Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಾತಂತ್ರ್ಯ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಾತಂತ್ರ್ಯ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜುಲೈ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.31 NEWS DESK : ಇದೇ ಆಗಸ್ಟ್, 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಆಗಿರುವುದರಿಂದ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರತೀ ವರ್ಷದಂತೆ ಈ ಬಾರಿಯೂ ಸಹ ಅದೇ ಮಾದರಿಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಾಟರ್ ಪ್ರೂಪ್ ವೇದಿಕೆ ನಿರ್ಮಾಣ ಹಾಗೂ ಶಾಮಿಯಾನ, ಮೈಕ್ ಮತ್ತಿತರ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಧ್ವಜಾರೋಹಣ ಸಮಿತಿಯವರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು, ರಿಹರ್ಸಲ್ ಸಂದರ್ಭದಲ್ಲಿ ವಿವಿಧ ತಂಡಗಳ ಜೊತೆಗೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಲಹೆ ಮಾಡಿದರು. ಸಾಂಸ್ಕøತಿಕ ಕಾರ್ಯಕ್ರಮ ಸಮಿತಿಯವರು ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ ಹಾಡಲು ಸಿದ್ಧತೆ ಮಾಡಿಕೊಳ್ಳಬೇಕು. ರಾಷ್ಟ್ರದ ಐಕ್ಯತೆ, ಸಮಗ್ರತೆ ಬಿಂಬಿಸುವ ಹಾಡುಗಳನ್ನು ಒಳಗೊಂಡ ಸಾಂಸ್ಕøತಿಕ ಕಾರ್ಯಕ್ರಮ ನಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್ ಅವರು ಕಾರ್ಯಕ್ರಮ ಸಂದರ್ಭದಲ್ಲಿ ಐದು ಶಾಲೆಗಳ ತಂಡಗಳು ಸಾಂಸ್ಕøತಿಕ ಕಾರ್ಯಕ್ರಮ ನೀಡಲಿದ್ದು, 345 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಆರ್‍ಪಿಐ ಪೊಲೀಸ್ ಇನ್ಸ್‍ಪೆಕ್ಟರ್ ಗಣೇಶ್ ಅವರು ಮಾಹಿತಿ ನೀಡಿ 22 ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸಿವಿಲ್ ಪೊಲೀಸ್, ಅರಣ್ಯ ರಕ್ಷಕ ದಳ, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಹೋಮ್ ಗಾರ್ಡ್ ತಂಡ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಉಪಾಹಾರ ಸಮಿತಿಯವರು ಕಾರ್ಯಕ್ರಮ ದಿನದಂದು ಮಕ್ಕಳಿಗೆ ಉಪಾಹಾರ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಕೋಟೆ ಆವರಣದಲ್ಲಿ ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಒತ್ತು ನೀಡುವುದು, ಕುಡಿಯುವ ನೀರು ವ್ಯವಸ್ಥೆ ಹಾಗೂ ಕೈತೊಳೆಯಲು ಟ್ಯಾಂಕ್ ನೀರು ಒದಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವುದು, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುವಂತೆ ಸಲಹೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಮಾಡಿದವರನ್ನು ಗೌರವಿಸುವಂತೆ ಸಲಹೆ ಮಾಡಿದರು. ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲಾ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಹಾಜರಾತಿಗೆ ಸಹಿ ಮಾಡಬೇಕು ಎಂದು ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಕಳೆದ ಬಾರಿಯಂತೆ ಈ ಬಾರಿಯು ಸಹ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಶಾಂತಗೌಡ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಭೂ ದಾಖಲೆಗಳ ಉಪ ನಿರ್ದೇಶಕರಾದ ನಿರಂಜನ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಅಗ್ನಿಶಾಮಕ ಅಧಿಕಾರಿ ಶೋಭಿತ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.