Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ : ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡಕ್ಕೆ ಚಾಂಪಿಯನ್ ಪಟ್ಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ : ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡಕ್ಕೆ ಚಾಂಪಿಯನ್ ಪಟ್ಟ*

ಜುಲೈ 21, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.21 : ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಹ್ಯಾಂಡ್ ಬಾಲ್‌ನ ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ನಾಟಿ ಬಾಯ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟ ಪಂದ್ಯದಲ್ಲಿ ಕಿಶೋರ್ ರೈ ನಾಯಕತ್ವದ ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಲೀಗ್ ಮಾದರಿಯಲ್ಲಿ ನಾಟಿ ಬಾಯ್ಸ, ಯಂಗ್ ಸ್ಪೈಡರ್ಸ್, ಮಡ್ ಕಮಾಂಡೋಸ್, ಮಡ್ ಫೀಲ್ಡರ್ಸ್, ಮಡ್ ಬಾಯ್ಸ,  ರೈತ ಮಕ್ಕಳು ಸೇರಿದಂತೆ 6 ತಂಡಗಳು ಸೆಣಸಾಟ ನಡೆಸಿತ್ತು.ನಂತರ ನಡೆದ 40 ವರ್ಷ ವಯಸ್ಸಿನೊಳಗಿನವರ ವಿಭಾಗದಲ್ಲಿ ನಡೆದ ಓಟದ ಸ್ಪರ್ಧೆಯಲ್ಲಿ ಇಸ್ಮಾಯಿಲ್ ಕಂಡಕರೆ(ಪ್ರ), ದಿವಾಕರ್(ಜಾಕಿ)(ದ್ವಿ), ಸವಾದ್ ಉಸ್ಮಾನ್ ತೃತೀಯ ಸ್ಥಾನ ಪಡೆದರು. 40 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ನಡೆದ ಗೋಪಾಲ್ ಸೋಮಯ್ಯ(ಪ್ರ), ಚೆನ್ನನಾಯಕ್(ದ್ವಿ), ಚೀರಂಡ ಚಂಗಪ್ಪ ತೃತೀಯ ಸ್ಥಾನಪಡೆದರು.ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕ ದಿನೇಶ್, ರಕ್ಷಿತ್ ಕಟ್ರತನ, ದೇವಂಗೋಡಿ ಜಿತು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರೆ, ಬಾಚರಣಿಯಂಡ ಶಶಾಂಕ್ ಸೋಮಯ್ಯ, ಶ್ರುತನ್ ಸುಬ್ಬಯ್ಯ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದರು. ಪ್ರದರ್ಶನ ಪಂದ್ಯ: ಉದ್ಘಾಟನಾ ಕಾರ್ಯಕ್ರಮದ ನಂತರ ಪತ್ರಕರ್ತರು ಮತ್ತು ಫಾರ್ಮರ್ಸ್ ಕ್ಲಬ್ ನಡುವೆ ನಡೆದ ಹಗ್ಗಜಗ್ಗಾಟದ ಪ್ರದರ್ಶನ ಪಂದ್ಯದಲ್ಲಿ ಫಾರ್ಮರ್ಸ್ ಕ್ಲಬ್ ತಂಡ ಗೆಲುವು ಸಾಧಿಸಿತು. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಯಿತು.ಸಮಾರೋಪ ಸಮಾರಂಭ: ತಾಳತ್ತಮನೆಯ ಸಮೀಪದ ಸ್ವಾಗತ್ ಕನ್ವೆಷನಲ್ ಹಾಲ್‌ನಲ್ಲಿ ನಡೆದ ಸಮಾರೋಪ ಸಮಾರಂಭ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ ಮಾತನಾಡಿ, ಸಮಾಜದ ಒಳಿತು-ಕೆಡುಕುಗಳನ್ನು ಜನರ ಮುಂದಿಡುವ ಮೂಲಕ ಪತ್ರಕರ್ತರು ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ನಿರಂತರ ಕೆಲಸದ ಒತ್ತಡದ ನಡುವೆಯೂ ಕ್ರೀಡಾಕೂಟಗಳು ಮನೋಲ್ಲಾಸ ನೀಡುತ್ತವೆ ಎಂದು ಹೇಳಿದರು. ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಅವರು ಮಾತನಾಡಿ, ಸುದ್ದಿ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾಂಗಣದಲ್ಲೂ ಪತ್ರಕರ್ತರು ಪ್ರತಿಭೆ ತೋರಿಸುತ್ತಿರುವುದು ಶ್ಲಾಘನೀಯ ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ ಮಾತನಾಡಿ, ವೃತ್ತಿ ಬದುಕಿನ ಒತ್ತಡ ಮರೆತು, ವರ್ಷಕ್ಕೊಮ್ಮೆ ಇಂತಹ ಕ್ರೀಡಾಕೂಟಗಳಲ್ಲಿ ಪತ್ರಕರ್ತರು ತಪ್ಪದೇ ಭಾಗವಹಿಸಬೇಕೆಂದು ಹೇಳಿದರು.ಕಾಂಗ್ರೆಸ್ ಮುಖಂಡ ಜಾನ್ಸನ್ ಪಿಂಟೋ ಮಾತನಾಡಿ, ಪ್ರಕೃತಿ ವಿಕೋಪ ಮತ್ತು ಕೋವಿಡ್‌ಂತಹ ಸಂಕಷ್ಟದ ಸಂದರ್ಭಗಳಲ್ಲೂ ಕೊಡಗಿನ ಪತ್ರಕರ್ತರು ಜನಪರವಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ, ಮಲ್ಲನ ಆನಂದ್, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಮತ್ತು ಸಂಚಾಲಕರಾದ ಆರ್.ಆರ್.ಮುನೋಜ್ ಇದ್ದರು. ಕೊಡಗು ಪ್ರೆಸ್ ಕ್ಲಬ್‌ನ ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜ ಸ್ವಾಗತಿಸಿದರೆ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಎಚ್.ಜೆ.ರಾಕೇಶ್ ನಿರೂಪಿಸಿ, ವಂದಿಸಿದರು. ಕ್ರೀಡಾಕೂಟಗಳು ಬಾಂಧವ್ಯವನ್ನು ವೃದ್ಧಿಸುತ್ತದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ ಹೇಳಿದರು. ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುದ್ದಿಯ ಜಂಜಾಟದ ನಡುವೆ ಪತ್ರಕರ್ತರ ಜೀವನ ಸದಾ ಒತ್ತಡದಿಂದ ಕೂಡಿರುತ್ತದೆ. ಇಂತಹ ಕ್ರೀಡಾಕೂಟಗಳು ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುತ್ತವೆ. ಆಟವಾಡುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಣ್ಣ ನಿರ್ಲಕ್ಷ್ಯವೂ ಗಾಯಕ್ಕೆ ಕಾರಣವಾಗಿ ಜೀವನಪರ್ಯಂತ ನೋವು ಅನುಭವಿಸುವಂತಾಗಬಹುದು. ಆದ್ರಿಂದ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ತಾಳತ್ತಮನೆ ಫಾರ್ಮರ್ಸ್ ಕ್ಲಬ್ ಅಧ್ಯಕ್ಷ ಜನನ್ ಪೊನ್ನೆಟ್ಟಿ ಮಾತನಾಡಿ, ತಾಳತ್ತಮನೆಯಲ್ಲಿ ಈ ಕ್ರೀಡಾಕೂಟ ನಡೆಸುತ್ತಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದರು. ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಮಳೆಯ ನಡುವೆಯೂ ಕೆಸರುಗದ್ದೆ ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಫಾರ್ಮರ್ಸ್ ಕ್ಲಬ್‌ನ ಯುವಕರು ಉತ್ತಮ ಸಹಕಾರ ನೀಡಿದ್ದು, ಗದ್ದೆ ಸಿದ್ಧಪಡಿಸುವುದರಿಂದ ಹಿಡಿದು ಆಯೋಜನೆಯ ವಿವಿಧ ಕೆಲಸಗಳಲ್ಲಿ ಕೈಜೋಡಿಸಿದ್ದಾರೆ ಎಂದರು. ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕ ಹಾಗೂ ತೀರ್ಪುಗಾರರಾದ ದಿನೇಶ್ ಮಾತನಾಡಿದರು. ಸಮಾಜ ಸೇವಕ ಹಾಗೂ ಬೆಳೆಗಾರರಾದ ಮಲ್ಲನ ಆನಂದ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ವಿಶಾಲ್ ಮಾರ್ಟ್ ವ್ಯವಸ್ಥಾಪಕ ಕೆ.ಕೆ.ಗಿರೀಶ್, ಬೆಳೆಗಾರ ಚೆರಿಯಮನೆ ಪ್ರಸಾದ್, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರದಾನ ಕಾರ್ಯದರ್ಶಿ ರಾಕೇಶ್, ಕ್ರೀಡಾ ಸಂಚಾಲಕ ಸಂತೋಷ್ ರೈ, ಸ್ಟ್ಯಾನ್ಲಿ ಡೇವಿಡ್ ಉಪಸ್ಥಿತರಿದ್ದರು. ಕೊಡಗು ಪ್ರೆಸ್ ಕ್ಲಬ್‌ನ ನಿದೇರ್ಶಕ ಸಿಂಗಿ ಸತೀಶ್ ಪ್ರಾರ್ಥಿಸಿದರೆ, ಸದಸ್ಯ ಚಂದ್ರಮೋಹನ್ ಸ್ವಾಗತಿಸಿದರು. ಕೊಡಗು ಪ್ರೆಸ್ ಕ್ಲಬ್‌ನ ಸದಸ್ಯ ಕಿಶೋರ್ ರೈ ನಿರೂಪಿಸಿ, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಆರ್.ಆರ್. ಮನೋಜ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.