Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ವಿರಾಜಪೇಟೆ ಜು.30 NEWS DESK : ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಪರಿಪಾಠವು ಪ್ರತಿಯೊಂದು ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲೇ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದರೆ ಸಮಾಜದಲ್ಲೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು. ವಿರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳ ಪಾಲನೆ-ಪೋಷಣೆ ಮಾಡುವುದೂ ಅಷ್ಟೇ ಮುಖ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ, ಪರಿಸರ ಜಾಗೃತಿ ಮೂಡಿಸುವಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಪಾತ್ರ ಶ್ಲಾಘನೀಯವಾಗಿದೆ. ಮರಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ಭೂಮಿಯನ್ನು ರಕ್ಷಿಸಿದರೆ ಭೂತಾಯಿ ನಮ್ಮನ್ನು ರಕ್ಷಿಸುತ್ತಾಳೆ. ಪರಿಸರವನ್ನು ಕಲುಷಿತಗೊಳಿಸದಂತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ವನಮಹೋತ್ಸವದಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಿ.ಕೆ.ನಾಚಪ್ಪ ಮಾತನಾಡಿ, ಪಟ್ಟಣದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪುರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಪ್ರದೀಪ್ ಕುಮಾರ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್, ನ್ಯೂಸ್ 3 ಡಿಜಿಟಲ್ ಮೀಡಿಯಾದ ಸಂಪಾದಕ ಶಶಿ ಅಚ್ಚಪ್ಪ, ಆಪ್ತಬ್, ಮಹಮದ್ ನಯಾಜ್, ಮಾಚಯ್ಯ ಸುಬ್ರಮಣಿ, ಮಂಜುನಾಥ್, ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಎನ್‌ಎಸ್‌ಎಸ್ ಸ್ವಯಂಸೇವಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಸೀಬೆ, ಹಿಪ್ಪೆ, ನೇರಳೆ, ಲಿಂಬೆ, ಬಟರ್‌ಫ್ರೂಟ್ ಸೇರಿದಂತೆ ಐವತ್ತಕ್ಕೂ ಅಧಿಕ ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.