Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*
  • *ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*
  • *ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*
  • *ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ* 
  • *ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 
  • *ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*
  • *ಮಡಿಕೇರಿ : ಕಾನೂನು ಸೇವಾ ಪ್ರಾಧಿಕಾರದಿಂದ ದುರ್ಬಲರಿಗೆ ಕಾನೂನು ನೆರವು : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ-ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯಿಂದ ಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಅಂತಿಮ ವರ್ಷದ ಫಲಿತಾಂಶ ಪ್ರಕಟ*
  • *ಕುಶಾಲನಗರ, ಸೋಮವಾರಪೇಟೆ ಆಸ್ಪತ್ರೆ ಅಭಿವೃದ್ಧಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 

ಜುಲೈ 22, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, ಜು.22 NEWS DESK :  ನಾವು ಮಾನವ ಸೇರಿದಂತೆ ಎಲ್ಲಾ ಜೀವಿಗಳ ಅಗತ್ಯತೆಗಳನ್ನು ಪೂರೈಸಲು ಮತ್ತು ಮುಂದಿನ ಭವಿಷ್ಯದ ಬಳಕೆಗಾಗಿ ನೀರನ್ನು ಉಳಿಸುವ ಅಭ್ಯಾಸವನ್ನು ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ. ಈ ದಿಸೆಯಲ್ಲಿ ನಾವು ವೈಜ್ಞಾನಿಕ ಕ್ರಮದಲ್ಲಿ ನೀರಿನ ಸಂರಕ್ಷಣೆಗೆ‌ ವಿಶೇಷ ಗಮನಹರಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆದ ಪರಿಸರ ಕಾರ್ಯಕ್ರಮಗಳ ಸಂಘಟಕರೂ ಆದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ವತಿಯಿಂದ ಸುಂಟಿಕೊಪ್ಪ ಹೋಬಳಿಯ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಮತ್ತು ಪಾವನಿ ಇಕೋ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಆವಿಷ್ಕಾರ ಸಪ್ತಾಹ: 2026 ಅಂಗವಾಗಿ “ನೀರಿನ ಸಂರಕ್ಷಣೆ” ಕುರಿತು ಏರ್ಪಡಿಸಿದ್ದ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ “ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ” ಕುರಿತು ಮಾಹಿತಿ ನೀಡಿದರು. ನಾವು ಯಾವುದೇ ಸಂದರ್ಭದಲ್ಲೂ ನೀರನ್ನು ಪೋಲು ಮಾಡದೇ ನೀರನ್ನು ಮಿತ ಬಳಕೆ ಮಾಡುವ ಮೂಲಕ ನೀರಿನ ಯಥಾಸ್ಥಿತಿ ಕಾಪಾಡುವ ದಿಸೆಯಲ್ಲಿ ಜನರಲ್ಲಿ ನೀರಿನ ಸಂರಕ್ಷಣೆ ಮತ್ತು ಪರಿಸರ ಕಾಳಜಿ ಬಗ್ಗೆ ಜಾಗತಿ ಮೂಡಿಸುವ ದಿಸೆಯಲ್ಲಿ ಇಂತಹ ಜಾಗೃತಿ ಅಭಿಯಾನ ಸಂಘಟಿಸಲಾಗಿದೆ ಎಂದರು. ನೀರು ಅಮೂಲ್ಯವಾಗಿದ್ದು, ಉಳಿಸಿ ಬಳಸುವುದು ಅತೀ ಮುಖ್ಯ. ನೀರಿನ ಮಿತ ಬಳಕೆಯಿಂದ ಮಾನವನ ಉಳಿವು ಸಾಧ್ಯ. ನೀರಿನ ಮಿತಬಳಕೆ ಮತ್ತು ಮರು ಬಳಕೆಯಲ್ಲಿ ಎಲ್ಲರೂ ಪಾಲ್ಗೊಂಡು ನಾಳೆಯ ಉತ್ತಮ ಭವಿಷ್ಯಕ್ಕಾಗಿ ನೀರನ್ನು ಸಂರಕ್ಷಿಸಲು ಸಂಕಲ್ಪ ಮಾಡಬೇಕು ಎಂದು ಪ್ರೇಮಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನೀರಿನ ಸಂರಕ್ಷಣೆ ಎಂದರೆ ನಮ್ಮ ಶುದ್ಧ ನೀರಿನ ಸಂಪನ್ಮೂಲಗಳನ್ನು ಅತ್ಯಂತ ಸುಸ್ಥಿರ ರೀತಿಯಲ್ಲಿ ನಿರ್ವಹಿಸುವ ಮೂಲಕ ಮತ್ತು
ಶುದ್ಧ ನೀರಿನ ಲಭ್ಯತೆಯ ಆಧಾರದ ಮೇಲೆ ಭವಿಷ್ಯದ ನೀರಿನ ಬೇಡಿಕೆಗಳನ್ನು ಪೂರೈಸಲು ಜಲಗೋಳವನ್ನು ರಕ್ಷಿಸುವ ವಿಧಾನ ಎಂದರು. ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ (RAA) ವು ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಶಾಲಾ ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವ ಗುರಿ ಹೊಂದಿದ್ದು, ಅವರಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವದೊಂದಿಗೆ ಅವರಲ್ಲಿ ಸಂಶೋಧನಾ ಪ್ರವೃತ್ತಿ ಮತ್ತು ಪ್ರೋತ್ಸಾಹ ಬೆಳೆಸಲು ಉತ್ತೇಜಿಸಲಾಗುತ್ತಿದೆ ಎಂದು ಟಿ.ಜಿ.ಪ್ರೇಮಕುಮಾರ್ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಸೋಮಯ್ಯ ಮಾತನಾಡಿ, ನೀರನ್ನು ಸಂರಕ್ಷಣೆ ಮಾಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಎಲ್ಲರೂ ಇದರಲ್ಲಿ ಭಾಗಿಯಾಗುವ ಮೂಲಕ ನೀರನ್ನು ಉಳಿಸಲು ಪಣ ತೊಡಬೇಕು ಎಂದರು. ತಮ್ಮನ್ನು ಸದಾ ಪರಿಸರ ಸಂರಕ್ಷಣಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವ ಪರಿಸರ ಪ್ರೇಮಿ ಟಿ.ಜಿ.ಪ್ರೇಮಕುಮಾರ್ ಅವರು ಹಮ್ಮಿಕೊಳ್ಳುವ ಪರಿಸರ ಜಾಗೃತಿ ಕಾರ್ಯಕ್ರಮಗಳಿಗೆ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. :: ಜಲ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ::  ಜಲ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದ ಟಿ.ಜಿ.ಪ್ರೇಮಕುಮಾರ್, ನೀರಿನ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳು
ಕೈಗೊಳ್ಳಬೇಕಾದ ದೃಢ ಸಂಕಲ್ಪ ಕುರಿತು ವಿವರ ಮಾಹಿತಿ ನೀಡಿದರು. ಮಡಿಕೇರಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಎನ್.ಪಿ.ನವೀನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಪ್ರತಿನಿತ್ಯ ಉತ್ತಮ ಪರಿಸರ ಹವ್ಯಾಸ ಚಟುವಟಿಕೆಗಳಲ್ಲಿ ಪಾಲ್ಹೊಂಡು ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು. ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಎಂ.ರಮೇಶ್ ಮಾತನಾಡಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಎಚ್.ಪಿ. ಸೈದಾಲವಿ, ಪಾವನಿ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಡಿ.ಯು.ಬಿಂದುಕುಮಾರಿ, ಶಿಕ್ಷಕರಾದ ಕೆ.ಬಿ.ರಾಧಾಕೃಷ್ಣ, ಪಿ.ಎಚ್ .ರಜಿಯಾ, ಆರ್.ಯಶೋರಾಣಿ, ಕೆ. ಎಚ್ . ಗಾಯಿತ್ರಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ
ದೇಲಂಪಾಡಿ ಎಂ.ಚಿನ್ನಪ್ಪ, ಅತಿಥಿ ಶಿಕ್ಷಕರಾದ ಪಿ ಆರ್ .ವಿಮಲಾ, ಎನ್. ಪಿ. ವಾಣಿಶ್ರೀ ಇದ್ದರು. ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. :: ಪರಿಸರಕ್ಕಾಗಿ ನಾವು : ಸಂಭ್ರಮ ::  ಇದೇ ವೇಳೆ “ನಮ್ಮ ನಡೆ ಹಸಿರೆಡೆಗೆ” : “ಪರಿಸರಕ್ಕಾಗಿ ನಾವು” ಕಾರ್ಯಕ್ರಮ: ದಡಿ ಮಕ್ಕಳ ಪರಿಸರ ಸಂಭ್ರಮ: 2026 ರ ಅಂಗವಾಗಿ ವಿದ್ಯಾರ್ಥಿಗಳು ನೆಲ- ಜಲ, ಪರಿಸರ, ಜೀವ- ವೈವಿಧ್ಯ ಹಾಗೂ ಜಲ ಸಂರಕ್ಷಣೆ ಕುರಿತು ಮಾಹಿತಿ ನೀಡುವ ಫಲಕಗಳು ಹಾಗೂ ಘೋಷ ವಾಕ್ಯ ಹಿಡಿದಿದ್ದ ವಿದ್ಯಾರ್ಥಿಗಳು ಶಾಲಾ ಅಂಗಳದಲ್ಲಿ ಹೆಜ್ಜೆ ಹಾಕಿ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಹಸಿರೇ ಉಸಿರು- ಜಲವೇ ಜೀವಜಲ, ಉಳಿಸಿರಿ ಅಂತರ್ಜಲ , ಕುಡಿಯಿರಿ ಶುದ್ಧಜಲ,‌ ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಮೊಳಗಿಸಿ ಗ್ರಾಮದಲ್ಲಿ ಜನಜಾಗೃತಿ ಮೂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 2026

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026

*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*

ಜುಲೈ 22, 2026

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜು.22 NEWS DESK : ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜಿನ 2026-2027ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ…

*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*

ಜುಲೈ 22, 2026

*ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ* 

ಜುಲೈ 22, 2026

*ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 

ಜುಲೈ 22, 2026

*ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*

ಜುಲೈ 22, 2026

*ಮಡಿಕೇರಿ : ಕಾನೂನು ಸೇವಾ ಪ್ರಾಧಿಕಾರದಿಂದ ದುರ್ಬಲರಿಗೆ ಕಾನೂನು ನೆರವು : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜುಲೈ 22, 2026

*ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ-ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯಿಂದ ಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ*

ಜುಲೈ 22, 2026

*ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಅಂತಿಮ ವರ್ಷದ ಫಲಿತಾಂಶ ಪ್ರಕಟ*

ಜುಲೈ 22, 2026

*ಕುಶಾಲನಗರ, ಸೋಮವಾರಪೇಟೆ ಆಸ್ಪತ್ರೆ ಅಭಿವೃದ್ಧಿ*

ಜುಲೈ 22, 2026

*ದುರ್ಬಲರಿಗೆ ಕಾನೂನು ನೆರವು : ಜೀವನ ಎಂಬುವುದು ಸದಾ ಸಂತೋಷದಿಂದ ಇರುವುದಿಲ್ಲ. ಎಲ್ಲರ ಜೀವನದಲ್ಲಿಯೂ ಏರಿಳಿತ ಇರುತ್ತದೆ ಇಂತಹ ಸಂದರ್ಭ ಧೈರ್ಯದಿಂದ ಬದುಕು ಎದುರಿಸಬೇಕು*

ಜುಲೈ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.