Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗರಹಳ್ಳಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗರಹಳ್ಳಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮ*

ಜುಲೈ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.31 NEWS DESK : ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಪೋಕ್ಸೋ ಕಾಯ್ದೆಯಡಿ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಮಕ್ಕಳ ವಿಶೇಷ ಪೋಲಿಸ್ ಘಟಕದ ಎಸ್.ಐ.ಸುಮತಿ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಪೊಲೀಸ್ ಇಲಾಖೆ, ಅಕ್ಕಪಡೆ ಸಹಯೋಗದಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಡೆದ ಮಾನವ ಕಳ್ಳ ಸಾಗಣಿಕೆ ತಡೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಹಲವಾರು ತಿಂಡಿ ತಿನಿಸುಗಳ ಆಮಿಷವನ್ನು ಒಡ್ಡಿ ಮಾನವ ಕಳ್ಳ ಸಾಗಾಣಿಕೆಯನ್ನು ನಡೆಸುತ್ತಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ 1098 ಗೆ ಅಥವಾ ಪೊಷಕರು ಮತ್ತು ಶಿಕ್ಷಕರಿಗೆ ಮಾಹಿತಿಯನ್ನು ತಿಳಿಸಬೇಕು ಎಂದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ, ಸೈಬರ್ ಕ್ರೈಂ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ ಬೇಟಿ ಪಡಾವೋ, ಏಕ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕುವ ಆರ್ಥಿಕ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರದಿಂದ ಲಭ್ಯವಾಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು. ತುರ್ತು ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆ 112, 1098, 181, 1930 ಗಳನ್ನು ಬಳಸಿಕೊಳ್ಳುವಂತೆ ಅರಿವು ಮೂಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್. ಆರ್ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ, ಮೋಸ, ಬೆದರಿಕೆ, ಬಲವಂತ ಮಾಡಿ ವ್ಯಕ್ತಿಗಳನ್ನು ಅಕ್ರಮವಾಗಿ ಸಾಗಿಸಿ ಅವರಿಂದ ಶೋಷಣೆಯ ವಿರುದ್ಧ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಲೈಂಗಿಕ ಶೋಷಣೆ ಮಾಡುವುದು ಬಲವಂತದಿಂದ ದುಡಿಸಿಕೊಳ್ಳುವುದು, ಬಾಲಕಾರ್ಮಿಕ ಕೆಲಸ ಮಾಡಿಸಿಕೊಳ್ಳುವುದು, ಬಲವಂತದಿಂದ ಬಿಕ್ಷಾಟನೆಯಲ್ಲಿ ತೊಡಗಿಸುವುದಾಗಿದೆ ಇದಕ್ಕೆ ಮುಖ್ಯ ಕಾರಣ ಎಂದರೆ, ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆ, ಸುಳ್ಳು ಉದ್ಯೋಗ ಅಥವಾ ಮದುವೆಯ ಆಮಿಷ, ಸಾಮಾಜಿಕ ಅಸಮಾನತೆ ಈ ಎಲ್ಲಾ ಕಾರಣದಿಂದ ಸಮಸ್ಯೆ ಉಂಟಾಗುತ್ತದೆ ಆ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ತಿಳಿಸುವುದರ ಮುಖಾಂತರ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸುರಕ್ಷತಾ ಅರಿವು ನೀಡಬೇಕು ಎಂದರು. ಮಾನವ ಕಳ್ಳ ಸಾಗಾಣಿಕೆ ಒಂದು ಗಂಭೀರ ಅಪರಾಧವಾಗಿದ್ದು, ಇದನ್ನು ತಡೆಯಲು ಸರ್ಕಾರ,ಪೊಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಸಾರ್ವಜನಿಕರು ಒಟ್ಟಾಗಿ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹರೀಶ್ ಟಿ.ಎಸ್, ಅಕ್ಕಪಡೆ ತಂಡದ ಸಿಬ್ಬಂದಿಗಳಾದ ಪ್ರೇಮ, ಶೋಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತುಳಸಿ ಇತರೆ ಸಿಬ್ಬಂದಿಗಳು ಹಾಜರಿದ್ದರು. ಮಾನವ ಕಳ್ಳ ಸಾಗಾಣಿ ತಡೆ ಕಾಯ್ದೆಯ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು”.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.