
ಮಡಿಕೇರಿ ಜು.25 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹಾರಂಗಿ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದ ಇಇ ಮಹೇಶ್, ಎಇಇ ಪುಟ್ಟಸ್ವಾಮಿ, ಎಇ ಕಿರಣ್ ದೇವಯ್ಯ ಇತರರು ಇದ್ದರು.









