
ಮಡಿಕೇರಿ NEWS DESK ಜು.26 : ಟ್ಯಾಂಕರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ದಕ್ಷಿಣ ಕೊಡಗಿನ ಗೋಣಿಕೊಪ್ಪಲು ಸಮೀಪದ ದೇವರಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಬನಶಂಕರಿ ಮೂಲದ ಗೋಕುಲ್ (24) ಹಾಗೂ ಚೇತನ್ (24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಕೇರಳಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಗೋಣಿಕೊಪ್ಪಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









