
ಮಡಿಕೇರಿ ಜು.30 NEWS DESK : ಗುರುಪೂರ್ಣಿಮೆ ಅಂಗವಾಗಿ ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಕಡ ಆರತಿ, ಗಣಪತಿ ಹೋಮ, ಬಾಬಾ ಮೂರ್ತಿಗೆ ಪಂಚಾಮೃತ ಅಭಿಷೇಕ ನೆರವೇರಿತು. ನಂತರ ಮೂಲ ವಿಗ್ರಹಕ್ಕೆ ಭಕ್ತಾದಿಗಳು ಕ್ಷೀರಾಭಿಷೇಕ ಜರುಗಿತು. ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲ ಸಹಿತ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೇವರಿಗೆ ಅಭಿಷೇಕ ಮಾಡಿದರು. ಮಧ್ಯಾಹ್ನ ಕನಕ ದುರ್ಗಮ್ಮ ಹಾಗೂ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ಸಲ್ಲಿಸಲಾಯಿತು. ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಇದ್ದರು. ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.








