Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.24 NEWS DESK : ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ `ಮೈ ಭಾರತ್’ ಕಾರ್ಯಕ್ರಮದ ಬಗ್ಗೆ ಯುವ ಜನತೆಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನರಿಗಾಗಿ ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ, ನಾಯಕತ್ವ ಶಿಬಿರಗಳು ಹಾಗೂ ಉದ್ಯಮಶೀಲತಾ ಕಾರ್ಯಾಗಾರ ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾಧಿಕಾರಿಗಳು, ‘ಮೈ ಭಾರತ್’ ಡಿಜಿಟಲ್ ವೇದಿಕೆಯ ಮೂಲಕ ಜಿಲ್ಲೆಯ ಯುವಕ-ಯುವತಿಯರು ಸರ್ಕಾರದ ವಿವಿಧ ಇಲಾಖೆಗಳ ಯುವ ಕಲ್ಯಾಣ ಯೋಜನೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಸ್ವಯಂಸೇವಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಯುವಕರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಕಾಲೇಜುಗಳು, ಯುವಕ ಮಂಡಲಗಳು, ಕಾಲೇಜು ವಿದ್ಯಾರ್ಥಿಗಳು ಗರಿಷ್ಠ ಸಂಖ್ಯೆಯಲ್ಲಿ ಮೈ ಭಾರತ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಲು ವ್ಯಾಪಕ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆಗಳು ಒಂದಾಗಿ ಮೈ ಭಾರತ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚಿಸಿದರು. ಜಿಲ್ಲಾ ಯೂತ್ ಘಟಕ ಅಧಿಕಾರಿ ಅಖಿಲ್ ಅವರು ಮಾತನಾಡಿ, ಹಿಂದೆ ನೆಹರು ಯುವ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದ್ದ ‘ಮೈ ಭಾರತ್’ (ಮೇರಾ ಯುವ ಭಾರತ್) ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ. ಇದು ಸ್ವಯಂ ಸೇವಕತೆ, ಅನುಭವದ ಕಲಿಕೆ, ನಾಯಕತ್ವ ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಭಾಗವಹಿಸುವಿಕೆ ಉತ್ತೇಜಿಸಲು ತಂತ್ರಜ್ಞಾನ-ಸಕ್ರಿಯಗೊಳಿಸಿದ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು. ಮೈ ಭಾರತ್ ಕಾರ್ಯಕ್ರಮದ 2026-27ನೇ ಸಾಲಿನ ವಾರ್ಷಿಕ ಕ್ರೀಯಾ ಯೋಜನಯ ಬಗ್ಗೆ ಮಾಹಿತಿ ನೀಡಿ, ಜಾಗೃತಿ ಅಭಿಯಾನಗಳು, ಸ್ವಚ್ಛತಾ ಅಭಿಯಾನಗಳು, ಯೋಗ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯ ಮೂಲಕ ಯುವಜನರನ್ನು ವಿಕ್ಷಿತ್ ಭಾರತ @2047 ರ ದೃಷ್ಟಿಕೋನದತ್ತ ಸಜ್ಜುಗೊಳಿಸಲು ವಿಕ್ಷಿತ್ ಭಾರತ್ ಪಾದಯಾತ್ರೆ ಕಾರ್ಯಕ್ರಮವು ಪ್ರಯತ್ನಿಸುತ್ತದೆ. ಇದು ನಾಗರಿಕ ಜವಾಬ್ದಾರಿಯನ್ನು ಬಲಪಡಿಸುತ್ತದೆ, ಯುವಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತದೆ ಎಂದರು. ಅಸ್ತಿತ್ವದಲ್ಲಿರುವ ಯುವ ಕ್ಲಬ್‍ಗಳನ್ನು ಬಲಪಡಿಸಲು, ಹೊಸ ಯುವ ಕ್ಲಬ್‍ಗಳ ರಚನೆಯನ್ನು ಸುಗಮಗೊಳಿಸಲು, ಮೈ ಭಾರತ್ ಪೋರ್ಟಲ್ ನಲ್ಲಿ ಯುವಕರ ನೋಂದಣಿಯನ್ನು ಉತ್ತೇಜಿಸಲು ಯೂತ್ ಕ್ಲಬ್ ಅಭಿವೃದ್ಧಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮೈ ಭಾರತ್ ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳಲು ಗಮನ ಸೆಳೆಯುವಂತೆ ತಿಳಿಸಿದರು. ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ.ರವಿ ಶಂಕರ್ ಅವರು ಮಾತನಾಡಿ, ಕೊಡಗು ವಿಶ್ವವಿದ್ಯಾನಿಲಕ್ಕೆ 24 ಕಾಲೇಜುಗಳು ಒಳಪಟ್ಟಿದ್ದು, ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳನ್ನು ಒಳಗೊಂಡು ಕಾರ್ಯಕ್ರಮವನ್ನು ರೂಪಿಸುವಂತೆ ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಅವರು ಮಾತನಾಡಿ, ಮೈ ಭಾರತ್ ಕಾರ್ಯಕ್ರಮ ಮನೆಮನೆಗೆ ತಲುಪಿಸಬೇಕು, ಗ್ರಾಮೀಣ ಪ್ರದೇಶದಲ್ಲೂ ಈ ಬಗ್ಗೆ ಜಾಗೃತಿ ಮೂಡಬೇಕು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಟ್ಸ್ ವಿದ್ಯಾರ್ಥಿಗಳಿಗೆ ಮೈ ಭಾರತ್ ನಿಂದ ಕಾರ್ಯಕ್ರಮ ರೂಪಿಸುವಂತೆ ತಿಳಿಸಿದರು. ಜಿಲ್ಲಾ ಯೂತ್ ಅಧಿಕಾರಿ ಅಖಿಲ್ ಅವರು ಮಾತನಾಡಿ, ಕಾಲೇಜುಗಳ ಸಹಕಾರದಲ್ಲಿ ಕಾರ್ಯಕ್ರಮವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಮಾದಕ ದ್ರವ್ಯ ಹಾಗೂ ವ್ಯಸನ ಮುಕ್ತ ಸಮಾಜವನ್ನು ನಿರ್ಮಿಸಲು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಜಾರಿಗೆ ತಂದಿರುವ ಅತ್ಯಂತ ಪ್ರಮುಖ ರಾಷ್ಟ್ರೀಯ ಆಂದೋಲನವಾಗಿದ್ದು, ಶಾಲೆ, ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯುವಕರಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜಿಸಲಾಗುವುದು ಎಂದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಡಿಡಿಪಿಯು ಗಣಪತಿ, ಪ್ರಾಂಶುಪಾಲರಾದ ವಿಜಯ್ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.