
ಕುಶಾಲನಗರ, ಜು.31 NEWS DESK : ನೀಟ್ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಕುಶಾಲನಗರದಲ್ಲಿ ಕ್ಯಾಂಡಲ್ ಲೈಟ್ ಮಾರ್ಚ್ ಆಯೋಜಿಸಲಾಯಿತು. ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಕ್ಯಾಂಡಲ್ ಲೈಟ್ ಮಾರ್ಚ್ ನಡೆಸಿದ ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರು ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿ ಮೊಂಬತ್ತಿ ಬೆಳಗಿ ಅಗಲಿದ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ನೀಟ್ ಪರೀಕ್ಷೆ ಸಂಬಂಧ ಉಂಟಾಗಿರುವ ವಿವಾದಗಳ ಕುರಿತು ಆತಂಕ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವಂತೆ ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ರಫೀಕ್ ಅಲಿ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ್, ಮಾಜಿ ಅಧ್ಯಕ್ಷ ಹಾಗೂ ಯುವ ಕಾಂಗ್ರೆಸ್ ಮುಖಂಡ ತ್ರಿನೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆಯ ಮಾಜಿ ಸದಸ್ಯರಾದ ಶಿವಶಂಕರ್ ಹಾಗೂ ಎಂ.ಎಂ. ಪ್ರಕಾಶ್, ಕುಶಾಲನಗರ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ, ಅಜ್ಜಳ್ಳಿ ರವಿ, ಕಿಸಾನ್ ಘಟಕದ ನಗರ ಅಧ್ಯಕ್ಷ ಹರೀಶ್, ವಿಜಯ್ ಸಿದ್ದು ಸೇರಿದಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.









