Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ

ಆಗಷ್ಟ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.10 : ಆಲೆಮಾಡ ಕುಟುಂಬದ ವತಿಯಿಂದ ಅ.10 ಮತ್ತು 11 ರಂದು ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ದ್ವಿತೀಯ ವರ್ಷದ ಅಂತರ ಕೊಡವ ಕುಟುಂಬಗಳ “ಆಲೆಮಾಡ ತೋಕ್ ನಮ್ಮೆ-2026′ ನಡೆಯಲಿದೆ ಎಂದು ಆಯೋಜನಾ ಸಮಿತಿಯ ನಿರ್ದೇಶಕ ಆಲೆಮಾಡ ಕೀರ್ತನ್ ತಮ್ಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪರ್ಧೆಯ ಕುರಿತು ಮಾಹಿತಿ ನೀಡಿದ ಅವರು, 12 ಬೋರ್ ಶಾಟ್ ಗನ್ ಮತ್ತು .22 ರೈಫಲ್ ವಿಭಾಗಗಳಲ್ಲಿ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಸ್ಪರ್ಧೆಯಲ್ಲಿ ಇಬ್ಬರು ಸದಸ್ಯರನ್ನು ಒಳಗೊಂಡ ತಂಡಗಳ ಪಾಲ್ಗೊಳ್ಳುವಿಕೆಗೆ ಅವಕಾಶವನ್ನು ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಪುರುಷರು ಹಾಗೂ ಮಹಿಳೆಯರು ತಂಡದಲ್ಲಿ ಪಾಲ್ಗೊಳ್ಳಬಹುದು. ಯಾವುದೇ ಒಂದು ಕೊಡವ ಕುಟುಂಬದಿ0ದ ನಾಲ್ಕು ತಂಡಗಳು ಸ್ಪರ್ಧಿಸಬಹುದಾಗಿದೆ ಎಂದರು.
ಪ್ರಸಕ್ತ ಸಾಲಿನ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚಿನ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ, ಕಳೆೆದ ಸಾಲಿನಲ್ಲಿ ಪೊನ್ನಂಪೇಟೆಯಲ್ಲೆ ಪೆಮ್ಮಂಡ ಕುಟುಂಬದಿ0ದ ಆಯೋಜಿತ ತೋಕ್ ನಮ್ಮೆಯಲ್ಲಿ 248 ತಂಡಗಳು ಪಾಲ್ಗೊಂಡಿದ್ದವು.
ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ ತಲಾ 1 ಸಾವಿರ ರೂ. ನೋಂದಣಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ನೋಂದಣಿ ಪ್ರಕ್ರಿಯೆ ಆ.16ರಿಂದ ಆರಂಭಗೊಳ್ಳಲಿದ್ದು, ಸೆ.30ರವರೆಗೆ ಇರಲಿದೆ. ಆಸಕ್ತ ತಂಡಗಳು ತಮ್ಮಯ್ಯ ಮೊ.9741203123, ಬೋಪಣ್ಣ ಮೊ.9901221945 ಇವರನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆನ್ ಲೈನ್ https://www.alemada-okka.omline/ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದೆಂದು ಹೇಳಿದರು.
*3 ಲಕ್ಷ ಬಹುಮಾನ*
ಶೂಟಿಂಗ್ ಸ್ಪರ್ಧೆಯಲ್ಲಿ ಒಟ್ಟಾಗಿ 3 ಲಕ್ಷ ರೂ. ಮೊತ್ತದ ಬಹುಮಾನವನ್ನು ನೀಡಲಾಗುತ್ತದೆ. ವಿಜೇತ ತಂಡಕ್ಕೆ 60 ಸಾವಿರ ರೂ., ದ್ವಿತೀಯ 50 ಸಾವಿರ ರೂ., ತೃತೀಯ 40 ಸಾವಿರ ರೂ., ನಾಲ್ಕನೇ 30 ಸಾವಿರ ರೂ., ಮತ್ತು 5ನೇ ಬಹುಮಾನÀವಾಗಿ 20 ಸಾವಿರ ನಗದು ಬಹುಮಾನವನ್ನು ಹಾಗೂ ಎಲ್ಲ ವಿಜೇತರಿಗೆ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ. ಏರ್ ಗನ್ ಎಗ್ ಶೂಟ್ ಸ್ಪರ್ಧೆಯನ್ನು ಕೂಡ ಇದೇ ಸಂದರ್ಭ ಆಯೋಜಿಸಲಾಗುವುದು. ಇದಕ್ಕೆ ಸ್ಥಳದಲ್ಲೆ ನೋಂದಣಿ ಮಾಡಿಕೊಳ್ಳಲಾಗುತ್ತದೆ ಎಂದು ಕೀರ್ತನ್ ತಮ್ಮಯ್ಯ ತಿಳಿಸಿದರು. ಕೊಡವರ ಪಾಲಿಗೆ ತೋಕ್ (ಬಂದೂಕು) ಕೇವಲ ಒಂದು ಆಯುಧವಲ್ಲ. ಅದು ತಲೆತಲಾಂತರಗಳಿ0ದ ಹರಿದು ಬಂದಿರುವ ಸಂಪ್ರದಾಯ, ಸಂಸ್ಕೃತಿ, ಕುಟುಂಬ ಪರಂಪರೆ ಮತ್ತು ಜೀವನ ಪದ್ಧತಿಯೊಂದಿಗೆ ಅವಿನಾಭಾವವಾಗಿ ಬೆಸೆದುಕೊಂಡಿರುವ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾಗಿದೆ. ತೋಕ್ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆ ಮೂಲಕ ಕೊಡವ ಕುಟುಂಬಗಳ ನಡುವಿನ ಬಾಂಧವ್ಯವನ್ನು ಸಂಭ್ರಮಿಸುವ ತೋಕ್ ನಮ್ಮೆಯಲ್ಲಿ ಜಿಲ್ಲೆಯ ಎಲ್ಲಾ ಕೊಡವ ಕುಟುಂಬಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಆಲೆಮಾಡ ಕುಟುಂಬದ ಹಿರಿಯರಾದ ಆಲೆಮಾಡ ಪೂವಯ್ಯ, ಪಂದ್ಯಾವಳಿ ಆಯೋಜನಾ ಸಮಿತಿಯ ಅಧ್ಯಕ್ಷ ಆಲೆಮಾಡ ಸೋಮಣ್ಣ, ಕಾರ್ಯದರ್ಶಿ ಆಲೆಮಾಡ ಬೋಪಣ್ಣ ಹಾಗೂ ನಿರ್ದೇಶಕ ಆಲೆಮಾಡ ನವೀನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಲಾವಿದ ಅಡ್ಡಂಡ ಸಿ.ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣ : ಕೊಡಗು ಕಲಾವಿದರ ಸಂಘ ಖಂಡನೆ

ನವೆಂಬರ್ 2, 2026

ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಿನೇಶ್ ಕುಮಾರ್ ಮೀನಾ ಅಧಿಕಾರ ಸ್ವೀಕಾರ

ನವೆಂಬರ್ 2, 2026

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 2026

ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಿನೇಶ್ ಕುಮಾರ್ ಮೀನಾ ಅಧಿಕಾರ ಸ್ವೀಕಾರ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.2 : ಕೊಡಗು ಜಿ.ಪಂ.ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಿನೇಶ್ ಕುಮಾರ್ ಮೀನಾ ಅವರು…

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.