Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*

ಆಗಷ್ಟ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.10 NEWS DESK : ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್‍ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು ಎಂದರು. ದೇಶದಾಧ್ಯಂತ ಆಗಸ್ಟ್ 10 ರಂದು “ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಆಗಸ್ಟ್ 17 ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು 10 ಫೆಬ್ರವರಿ 2015ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. 2018 ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು 34 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ 19 ನೇ ಸುತ್ತಿನ ಕಾರ್ಯಕ್ರಮವಾಗಿರುತ್ತದೆ ಎಂದು ತಿಳಿಸಿದರು. ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್  ಕಾರ್ಪೋರೇಷನ್ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಆರ್‌ಸಿಹೆಚ್ ಅಧಿಕಾರಿ ಡಾ.ಸನತ್ ಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,20,874 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 23,634, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 955, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 80,506 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 9135, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 3700, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 473 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 2471 ಇರುತ್ತಾರೆ ಎಂದು ಮಾಹಿತಿ ನೀಡಿದರು. “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ” ಹಾಗೂ ಆಗಸ್ಟ್ 17 ರಂದು ನಡೆಯುವ ಮಾಪ್‍ಆಪ್ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನ ಮತ್ತು ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಆಲ್‍ಬೆಂಡಝಲ್ ಮಾತ್ರೆ ತೆಗೆದುಕೊಳ್ಳಲು ಪ್ರೋತ್ಸಾಹ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು. ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಕೃಷ್ಣಪ್ಪ ಅವರು ಮಾತನಾಡಿದರು. ತಾಲ್ಲೂಕು ವೈದ್ಯಾಧಿಕಾರಿ ಸುನಿಲ್, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ದೇವರಾಜು, ದಿವಾಕರ, ಶಾಲೆಯ ಮುಖ್ಯೋಪಾಧ್ಯಯರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, NEWS DESK ಸೆ.13: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.