
ಮಡಿಕೇರಿ ಆ.13 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ ಪಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ವಿ.ಪ್ರಸಾದ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಇತರರು ಪಾಲ್ಗೊಳ್ಳಲಿದ್ದಾರೆ.









