Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*
  • *ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*
  • *ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ : ವಿವಿಧೆಡೆ ತಪಾಸಣೆ*
  • *ಆ.16 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಡಗಿಗೆ ಭೇಟಿ*
  • *ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*
  • *ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪುವಂತಾಗಬೇಕು : ಮೆಹರೋಜ್ ಖಾನ್*
  • *ಓಂಕಾರೇಶ್ವರ ಸನ್ನಿಧಿಯಲ್ಲಿ ನಾಟಿ ಕಾರ್ಯ*
  • *ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯವನ್ನು ವಿರೋಧಿಸಬಹುದು, ಆದರೆ ಅವರ ಮಾನವ ಘನತೆಯನ್ನು ಅಲ್ಲ : ವೇದಿಕೆ ಶುದ್ಧೀಕರಣ ನೋವಿನ ವಿಚಾರ : ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್*
  • *ಆ.22 ರಂದು ಭಾಗಮಂಡಲದಲ್ಲಿ 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ : ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ*
  • *ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*

ಆಗಷ್ಟ್ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ, ಆ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಇಲಾಖೆ, ವಿಶೇಷ ಮಕ್ಕಳ ಪೊಲೀಸ್ ಘಟಕ, ಅಕ್ಕಪಡೆ ಹಾಗೂ ಹಾಡಿ ಬುಡಕಟ್ಟು ಸಮುದಾಯದ ಮುಖಂಡರ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿಗಳ ತಂಡವು ಕೆ.ಬಾಡಗ ಗ್ರಾಮ ಪಂಚಾಯಿತಿಯ ಹೊಸಕೊಲ್ಲಿ ಹಾಡಿಗೆ ಭೇಟಿ ನೀಡಿ, ಹಾಡಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿತು.   ಈ ಸಂದರ್ಭದಲ್ಲಿ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹದಿಂದ ಉಂಟಾಗುವ ಪರಿಣಾಮಗಳು, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಲಭ್ಯವಿರುವ ವಿವಿಧ ಸಹಾಯವಾಣಿ ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಲಾಯಿತು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು 181 ಮಹಿಳಾ ಸಹಾಯವಾಣಿ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಾಂತ್ವನ ಕೇಂದ್ರದ ನೆರವು ಪಡೆಯಬಹುದಾಗಿದೆ. ಮಕ್ಕಳ ಸಮಸ್ಯೆಗಳಿಗೆ 1098 ಮಕ್ಕಳ ಸಹಾಯವಾಣಿ ಹಾಗೂ ತುರ್ತು ಸಂದರ್ಭಗಳಲ್ಲಿ 112 ತುರ್ತು ಸಹಾಯವಾಣಿ ಸಂಪರ್ಕಿಸುವಂತೆ ತಿಳಿಸಲಾಯಿತು. ಭೇಟಿಯ ಸಂದರ್ಭದಲ್ಲಿ ಹಾಡಿಯಲ್ಲಿ ಬಸ್ ವ್ಯವಸ್ಥೆಯ ಕೊರತೆಯಿಂದಾಗಿ ಕೆಲವು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿತು. ಬಳಿಕ ಇಲಾಖೆಯ ಅಧಿಕಾರಿಗಳ ತಂಡವು ಸಮಗ್ರ ಬುಡಕಟ್ಟು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಹಯೋಗದೊಂದಿಗೆ ಮಕ್ಕಳನ್ನು ಆಶ್ರಮ ಶಾಲೆಗೆ ದಾಖಲಿಸುವ ಕ್ರಮ ಕೈಗೊಂಡಿತು. ಇದೇ ವೇಳೆ ಹಾಡಿಯ ಯುವತಿಯರು ಹಾಗೂ ಮಹಿಳೆಯರು ಕೌಶಲ್ಯಾಧಾರಿತ ತರಬೇತಿ ಪಡೆಯಲು ಆಸಕ್ತಿ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಅವರಿಗೆ ಅಗತ್ಯವಿರುವ ಕೌಶಲ್ಯಾಧಾರಿತ ತರಬೇತಿ ನೀಡಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಕೊಡಗು ಜಿಲ್ಲಾ ಅಧ್ಯಕ್ಷ ಜಗದೀಶ್, ವಿಶೇಷ ಮಕ್ಕಳ ಪೊಲೀಸ್ ಘಟಕದ ಎಎಸ್‍ಐ ಸುಮತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ಕೇಶಿನಿ ಎಸ್.ಆರ್., ಆಶ್ರಮ ಶಾಲೆಯ ಶಿಕ್ಷಕ ಪ್ರಶಾಂತ್ ಹಾಗೂ ಅಕ್ಕಪಡೆ ತಂಡದ ಸಿಬ್ಬಂದಿಗಳಾದ ಕುಮಾರಿ ಮತ್ತು ಪವಿತ್ರ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*

ಆಗಷ್ಟ್ 14, 2026

*ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ : ವಿವಿಧೆಡೆ ತಪಾಸಣೆ*

ಆಗಷ್ಟ್ 14, 2026

*ಆ.16 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಡಗಿಗೆ ಭೇಟಿ*

ಆಗಷ್ಟ್ 14, 2026

*ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*

ಆಗಷ್ಟ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

*ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ : ವಿವಿಧೆಡೆ ತಪಾಸಣೆ*

ಆಗಷ್ಟ್ 14, 2026

*ಆ.16 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಡಗಿಗೆ ಭೇಟಿ*

ಆಗಷ್ಟ್ 14, 2026

*ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*

ಆಗಷ್ಟ್ 14, 2026

*ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪುವಂತಾಗಬೇಕು : ಮೆಹರೋಜ್ ಖಾನ್*

ಆಗಷ್ಟ್ 14, 2026

*ಓಂಕಾರೇಶ್ವರ ಸನ್ನಿಧಿಯಲ್ಲಿ ನಾಟಿ ಕಾರ್ಯ*

ಆಗಷ್ಟ್ 14, 2026

*ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯವನ್ನು ವಿರೋಧಿಸಬಹುದು, ಆದರೆ ಅವರ ಮಾನವ ಘನತೆಯನ್ನು ಅಲ್ಲ : ವೇದಿಕೆ ಶುದ್ಧೀಕರಣ ನೋವಿನ ವಿಚಾರ : ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್*

ಆಗಷ್ಟ್ 14, 2026

*ಆ.22 ರಂದು ಭಾಗಮಂಡಲದಲ್ಲಿ 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ : ಸ್ಪರ್ಧಿಗಳು ಆ.21 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ*

ಆಗಷ್ಟ್ 14, 2026

*ಸಿಎಂ ಆಗಮನದ ಸಂದರ್ಭ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಮನವಿ*

ಆಗಷ್ಟ್ 14, 2026

*ಆ.17 ರಂದು ಸಿಎನ್‌ಸಿ ‘ಕೊಡವ ಜನಸಂಪರ್ಕ ಅಭಿಯಾನ’ ಮರೇನಾಡಿನ ಬಿರುನಾಣಿಯಿಂದ ಆರಂಭ*

ಆಗಷ್ಟ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.