
ಮಡಿಕೇರಿ NEWS DESK ಜು.21 : ವಿರಾಜಪೇಟೆ ಕ್ಷೇತ್ರದ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಬಿಜೆಪಿ ದುರಸ್ತಿ ಹಂತದ ರಸ್ತೆಗಳಲ್ಲಿ ಬಾಳೆಗಿಡ ನೆಟ್ಟು ರಾಜಕೀಯ ಪ್ರೇರಿತ ಪ್ರತಿಭಟನೆ ನಡೆಸಿದೆ ಎಂದು ಭಾಗಮಂಡಲ ವಲಯ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಅವರು ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆಯನ್ನು ಗಳಿಸುತ್ತಿರುವ ಶಾಸಕರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವಾಗಿ ಭಾಗಮಂಡಲದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ ಎಂದು ಟೀಕಿಸಿದರು. ಕಳೆದ 20 ವರ್ಷಗಳಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕೇವಲ 3 ವರ್ಷಗಳಲ್ಲಿ ನಡೆದಿದೆ. ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿದ್ದ ಮೇಲು ಸೇತುವೆ ಯೋಜನೆ ಎ.ಎಸ್.ಪೊನ್ನಣ್ಣ ಅವರು ಶಾಸಕರಾದ ನಂತರ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಭಾಗಮಂಡಲ ಸುತ್ತಮುತ್ತಲ ಗ್ರಾಮಗಳಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ರಸ್ತೆಗಳು ಅಭಿವೃದ್ಧಿಯಾಗಿವೆ, ತಡೆಗೋಡೆ ಮತ್ತು ಕಾಂಕ್ರೀಟ್ ರಸ್ತೆಗಳು ನಿರ್ಮಾಣಗೊಂಡಿವೆ. ಬಿಜೆಪಿ ಪ್ರತಿಭಟನೆ ನಡೆಸಿದ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ದುರಸ್ತಿಯ ಹಂತದಲ್ಲಿದೆ. ಇದೇ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿರುವುದು ಅರ್ಥಹೀನ ಎಂದರು. ಭಾಗಮAಡಲ- ನಾಪೋಕ್ಲು ರಸ್ತೆಯ ಅಭಿವೃದ್ಧಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಳೆಗಾಲದ ನಂತರ ಕಾಮಗಾರಿ ಆರಂಭಗೊಳ್ಳಲಿದೆ. ತೀರ್ಥಕ್ಷೇತ್ರ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ. ಅರ್ಚಕರಿಗಾಗಿ ವಸತಿ ಗೃಹಗಳು ನಿರ್ಮಾಣಗೊಳ್ಳಲಿದೆ, ವರ್ತಕರಿಗಾಗಿ ವ್ಯಾಪಾರ ಮಳಿಗೆಗಳ ನಿರ್ಮಾಣ ಕಾರ್ಯದ ಯೋಜನೆ ರೂಪಿಸಲಾಗಿದೆ. ಹಂತ ಹಂತವಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಶಾಸಕರು ಕೋಟ್ಯಾಂತರ ಅನುದಾನವನ್ನು ತಂದಿದ್ದಾರೆ. ಇದಕ್ಕೆ ನಮ್ಮ ಬಳಿ ಸೂಕ್ತ ದಾಖಲೆಗಳಿವೆ. ಕಳೆದ ಮೂರು ವರ್ಷಗಳಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಶಾಸಕರ ವಿರುದ್ಧ ಬಿಜೆಪಿ ಹುರುಳಿಲ್ಲದ ಆರೋಪ ಮಾಡುತ್ತಿದೆ ಎಂದು ಕೋಳಿಬೈಲು ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಸುನಿಲ್ ಪತ್ರಾವೋ ಅವರು ಮಾತನಾಡಿ ಸುದೀರ್ಘ ಕಾಲ ಶಾಸಕರಾಗಿದ್ದವರು ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ ಮೂರು ವರ್ಷಗಳಲ್ಲಿ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದಾರೆ. ಸ್ಥಗಿತಗೊಂಡಿದ್ದ ಭಾಗಮಂಡಲದ ಮೇಲು ಸೇತುವೆ ಯೋಜನೆಯನ್ನು ಪೊನ್ನಣ್ಣ ಅವರು ಪೂರ್ಣಗೊಳಿಸಿದ್ದಾರೆ, ತ್ರಿವೇಣಿ ಸಂಗಮಕ್ಕೆ ರಾಜಕಳೆಯನ್ನು ತಂದು ಕೊಟ್ಟಿದ್ದಾರೆ. ಆದರೂ ಅಭಿವೃದ್ಧಿ ವಿರೋಧಿಗಳು ಭಾಗಮಂಡಲದಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿದರು. ಚುನಾವಣೆಗೆ ಕೇವಲ ಎರಡು ವರ್ಷ ಉಳಿದಿರುವ ಹಿನ್ನೆಲೆಯಲ್ಲಿ ಜನರ ಹಾದಿ ತಪ್ಪಿಸುವ ಉದ್ದೇಶದಿಂದ ಬಿಜೆಪಿ ರಾಜಕೀಯ ಪ್ರೇರಿತವಾಗಿ ಶಾಸಕರ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಸ್ವತ: ಬಿಜೆಪಿ ಕಾರ್ಯಕರ್ತರೇ ಶಾಸಕರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಬಿಜೆಪಿ ತಮ್ಮ ಕಾರ್ಯಕರ್ತರುಗಳನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಅರ್ಥಹೀನ ಪ್ರತಿಭಟನೆಯನ್ನು ನಡೆಸಿದೆ ಎಂದರು. ಭಾಗಮ0ಡಲ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ಸರಕಾದಿಂದ 3 ಕೋಟಿ ರೂ. ಅನುದಾನ ಬಂದಿದ್ದು, ಅಕ್ಟೋಬರ್ ತಿಂಗಳಿನಿ0ದ ರಸ್ತೆ ಕಾಮಗಾರಿ ನಡೆಯಲಿದೆ. ಕಳೆದ 20 ವರ್ಷಗಳಲ್ಲಿ ನಡೆಯದ ಅಭಿವೃದ್ಧಿ ಕೇವಲ 3 ವರ್ಷಗಳಲ್ಲಿ ನಡೆದಿದೆ, ಇದಕ್ಕೆ ಸಂಬ0ಧಿಸಿದ ಅಗತ್ಯ ದಾಖಲೆ ನಮ್ಮ ಬಳಿ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಭಾಗಮಂಡಲ ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೌರೀಶ್ ರೈ ಹಾಗೂ ನಾಪೋಕ್ಲು ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೋಡಿ ಉಪಸ್ಥಿತರಿದ್ದರು.









