
ಮಡಿಕೇರಿ ಆ.12 NEWS DESK : ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಣಾ ವೇದಿಕೆಗೆ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯುತ್ ಕ್ಷೇತ್ರ, ಗ್ರಾಹಕರ ಹಾಗೂ ಕಾನೂನು ವಿಷಯಗಳಲ್ಲಿ ಅನುಭವ ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿಯನ್ನು ಆಗಸ್ಟ್ 24, 2026ರೊಳಗೆ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಅವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ, ಮಡಿಕೇರಿ ಕಚೇರಿಗೆ ಅಥವಾ ಇಮೇಲ್ eeemdk@cescmysore.org cesceemdk@gmail.com ವಿಳಾಸಕ್ಕೆ ಅರ್ಜಿ ಸಲ್ಲಿಸುವಂತೆ ಚಾ.ವಿ.ಸ.ನಿ.ನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.








