
ಸೋಮವಾರಪೇಟೆ ಜು.30 NEWS DESK : ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಜನರಿಗೆ ಮೀಸಲಾತಿ ನೀಡಿದ ಕೀರ್ತಿ ಕೊಲ್ಲಾಪುರ ಸಂಸ್ಥಾನದ ಛತ್ರಪತಿ ಶಾಹು ಮಹಾರಾಜರಿಗೆ ಸಲ್ಲುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಮತ್ತು ಸಾಹಿತಿಗಳಾದ ಡಾ. ಜೆ.ಸೋಮಣ್ಣ ಅಭಿಪ್ರಾಯಿಸಿದರು. ಜಿಲ್ಲಾ ಮಹಾಬೋದಿ ಪತ್ತಿನ ಸಹಕಾರ ಸಂಘದ ವತಿಯಿಂದ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಛತ್ರಪತಿ ಶಾಹುಮಹಾರಾಜರ 152ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಸ್ಪೃಶ್ಯತೆಯ ನಿಷೇಧ, ದೇವದಾಸಿ ಪದ್ಧತಿ ನಿಷೇಧ, ವಿಧವ ವಿವಾಹ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಮತ್ತು ಶಾಲೆಗಳನ್ನು ಪ್ರಾರಂಭಿಸಿದರು. ಹಲವಾರು ಜನಪರ ಕಾಳಜಿಯುಳ್ಳ ಕಾನೂನುಗಳನ್ನು ಜಾರಿಗೊಳಿಸಿ ಇತಿಹಾಸದ ಪುಟದಲ್ಲಿ ದಾಖಲಾಗಿದ್ದಾರೆ ಎಂದು ಹೇಳಿದರು. ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಶಾಹುಮಹಾರಾಜರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಕಾಲದ ಶೈಕ್ಷಣಿಕ ಸಾಧನೆ ಅಮೂಲ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ.ಸತೀಶ್, ಉಪಾಧ್ಯಕ್ಷ ಗಣಪತಿ, ದಲಿತ ಹಿತರಕ್ಷಣ ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ, ಪರಿಶಿಷ್ಟಜಾತಿ-ಪಂಗಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷರಾದ ಬಿ.ಡಿ.ಸರೋಜ, ಡಿಎಸ್ಎಸ್ ಜಿಲ್ಲಾ ಸಂಚಾಲಕ ದಿವಾಕರ್, ವಕೀಲ ಜಯೇಂದ್ರ ಸಂಘದ ನಿರ್ದೇಶಕರುಗಳಾದ ಜಯಪ್ಪ ಹಾನಗಲ್, ಪ್ರೇಮ್ ಕುಮಾರ್ ಇದ್ದರು.









