Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*
  • *ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್
  • *ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
  • *ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‌ನ ವಾರ್ಷಿಕ ಸಭೆ*
  • *ನೇರುಗಳಲೆ : ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹು ಮಹಾರಾಜ ಜಯಂತಿ*
  • *ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*
  • *ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಜೇಷ ಪೂಜೆ*
  • ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ಗೌರವಯುತವಾಗಿ ಬದಕಲು ಸಾಧ್ಯ : ಡಾ.ಜಮೀರ್ ಅಹಮದ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.30 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‍ಐಆರ್) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಎಸ್‍ಐಆರ್ ಪ್ರಕ್ರಿಯೆ ಸಂಬಂಧ ಶಾಶ್ವತವಾಗಿ ಸ್ಥಳಾಂತರ, ಎರಡು ಕಡೆ ಹೆಸರು ಹೊಂದಿರುವ ಹಾಗೂ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದೆ(ಎಎಸ್‍ಡಿಡಿಒ) ಇರುವ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ಹಸ್ತಾಂತರಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 4,68,657 ಮತದಾರರಲ್ಲಿ 4,68,657 ಮತದಾರರಿಗೂ ಎಸ್‍ಐಆರ್ ನಮೂನೆ ವಿತರಿಸಿ, 4,03,576 ಡಿಜಿಟಲೀಕರಣ ಮಾಡಿ ಶೇ.86 ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದ್ದು, ಈ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಹಂತದಲ್ಲಿ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ ಮರಣ, ಸ್ಥಳಾಂತರ, ಗೈರು ಅಥವಾ ಎರಡು ಕಡೆ ಹೆಸರು ಹೊಂದಿರುವ, ಇತರೆ ಕಾರಣದಿಂದ ಗಣತಿ ನಮೂನೆ ಸಲ್ಲಿಸದೇ ಇರುವ 65,018 ಮತದಾರರಿದ್ದು, ಈ ಬಗ್ಗೆಯೂ ಸಹ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು. ಎಸ್‍ಐಆರ್ ಪ್ರಕ್ರಿಯೆಯಲ್ಲಿ ವ್ಯತ್ಯಾಸಗಳಿದ್ದಲ್ಲಿ ಮಾಹಿತಿ ನೀಡುವಂತಾಗಬೇಕು. ಯಾರ ಹೆಸರು ಸಹ ಎಸ್‍ಐಆರ್ ಪ್ರಕ್ರಿಯೆಯಿಂದ ಹೊರಗುಳಿಯಬಾರದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಕಾಂಗ್ರೆಸ್ ಪಕ್ಷದ ಪ್ರಮುಖರಾದ ತೆನ್ನಿರಾ ಮೈನಾ ಅವರು ಮಾತನಾಡಿ ಎಸ್‍ಐಆರ್ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಸಂಪೂರ್ಣವಾಗಿ ತೊಡಗಿಸಿಕೊಂಡಿವೆ ಎಂದು ಹೇಳಿದರು. ಹಾಡಿಯ ಜನರಲ್ಲಿ ಈ ಬಗ್ಗೆ ಇನ್ನಷ್ಟು ಎಚ್ಚರವಹಿಸಿ ಎಸ್‍ಐಆರ್ ಪ್ರಕ್ರಿಯೆಯ ಪ್ರಗತಿ ಸಾಧನೆಗೆ ಶ್ರಮಿಸಬೇಕಿದೆ. ಬಿಎಲ್‍ಒಗಳು ಸ್ಥಳೀಯರ ವಿಶ್ವಾಸಗಳಿಸಿ ಎಸ್‍ಐಆರ್ ಶೇಕಡಾವಾರು ಪ್ರಗತಿಗೆ ಶ್ರಮಿಸಬೇಕು ಎಂದರು. ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಬಿಎಲ್‍ಒಗಳು ಯಾರೂ ಎಂಬುದೇ ಅಷ್ಟಾಗಿ ತಿಳಿದಿರುವುದಿಲ್ಲ. ಆದ್ದರಿಂದ ನೋಡಲ್ ಅಧಿಕಾರಿಗಳು, ಬಿಎಲ್‍ಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಎಸ್‍ಐಆರ್ ಪ್ರಕ್ರಿಯೆ ಪ್ರಗತಿಗೆ ಮುಂದಾಗಬೇಕು ಎಂದು ತೆನ್ನೀರ ಮೈನಾ ಅವರು ಸಲಹೆ ಮಾಡಿದರು. ಭಾರತೀಯ ಜನತಾ ಪಕ್ಷದ ಪ್ರಮುಖರಾದ ಸಜಿಲ್ ಕೃಷ್ಣ ಅವರು ಮಾತನಾಡಿ ಎಸ್‍ಐಆರ್ ಪ್ರಕ್ರಿಯೆಯು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪಕ್ಷ ಅಗತ್ಯ ಜಾಗೃತಿ ಮೂಡಿಸಿದೆ ಎಂದರು. ಬಹುಜನ ಸಮಾಜ ಪಕ್ಷದ ಅಧ್ಯಕ್ಷರಾದ ದಿವಿಲ್ ಕುಮಾರ್ ಅವರು ಹಾಡಿಯ ಜನರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಹೆಚ್ಚಿನ ನಿಗಾವಹಿಸಬೇಕು. ಐಟಿಡಿಪಿ ಇಲಾಖೆ ಈ ಬಗ್ಗೆ ಇನ್ನಷ್ಟು ಪ್ರತೀ ಹಾಡಿಯಲ್ಲೂ ಸಹ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಜಾತ್ಯತೀತ ಜನತಾ ದಳದ ಗುಲಾಬಿ ಜನಾರ್ಧನ, ಕಮ್ಯುನಿಸ್ಟ್ ಪಾರ್ಟಿ ಆಪ್ ಇಂಡಿಯಾದ ಜಿಲ್ಲಾ ಕಾರ್ಯದರ್ಶಿ ಎಚ್.ಪಿ.ರಮೇಶ್ ಅವರು ಎಸ್‍ಐಆರ್ ಪ್ರಕ್ರಿಯೆ ಸಂಬಂಧ ಹಲವು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ಎಸ್‍ಐಆರ್ ಪ್ರಕ್ರಿಯೆ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಚುನಾವಣಾ ಶಿರಸ್ತೆದಾರ್ ಮಹೇಶ್, ಅನಿಲ್ ಕುಮಾರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*

ಜುಲೈ 30, 2026

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 2026

*ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

ಜುಲೈ 30, 2026

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.30 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‍ಐಆರ್) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡಿದೆ…

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 2026

*ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

ಜುಲೈ 30, 2026

*ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‌ನ ವಾರ್ಷಿಕ ಸಭೆ*

ಜುಲೈ 30, 2026

*ನೇರುಗಳಲೆ : ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ*

ಜುಲೈ 30, 2026

*ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹು ಮಹಾರಾಜ ಜಯಂತಿ*

ಜುಲೈ 30, 2026

*ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*

ಜುಲೈ 30, 2026

*ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಜೇಷ ಪೂಜೆ*

ಜುಲೈ 30, 2026

ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ಗೌರವಯುತವಾಗಿ ಬದಕಲು ಸಾಧ್ಯ : ಡಾ.ಜಮೀರ್ ಅಹಮದ್*

ಜುಲೈ 30, 2026

*ಕಾವೇರಿ ಉಳಿಯಬೇಕಾದರೆ ಮೊದಲು ಕೊಡಗು ಉಳಿಯಬೇಕು*

ಜುಲೈ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.