Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ : ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ : ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ*

ಆಗಷ್ಟ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ಆ.11 NEWS DESK : ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಲ್ಲಿ ಸಂಭವಿಸುವ ಆಕಸ್ಮಿಕ ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತನಿಖಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದು, ಈ ಕುರಿತು ರಾಜ್ಯದ ಎಲ್ಲಾ 30 ಜಿಲ್ಲೆಗಳ ಜಿಲ್ಲಾ ಕೈಗಾರಿಕಾ ಕೇಂದ್ರಗಳ (DIC) ಜಂಟಿ ನಿರ್ದೇಶಕರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಮುಖ್ಯ ಸೂಚನೆ ನೀಡಿ ಆದೇಶ ಹೊರಡಿಸಲಾಗಿದೆ. 2026 ನೇ ಆ.5 ರಂದು ಯಾದಗಿರಿ ಜಿಲ್ಲೆಯ ಕಡಚೂರು ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿತವಾಗಿರುವ M/s CIL Labouratories Pvt Ltd ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಈ ದುರಂತದ ಹಿನ್ನೆಲೆಯಲ್ಲಿ ಜಾಗೃತಗೊಂಡಿರುವ ಇಲಾಖೆಯು, ಕೈಗಾರಿಕೆಗಳಲ್ಲಿ ನಡೆಯುವ ಆಕಸ್ಮಿಕ ಅವಘಡಗಳ ನಿರ್ವಹಣೆ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಚರಣಾ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. :: ಶಾಸನಬದ್ಧ ಇಲಾಖೆಗಳು ಹಾಗೂ ಅವುಗಳ ಜವಾಬ್ದಾರಿಗಳು :: ಕೈಗಾರಿಕಾ ಸುರಕ್ಷತೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಖಾನೆಗಳು, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಶಾಸನಬದ್ಧ ಇಲಾಖೆ/ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ : ಕೈಗಾರಿಕೆಗಳ ಸ್ಥಾಪನೆಗೂ ಮುನ್ನ ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳ ಅನುಸರಣೆಯನ್ನು ಕಡ್ಡಾಯವಾಗಿ ಖಾತರಿಪಡಿಸುವುದು. ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ : ಲೈಸೆನ್ಸ್ ಪ್ರಕ್ರಿಯೆ, ಬಾಯ್ಲರ್ ತಪಾಸಣೆ ನಿಯಮಗಳು ಹಾಗೂ ನಿರ್ದಿಷ್ಟ ಸುರಕ್ಷತಾ ಮಾರ್ಗದರ್ಶಿ ಸೂತ್ರಗಳನ್ವಯ ಕ್ರಮವಹಿಸುವುದು. : ಕಾರ್ಮಿಕ ಇಲಾಖೆ : ಕಾರ್ಮಿಕರ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಉದ್ಯೋಗಿಕ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸುವುದು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ : ರಾಷ್ಟ್ರೀಯ ಕಟ್ಟಡ ಸಂಹಿತೆ (National Building Code – NBC) ನಿಯಮಾವಳಿಗಳನ್ನು ಅನ್ವಯಿಸಿ ನಿಯಂತ್ರಣ ಸಾಧಿಸುವುದು. :: ನೇರ ದೋಷಾರೋಪಣೆಗೆ ತಡೆ ::  ಕೈಗಾರಿಕಾ ಘಟಕಗಳಲ್ಲಿ ದುರಂತಗಳು ನಡೆದಾಗ ನೇರವಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೇಲೆಯೇ ದೋಷಾರೋಪ ಬರುವುದು ಕಂಡುಬರುತ್ತಿದೆ. ಆದರೆ ಪ್ರತಿಯೊಂದು ಶಾಸನಬದ್ಧ ಇಲಾಖೆಗಳ ಸಮನ್ವಯದೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಈ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲಾಗುತ್ತಿದೆ. :: ಮೊದಲ ತನಿಖಾ ವರದಿ (First Investigation Report) : : ಜಿಲ್ಲೆಗಳಲ್ಲಿ ಕೈಗಾರಿಕಾ ಘಟಕಗಳ ಅವಘಡ ಸಂಭವಿಸಿದ ಸಂದರ್ಭಗಳಲ್ಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಕ್ಷಣವೇ ಶಾಸನಬದ್ಧ ಇಲಾಖೆಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಬೇಕು. ಶಾಸನಬದ್ಧ ಇಲಾಖೆಗಳ ಮೂಲಕ ಮೊದಲ ತನಿಖಾ ವರದಿಗಳನ್ನು ಪಡೆದುಕೊಂಡು ಸೂಕ್ತ ಅನುಸರಣಾ ಕ್ರಮಗಳನ್ನು ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಕೈಗಾರಿಕಾಭಿವೃದ್ಧಿ ಹಾಗೂ ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಇವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, NEWS DESK ಸೆ.13: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.