Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80 ರಷ್ಟು ಪೂರ್ಣಗೊಂಡಿದ್ದು, ಇದೇ ಜುಲೈ, 28 ರೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್‍ಐಆರ್ ಪ್ರಗತಿ ಸಂಬಂಧ ನೋಡಲ್ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‍ಐಆರ್ ಸಂಬಂಧ ಗಣತಿ ನಮೂನೆ ವಿತರಣಾ ಕಾರ್ಯವು ಶೇ.100 ರಷ್ಟು ಪೂರ್ಣಗೊಂಡಿದೆ. ಆದರೂ ಸಹ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆ ಪಡೆದು, ಡಿಜಟಲೀಕರಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಪ್ರತೀ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆಯನ್ನು ಪಡೆದು ಡಿಜಿಟಲೀಕರಣದ ಪ್ರಗತಿ ಸಾಧಿಸಬೇಕು. ಅರ್ಹ ಮತದಾರರು ಎಸ್‍ಐಆರ್ ಪ್ರಕ್ರಿಯೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ತಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಗಣತಿ ನಮೂನೆ ವಿತರಣೆ ಜೊತೆಗೆ ಡಿಜಿಟಲೀಕರಣ ಪ್ರಕ್ರಿಯೆಯು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಎಚ್ಚರಿಸಿದರು. ಎಸ್‍ಐಆರ್ ಪ್ರಕ್ರಿಯೆಯಲ್ಲಿ ಡಿಜಿಟಲೀಕರಣ ಮಾಡುವುದರ ಜೊತೆಗೆ ಗುಣಮಟ್ಟ ಪರೀಕ್ಷೆ ಮಾಡಬೇಕು. ಮತದಾರರು ಶಾಶ್ವತ ಸ್ಥಳಾಂತರ, ಮರಣ ಹೊಂದಿದ್ದಲ್ಲಿ, ಎರಡು ಕಡೆ ಹೆಸರು ಹೊಂದಿರುವ, ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದಿರುವ ಮತದಾರರ ಬಗ್ಗೆಯೂ ಸಹ ವಿಶೇಷ ಗಮನಹರಿಸಬೇಕು. ಈ ಸಂಬಂಧ ಜಿಲ್ಲೆಯಲ್ಲಿ 45,897 ಮಂದಿ ಮತದಾರರು ಇದ್ದು, ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ತಮ್ಮ ಹಂತದಲ್ಲಿ ಬಿಎಲ್‍ಒ ಮತ್ತು ಬಿಎಲ್‍ಎಗಳ ಸಭೆಯನ್ನು ಜೊತೆಗೂಡಿ ನಡೆಸಿ ಎಸ್‍ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಲ್ಲಿ ಶ್ರಮಿಸಬೇಕಿದೆ. ಎಲ್ಲರೂ ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮೃತಪಟ್ಟ ಮತದಾರರ ಸಂಖ್ಯೆಯು 12,323, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಸಂಖ್ಯೆ 24,676, ಎರಡು ಕಡೆ ಹೆಸರು ಹೊಂದಿರುವ ಮತದಾರರ ಸಂಖ್ಯೆ 3,484, ಗೈರು ಮತದಾರರ ಸಂಖ್ಯೆ 5,339, ಹಾಗೆಯೇ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದಿರುವ ಮತದಾರರ ಸಂಖ್ಯೆ 75 ಇದ್ದು, ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲೆಯಲ್ಲಿ 4,68,657 ಮತದಾರರು ಇದ್ದು, ಇಷ್ಟು ಮಂದಿ ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಇದರಲ್ಲಿ 3,68,524 ನಮೂನೆ ಡಿಜಿಟಲೀಕರಣವಾಗಿದ್ದು, ಮತ್ತಷ್ಟು ಪ್ರಗತಿಗೆ ಸೂಚಿಸಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಮತಗಟ್ಟೆ ಅಧಿಕಾರಿಯು ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಆಗಸ್ಟ್, 08 ರವರೆಗೆ ನಡೆಯಲಿದೆ. ಮತಗಟ್ಟೆ ಪುನರ್ ವಿಂಗಡಣೆ ಕಾರ್ಯಕ್ರಮವು ಆಗಸ್ಟ್, 08 ರಂದು ನಡೆಯಲಿದೆ. ಕರಡು ಮತದಾರರ ಪಟ್ಟಿಯು ಆಗಸ್ಟ್, 17 ರಂದು ಪ್ರಕಟವಾಗಲಿದೆ. ಮತದಾರರ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆಗಸ್ಟ್, 17 ರಿಂದ ಸೆಪ್ಟೆಂಬರ್, 16 ರವರೆಗೆ ಕಾಲಾವಕಾಶ ನೀಡಲಾಗಿದೆ. ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ತೀರುವಳಿಯು ಆಗಸ್ಟ್, 17 ರಿಂದ ಅಕ್ಟೋಬರ್, 15 ರವರೆಗೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್, 19 ರಂದು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ನೋಡಲ್ ಅಧಿಕಾರಿಗಳಾದ ಮಂಜುನಾಥ್, ಶೇಖರ್, ಭಾಸ್ಕರ್, ಎಚ್.ಆರ್.ರಮೇಶ್, ಮಿಲನ ಭರತ್, ಬಾಲಕೃಷ್ಣ ರೈ, ಆಶಾ, ಗೌರಿ, ಗಿರೀಶ, ಗೋಪಿ, ನಾಚಪ್ಪ, ವಿ.ಟಿ.ವಿಸ್ಮಯಿ, ಕೃಷ್ಣಪ್ರಸಾದ್, ಸಿದ್ದರಾಜು, ಚುನಾವಣಾ ಶಿರಸ್ತೆದಾರರಾದ ಮಹೇಶ್, ಅನಿಲ್ ಕುಮಾರ್ ಇತರರು ತಮ್ಮ ತಮ್ಮ ವ್ಯಾಪ್ತಿಯ ಡಿಜಿಟಲೀಕರಣ ಪ್ರಗತಿ ಸಂಬಂಧ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.