Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಆ.7 ರಿಂದ ಗೋಣಿಕೊಪ್ಪಲುವಿನಲ್ಲಿ “ವಾಂಟೆಡ್ ಬಾಲ” ಕಿರುಚಿತ್ರ ಪ್ರದರ್ಶನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಆ.7 ರಿಂದ ಗೋಣಿಕೊಪ್ಪಲುವಿನಲ್ಲಿ “ವಾಂಟೆಡ್ ಬಾಲ” ಕಿರುಚಿತ್ರ ಪ್ರದರ್ಶನ

ಆಗಷ್ಟ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.5 NEWS DESK  : ಕೊಡಗಿನ ವಿಶಿಷ್ಟ ಸಂಸ್ಕೃತಿ ಪರಂಪರೆಗಳನ್ನು ಪ್ರತಿಬಿಂಬಿಸುವ ಮೂಲಕ ಜನ ಮನವನ್ನು ಗೆದ್ದಿರುವ “ವಾಂಟೆಡ್ ಬಾಲ” ಕಿರುಚಿತ್ರವನ್ನು ಇದೇ ಆ.7 ರಿಂದ 9ರವರೆಗೆ ಗೋಣಿಕೊಪ್ಪಲು ಸಿನಿಪ್ಲೆಕ್ಸ್ ಚಿತ್ರ ಮಂದಿರದಲ್ಲಿ ಪ್ರದರ್ಶಿಸಲಾಗುತ್ತದೆಂದು ಚಿತ್ರ ನಿರ್ದೇಶಕ ಸಂಕೇತ್ ಶಿವಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊಣಿಕೊಪ್ಪಲಿನ ಸಿನಿಪ್ಲೆಕ್ಸ್‍ನಲ್ಲಿ ಸೂಚಿತ ಮೂರು ದಿನಗಳಂದು ಬೆಳಗ್ಗೆ 11 ಗಂಟೆ, ಮಧ್ಯಾಹ್ನ 1 ಮತ್ತು 3 ಗಂಟೆಗೆ ಚಿತ್ರ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ಸಿನಿ ಪ್ರಿಯರು ಕಿರು ಚಿತ್ರವನ್ನು ವೀಕ್ಷಿಸುವ ಮೂಲಕ ಚಿತ್ರ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಸಾಹಿತಿಗಳಾದ ಮೇಜರ್ ಕುಶ್ವಂತ್ ಕೋಳಿಬೈಲು ಅವರ “ಕೂರ್ಗ್ ರೆಜಿಮೆಂಟ್” ಕೃತಿಯನ್ನು ಆಧರಿಸಿ ಕಿರುಚಿತ್ರವನ್ನು ನಿರ್ಮಿಸಲಾಗಿದೆ. ಕಿರುಚಿತ್ರದಲ್ಲಿ ಈಗಾಗಲೆ ಸಾಮಾಜಿಕ ಜಾಲ ತಾಣಗಳ ಮೂಲಕ ಪ್ರಸಿದ್ಧಿ ಪಡೆದಿರುವ “ಪೂಡೆ ಪೂಡೆ ವಾ” ಹಾಡು ಸೇರಿದಂತೆ ಒಟ್ಟು ನಾಲ್ಕು ಹಾಡುಗಳು ಇರುವುದಾಗಿ ಮಾಹಿತಿ ನೀಡಿದರು. ಚಿತ್ರದಲ್ಲಿ ಸಂಕೇತ್ ಶಿವಪ್ಪ, ಪ್ರಮೀತಾ ಕೇಚಮಾಡ, ಗಗನ್ ಗಣಪತಿ, ರಮೇಶ್ ನಾಗರಹೊಳೆ, ಪಟ್ಟಡ ಧನುರಂಜನ್, ಮುಂಡಚಾಡಿರ ರಿನ್ನಿ ಭರತ್, ಅನನ್ಯ ಅಮೀನ್ ಸೇರಿದಂತೆ ಹಲ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರದ ವಿಶೇಷ ಆಕರ್ಷಣೆಯಾದ “ಪೂಡೆ ಪೂಡೆ ವಾ” ಹಾಡಿಗೆ ಕೊಡವಚೇರಿರ ಉಮೇಶ್ ಹಾಗೂ ದುಗ್ಗಂಡ ರಿಕ್ಕಿ ಧ್ವನಿಯಾಗಿದ್ದಾರೆಂದು ವಿವರಗಳನ್ನಿತ್ತರು. ಲೇಖಕರಾದ ಡಾ.ಕುಶ್ವಂತ್ ಕೋಳಿಬೈಲು ಅವರು ಮಾತನಾಡಿ, ತಾನು ರಚಿಸಿರುವ ಕೂರ್ಗ್ ರೆಜಿಮೆಂಟ್ ಕೃತಿಯಲ್ಲಿನ ಒಂದು ಭಾಗದ ಕಥೆಯ ಎಳೆÉಯನ್ನು ಚಿತ್ರಕಥೆಯಾಗಿ ವಿಸ್ತರಿಸಿ, ಚಿತ್ರವನ್ನು ತೆಗೆಯಲಾಗಿದೆ. ಕರಾವಳಿ ಸಂಸ್ಕøತಿ ಪ್ರತಿಬಿಂಬಿಸುವ “ಕಾಂತಾರ” ಚಲನ ಚಿತ್ರದಂತೆಯೇ, ವಾಂಟೆಡ್ ಬಾಲ ಕಿರುಚಿತ್ರ ಕೊಡಗಿನ ಸಂಸ್ಕøತಿಯನ್ನು ಪಾನ್ ಕರ್ನಾಟಕ ಮಟ್ಟಕ್ಕೆ ವಿಸ್ತರಿಸುವ ಆಶಯ ತಮ್ಮದಾಗಿದೆ. ಚಿತ್ರ ಅತ್ಯಂತ ಅಚ್ಚುಕಟ್ಟಾಗಿ ಸೊಗಸಾಗಿ ಮೂಡಿ ಬಂದಿದೆ. ಮುಂಬರುವ ದಿನಗಳಲ್ಲಿ ಚಿತ್ರವನ್ನು “ಓಟಿಟಿ” ಮೂಲಕ ಹೊರ ತರುವ ಪ್ರಯತ್ನವು ನಡೆಯಲಿದೆಯೆಂದು ತಿಳಿಸಿದರು. ಚಿತ್ರ ನಟ ಆಚೀರ ಗಗನ್ ಗಣಪತಿ ಮಾತನಾಡಿ, ಅತ್ಯುತ್ತಮ ಕಥೆಯನ್ನು ಆಧರಿಸಿ ಚಲನ ಚಿತ್ರ ಮೂಡಿ ಬಂದಿದೆಯೆಂದು ಸಂತಸ ವ್ಯಕ್ತಪಡಿಸಿದರು. ಚಿತ್ರ ನಟ ಹಾಗೂ ಕೋರಿಯೋಗ್ರಾಫರ್ ಸಿ.ವಿಷ್ಣು ಚಂದ್ರು ಅವರು, ಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುವಂತೆ ಜನರಲ್ಲಿ ಮನವಿ ಮಾಡಿದರು. ಚಿತ್ರ ನಟರಾದ ಕಡೇಮಾಡ ಸುಮನ್ ಮಾತನಾಡಿ, ವಾಂಟೆಡ್ ಬಾಲ ಕಿರು ಚಿತ್ರದ ” ಪೂಡೆ ಪೂಡೆ ವಾ” ಹಾಡು ಈಗಾಗಲೆ ಪ್ರಸಿದ್ಧಿಯನ್ನು ಪಡೆದಿದ್ದು, ಸಾಮಾಜಿಕ ಜಾಲ ತಾಣದಲ್ಲಿ 4 ಲಕ್ಷಕ್ಕೂ ಹೆಚ್ಚಿನ ಮೆಚ್ಚುಗೆಯನ್ನು ಪಡೆದಿರುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.2: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಬಾಬು ಅವರನ್ನು…

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026

ವಿಶ್ವದಾದ್ಯಂತ ಕನ್ನಡ ಭಾಷೆ ಪ್ರಸಾರದಲ್ಲಿ ಯುವಜನತೆಯ ಪಾತ್ರ ಅಪಾರ: ಸಿದ್ದಪ್ಪ ಹೆಳವರಹುಂಡಿ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.