Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರಿ : ಪುರುಷೋತ್ತಮ್*
  • *ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾಹಿತಿ ಕಾಯಾ೯ಗಾರ*
  • *ನೀಟ್ ಪರೀಕ್ಷೆ ವಿವಾದ : ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಎನ್‌ಎಸ್‌ಯುಐಯಿಂದ ಶ್ರದ್ಧಾಂಜಲಿ*
  • *ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯದ ಹಾಕಿ ಪಟುಗಳ  ಸಾಧನೆ*
  • *ಅರೆಬೆಟ್ಟ ಪ್ರದೇಶದಲ್ಲಿ ನಾಲ್ಕು ಆಡುಗಳನ್ನು ಕೊಂದು ಹಾಕಿದ ಚಿರತೆ*
  • *ಕೊಡಗಿನಲ್ಲಿ ಭಾರೀ ಗಾಳಿ ಮಳೆ : ಎರಡು ತಾಲ್ಲೂಕುಗಳ ಶಾಲೆಗಳಿಗೆ ಆ.1 ರಂದು ರಜೆ*
  • *ಎಫ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕೊಡಗು ಎಸ್‌ಡಿಪಿಐ ಪ್ರತಿಭಟನೆ*
  • *ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಷಾಡ ಸೇಲ್ ಮೂರು ದಿನ ಮಾತ್ರ*
  • *ಉಡುಪಿ ಶಾಸಕರ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ದೂರು*
  • *ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಭಾರೀ ಗಾಳಿ ಮಳೆ : ಎರಡು ತಾಲ್ಲೂಕುಗಳ ಶಾಲೆಗಳಿಗೆ ಆ.1 ರಂದು ರಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಭಾರೀ ಗಾಳಿ ಮಳೆ : ಎರಡು ತಾಲ್ಲೂಕುಗಳ ಶಾಲೆಗಳಿಗೆ ಆ.1 ರಂದು ರಜೆ*

ಜುಲೈ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜು.31 : ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆ.1 ರಂದು ರಜೆ ಘೋಷಿಸಲಾಗಿದೆ.
ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿಯಿಂದ ಉತ್ತಮವಾಗಿ ಮಳೆೆಯಾಗುತ್ತಿದ್ದು, “ತ್ರಿವೇಣಿ” ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದೊಂದು ದಿನದ ಅವಧಿಯಲ್ಲಿ ಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ 73 ಮಿ.ಮೀ. ಮಳೆ ದಾಖಲಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕಾವೇರಿ ನದಿ ಪಾತ್ರದ ನಾಪೋಕ್ಲು, ಬಲಮುರಿ, ಮೂರ್ನಾಡು, ಸಿದ್ದಾಪುರ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ-ವಿರಾಜಪೇಟೆ ಮುಖ್ಯ ರಸ್ತೆಯ ನಡುವಿನ ಬೇತ್ರಿಯಲ್ಲಿ ಕಾವೇರಿ ನದಿಯ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರುದ್ರರಮಣೀಯ ದೃಶ್ಯ ಗೋಚರಿಸುತ್ತಿದೆ. ನಾಪೋಕ್ಲು ವಿಭಾಗದಲ್ಲು ಉತ್ತಮ ಮಳೆಯಾಗುತ್ತಿದ್ದು, ನಾಪೋಕ್ಲು ಮತ್ತು ಹಳೇ ತಾಲ್ಲೂಕು ನಡುವಿನ ರಸ್ತೆಯ ಮೇಲೆ ಕಾವೇರಿ ನದಿ ನೀರು ಹರಿಯುತ್ತಿದೆ. ಜಿಲ್ಲಾ ಕೇಂದ್ರ ಮಡಿಕೇರಿ ವ್ಯಾಪ್ತಿಯಲ್ಲಿ ಗುರುವಾರದಿಂದ ನಿರಂತರ ಗಾಳಿ ಮಳೆಯಾಗುತ್ತಿದ್ದು, ಮೈಕೊರೆಯುವ ಚಳಿಯ ವಾತಾವರಣವಿದೆ. ವಿರಾಜಪೇಟೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಬಲಮುರಿ, ಕೊಟ್ಟಮುಡಿ, ನೆಲ್ಯಹುದಿಕೇರಿ, ಕರಡಿಗೋಡು, ಗುಡ್ಡೆಹೊಸೂರು ಬಳಿ ಕಾವೇರಿ ನದಿ ಮೈದುಂಬಿಕೊAಡು ಹರಿಯುತ್ತಿದೆ. ಮಡಿಕೇರಿ ನಗರ, ಮಕ್ಕಂದೂರು, ಕಾಲೂರು, ಮುಕ್ಕೋಡ್ಲು, ಸೂರ್ಲಬ್ಬಿ, ಮಾದಾಪುರ, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಕಾರಣ ಹಟ್ಟಿಹೊಳೆ ಮತ್ತು ಮಾದಾಪುರ ಹೊಳೆಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ. ಮಡಿಕೇರಿ ಮತ್ತು ಸೋಮವಾರಪೇಟೆ ತಹಶೀಲ್ದಾರರು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆ.1 ರಂದು ಒಂದು ದಿನ ರಜೆ ಘೋಷಿಸಿದ್ದಾರೆ. *ಮಳೆ ವಿವರ* ಕಳೆದ 24 ಗಂಟೆ ಅವಧಿಯಲ್ಲಿ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಭಾಗದಲ್ಲಿ ದಾಖಲೆಯ 188 ಮಿ.ಮೀ ಮಳೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ 73, ಶ್ರೀಮಂಗಲ 58, ಪೊನ್ನಂಪೇಟೆ 55, ಅಮ್ಮತ್ತಿ 54.5, ನಾಪೋಕ್ಲು 43.4, ಹುದಿಕೇರಿ 37 ಮಿ.ಮೀ ಮಳೆಯಾಗಿದೆ. ಜಿಲ್ಲೆಗೆ ಕಳೆದ 24 ಗಂಟೆ ಅವಧಿಯಲ್ಲಿ 42.29 ಮಿ.ಮೀ ಮಳೆಯಾಗಿದೆ.
*ಹಾರಂಗಿ ಹೆಚ್ಚಳ* ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಅಣೆಕಟ್ಟೆಯಿಂದ 3500 ರಿಂದ 4 ಸಾವಿರ ಕ್ಯುಸೆಕ್‌ವರೆಗೆ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರಿ : ಪುರುಷೋತ್ತಮ್*

ಜುಲೈ 31, 2026

*ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾಹಿತಿ ಕಾಯಾ೯ಗಾರ*

ಜುಲೈ 31, 2026

*ನೀಟ್ ಪರೀಕ್ಷೆ ವಿವಾದ : ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಎನ್‌ಎಸ್‌ಯುಐಯಿಂದ ಶ್ರದ್ಧಾಂಜಲಿ*

ಜುಲೈ 31, 2026

*ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾಹಿತಿ ಕಾಯಾ೯ಗಾರ*

ಜುಲೈ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು. 31 NEWS DESK : ಸೈನಿಕಶಾಲೆಗಳ 6 ಮತ್ತು 9ನೇ ತರಗತಿಗೆ ಸೇಪ೯ಡೆ ಸಂಬಂಧಿತ ವಿದ್ಯಾಥಿ೯ ಮತ್ತು…

*ನೀಟ್ ಪರೀಕ್ಷೆ ವಿವಾದ : ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಎನ್‌ಎಸ್‌ಯುಐಯಿಂದ ಶ್ರದ್ಧಾಂಜಲಿ*

ಜುಲೈ 31, 2026

*ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯದ ಹಾಕಿ ಪಟುಗಳ  ಸಾಧನೆ*

ಜುಲೈ 31, 2026

*ಅರೆಬೆಟ್ಟ ಪ್ರದೇಶದಲ್ಲಿ ನಾಲ್ಕು ಆಡುಗಳನ್ನು ಕೊಂದು ಹಾಕಿದ ಚಿರತೆ*

ಜುಲೈ 31, 2026

*ಕೊಡಗಿನಲ್ಲಿ ಭಾರೀ ಗಾಳಿ ಮಳೆ : ಎರಡು ತಾಲ್ಲೂಕುಗಳ ಶಾಲೆಗಳಿಗೆ ಆ.1 ರಂದು ರಜೆ*

ಜುಲೈ 31, 2026

*ಎಫ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕೊಡಗು ಎಸ್‌ಡಿಪಿಐ ಪ್ರತಿಭಟನೆ*

ಜುಲೈ 31, 2026

*ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಷಾಡ ಸೇಲ್ ಮೂರು ದಿನ ಮಾತ್ರ*

ಜುಲೈ 31, 2026

*ಉಡುಪಿ ಶಾಸಕರ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ದೂರು*

ಜುಲೈ 31, 2026

*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*

ಜುಲೈ 30, 2026

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.