Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ*

ಆಗಷ್ಟ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಆ.12 NEWS DESK : ನಗರದ ರಾಘವೇಂದ್ರ ದೇವಸ್ಥಾನ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಮತ್ತು ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ವೈದ್ಯೆ ಡಾ.ಸುಕೃತಾ ಅವರು ಮಕ್ಕಳ, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ನಡೆಸಿ, ಚುಚ್ಚುಮದ್ದು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾಹಿತಿ ನೀಡಿದರು. ಭಾಗವಹಿಸಿದ್ದ ಮಕ್ಕಳ ತೂಕ ಮತ್ತು ಎತ್ತರವನ್ನು ಪರಿಶೀಲಿಸಿ, ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಎದೆಹಾಲಿನ ಮಹತ್ವ ಕುರಿತು ಮಾಹಿತಿ ನೀಡಿದರು. ತಾಯಿಯ ಎದೆಹಾಲು ಮಗುವಿಗೆ ಕೇವಲ ಆಹಾರವಲ್ಲ; ಅದು ಮಗುವಿನ ಆರೋಗ್ಯ, ಬೆಳವಣಿಗೆ ಹಾಗೂ ರೋಗ ನಿರೋಧಕ ಶಕ್ತಿಗೆ ಪ್ರಕೃತಿಯ ಕೊಡುಗೆಯಾಗಿದೆ. ನವಜಾತ ಶಿಶುವಿಗೆ ಎದೆಹಾಲು ಅತ್ಯುತ್ತಮ ಹಾಗೂ ಸಂಪೂರ್ಣ ಪೌಷ್ಟಿಕ ಆಹಾರವಾಗಿದೆ ಎಂದು ತಿಳಿಸಿದರು. ಹುಟ್ಟಿದ ಒಂದು ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಲು ಪ್ರಾರಂಭಿಸಿ, ಮೊದಲ ಆರು ತಿಂಗಳು ಕೇವಲ ಎದೆಹಾಲನ್ನೇ ನೀಡಬೇಕು. ಆರು ತಿಂಗಳ ನಂತರ ಪೂರಕ ಆಹಾರವನ್ನು ಆರಂಭಿಸಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಎದೆಹಾಲು ಮುಂದುವರಿಸುವುದು ಸೂಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಯುನಿಸೆಫ್ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದರು.
ಹುಟ್ಟಿದ ಒಂದು ಗಂಟೆಯೊಳಗೆ ಎದೆಹಾಲು ನೀಡುವುದರಿಂದ ತಾಯಿ ಮತ್ತು ಮಗುವಿನ ಬಾಂಧವ್ಯ ಗಟ್ಟಿಯಾಗುವುದರ ಜೊತೆಗೆ ಮಗುವಿನ ದೇಹದ ಉಷ್ಣತೆಯನ್ನು ಕಾಪಾಡಲು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು. ಮೊದಲ ಆರು ತಿಂಗಳಲ್ಲಿ ಎದೆಹಾಲಿನ ಹೊರತಾಗಿ ನೀರು, ಜೇನುತುಪ್ಪ, ಕಷಾಯ, ಗ್ಲುಕೋಸ್ ನೀರು ಅಥವಾ ಇತರ ಆಹಾರ ನೀಡಬಾರದು. ವೈದ್ಯಕೀಯ ಕಾರಣಕ್ಕಾಗಿ ಅಗತ್ಯವಿರುವ ಔಷಧಿಗಳನ್ನು ಹೊರತುಪಡಿಸಿ ಮಗುವಿಗೆ ಕೇವಲ ಎದೆಹಾಲನ್ನೇ ನೀಡಬೇಕು ಎಂದು ಸಲಹೆ ನೀಡಿದರು. ಎದೆಹಾಲಿನಲ್ಲಿರುವ ಪ್ರತಿಕಾಯಗಳು ಹಾಗೂ ಇತರ ರಕ್ಷಣಾತ್ಮಕ ಅಂಶಗಳು ಮಗುವನ್ನು ಅತಿಸಾರ, ನ್ಯುಮೋನಿಯಾ ಸೇರಿದಂತೆ ಹಲವು ಸಾಮಾನ್ಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಅಲ್ಲದೆ, ಮಗುವಿನ ಮೆದುಳಿನ ಬೆಳವಣಿಗೆ, ಕಲಿಕೆ ಹಾಗೂ ಅರಿವಿನ ಬೆಳವಣಿಗೆಗೂ ಎದೆಹಾಲು ಸಹಕಾರಿಯಾಗಿದೆ. ಸೂಕ್ತ ಪೌಷ್ಟಿಕಾಂಶ ದೊರೆಯುವುದರಿಂದ ಆರೋಗ್ಯಕರ ತೂಕ ಮತ್ತು ಎತ್ತರದ ಬೆಳವಣಿಗೆಗೆ ಸಹಾಯವಾಗುವುದರೊಂದಿಗೆ ಅಪೌಷ್ಟಿಕತೆ ಹಾಗೂ ಬಾಲ್ಯದ ಹಲವು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ರಂಜಿತ್, ಆಶಾ ಕಾರ್ಯಕರ್ತೆ ಸಾಜಿದಾ, ಅಂಗನವಾಡಿ ಕಾರ್ಯಕರ್ತೆ ಗೀತಾ, ಸಹಾಯಕಿ ಅನಿತಾ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು…

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.