Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.6 : ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಎಲ್ಲಾ ರಾಜಕೀಯ ಪಕ್ಷಗಳು ಕೊಡಗು ಜಿಲ್ಲೆಯನ್ನು ಕಡೆಗಣಿಸುತ್ತಲೇ ಬಂದಿವೆ. ಪ್ರಸ್ತುತ ಅಧಿಕಾರದಲ್ಲಿರುವ ಸರಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದೆ ಎಂದು ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ವೇದಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಗೌರವಾಧ್ಯಕ್ಷ ಪಿ.ಎಲ್.ಸುರೇಶ್ ಅವರು ಚುನಾವಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಲ್ಲಿ ಸಚಿವ ಸ್ಥಾನ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಆದರೆ ಇದೀಗ ಭರವಸೆ ಹುಸಿಯಾಗಿದ್ದು, ಸಚಿವ ಸ್ಥಾನ ನೀಡದೆ ನಿರ್ಲಕ್ಷಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯವನ್ನಾಳಿದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕೊಡಗು ಕೇವಲ ಕಾವೇರಿ ನೀರನ್ನು ನೀಡುವ ಜಿಲ್ಲೆಯಷ್ಟೆ ಎಂದು ಪರಿಗಣಿಸಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಚಿವ ಸ್ಥಾನದಿಂದ ವಂಚಿಸಲಾಗುತ್ತಿದೆ. ಪುಟ್ಟ ಜಿಲ್ಲೆ ಕೊಡಗು ರಾಜ್ಯದ ಎಲ್ಲಾ ಕ್ಷೇತ್ರಗಳಿಗೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ವಿವಾದವನ್ನು ಬಗೆಹರಿಸಲು ಇಲ್ಲಿಂದ ಹರಿದು ಹೋಗುವ ನೀರು ಹೆಚ್ಚು ಸಹಕಾರಿಯಾಗಿದೆ. ಆದರೂ ಕೊಡಗನ್ನು ಯಾವುದೇ ಪಕ್ಷಗಳು ವಿಶೇಷವಾಗಿ ಪರಿಗಣಿಸುತ್ತಿಲ್ಲ ಮತ್ತು ಕೊಡುಗೆಯನ್ನು ನೀಡುತ್ತಿಲ್ಲ. ಹೊರಗಿನವರಿಗಾಗಿ ಕೊಡಗಿನವರು ಅರಣ್ಯ ಮತ್ತು ನದಿ ಸಂರಕ್ಷಣೆ ಮಾಡಿ ಕಷ್ಟಪಡಬೇಕಾಗಿದೆ ಎಂದು ಆರೋಪಿಸಿದ ಅವರು, ರಾಷ್ಟ್ರ  ಹಾಗೂ ರಾಜ್ಯ ಮಟ್ಟದ ಹೈಕಮಾಂಡ್ ಗಳ ನಿರ್ಲಕ್ಷ್ಯ ಮನೋಭಾವವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಈ ಬಾರಿ ಒಬ್ಬರಿಗಾದರೂ ಸಚಿವ ಸ್ಥಾನ ಸಿಗುವ ಆಶಾಭಾವನೆ ಎಲ್ಲರಲ್ಲಿ ಮೂಡಿತ್ತು, ಆದರೆ ನಿರಾಶೆ ಎದುರಾಗಿದೆ. ಹೊರಗಿನವರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಜಿಲ್ಲೆಗೆ ಯಾವುದೇ ಪ್ರಯೋಜನವಿಲ. ಸ್ಥಳೀಯರೇ ಸಚಿವರಾಗಿದ್ದರೆ ಇಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತಿತ್ತು. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಹೀಗೆ ಮುಂದುವರಿದರೆ ಕೊಡಗಿನಲ್ಲಿ ಪ್ರತ್ಯೇಕತೆಯ ಕೂಗು ಏಳಬಹುದು ಎಂದು ಪಿ.ಎಲ್.ಸುರೇಶ್ ಎಚ್ಚರಿಕೆ ನೀಡಿದರು. ಸರಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ವೇದಿಕೆಯ ಅಧ್ಯಕ್ಷ ಪರ್ಮಾಲೆ ಗಣೇಶ್ ಮಾತನಾಡಿ ಕಾವೇರಿ ತವರು ಕೊಡಗು ಜಿಲ್ಲೆಗೆ ಮೂರೂ ರಾಜಕೀಯ ಪಕ್ಷಗಳಿಂದ ಅನ್ಯಾಯವಾಗಿದೆ ಎಂದು ಟೀಕಿಸಿದರು. ಪ್ರಭಾವಿ ಶಾಸಕರಾಗಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದ್ದರೆ ಆನೆ, ಮಾನವ ಸಂಘರ್ಷ ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯುತ್ತಿತ್ತು ಎಂದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಪೂಜಾರಿರ ಪ್ರದೀಪ್ ಕುಮಾರ್, ಖಜಾಂಚಿ ಪಟ್ಟಡ ದೀಪಕ್, ಸದಸ್ಯರಾದ ಡೆಮ್ಮಲೆ ರಿತಿನ್ ಹಾಗೂ ಕೊಂಬಾಡಿ ಮೋಹಿನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.