
ಮಡಿಕೇರಿ, ಆ.7 NEWS DESK : ಸುತ್ತೂರು ಜಗದ್ಗುರುಗಳು ಆ.8 ರಂದು ಮಡಿಕೇರಿಯ ರಾಜರ ಗದ್ದುಗೆ ಹಾಗೂ ಅರಮನೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಶ್ರೀಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲು ಅಗತ್ಯ ಪೂರ್ವಸಿದ್ಧತೆಗಳ ಕುರಿತು ಸಭೆ ನಡೆಸಿ ಸಿದ್ಧತೆಗಳನ್ನು ಪರಿಶೀಲಿಸಿದರು. ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಯಿತು. ಶ್ರೀಗಳ ಆಗಮನದ ವೇಳೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಕೊಡಗು ವೀರಶೈವ ಮಹಾಸಭಾದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಉಪಾಧ್ಯಕ್ಷ ಹೆಚ್.ಪಿ. ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಹಾಗೂ ಮಡಿಕೇರಿ ವೀರಶೈವ ಸಮಾಜದ ಯುವ ಘಟಕದ ಅಧ್ಯಕ್ಷ ಎಂ. ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.










