಡಿಸಿಕೊಳ್ಳುವ ಅಥವಾ ವಂಚನೆಗೆ ಒಳಗಾದಾಗ ಸಂಬAಧಪಟ್ಟ ಇಲಾಖೆಗೆ ದೂರು ನೀಡುವ ಹಕ್ಕಿದೆ. ಇದು ಕೇವಲ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಮತ್ತು ಅಧಿಕಾರವೂ ಆಗಿದೆ ಎಂದರು.
ಖರೀದಿಸಿದ ವಸ್ತುವನ್ನು, ಅದರ ಮೇಲೆ ಬರೆದಿರುವ ಬೆಲೆಯನ್ನು, ತೆರಿಗೆಯನ್ನು, ದಿನಾಂಕವನ್ನು, ಗುಣಮಟ್ಟವನ್ನು ಪರಿಶೀಲಿಸಬೇಕು. ಇಂದು ಪ್ಯಾಕೇಜ್, ಟ್ಯಾರಿಫ್ ಯುಗದಲ್ಲಿ ನಾವಿದ್ದೇವೆ, ದೂರ ಸಂಪರ್ಕ ವ್ಯವಸ್ಥೆಯಲ್ಲಿ ಇದು ಹೆಚ್ಚು ಬಳಕೆಯಾಗುತ್ತದೆ. ಇವುಗಳ ಬಗ್ಗೆ ಕೂಡ ಗ್ರಾಹಕರು ಜಾಗೃತರಾಗಬೇಕು ಎಂದ ಅವರು, ಗ್ರಾಹಕರ ಜವಾಬ್ದಾರಿ, ಟೆಲಿಕಾಂ ಮತ್ತು ಬ್ರಾಡ್‌ಕಾಸ್ಟಿಂಗ್ ನಲ್ಲಿ ಶುಲ್ಕ ಹಾಗೂ ಬಿಲ್ಲಿಂಗ್ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ ಸಂಶೋಧನಾ ಅಧಿಕಾರಿ ಕೆ.ಮುರುಳೀಧರ, ಸರಕಾರಿ ಪಿಯು ಕಾಲೇಜು ಉಪ ಪ್ರಾಂಶುಪಾಲ ಚಿದಾನಂದ, ಜಿಯೋ ಸಂಸ್ಥೆಯ ಪ್ರಮುಖರಾದ ಶರತ್, ಆತ್ಮಾನಂದ, ಏರ್‌ಟೆಲ್ ಸಂಸ್ಥೆಯ ನಾಗಪ್ಪ, ಬಿಎಸ್‌ಎನ್‌ಎಲ್ ನ ಅಧಿಕಾರಿ ಸರ್ಪರಾಜ್ ಆಲಂ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.