Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*

ಆಗಷ್ಟ್ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಆ.14 NEWS DESK :  ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರನ್ನು ಆಯೋಗದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೇಂದ್ರ ಲೋಕಸೇವಾ ಆಯೋಗ (UPSC) ಮಾದರಿಯಲ್ಲಿ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಪದ್ಧತಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ 3 ರಿಂದ 5 ತಿಂಗಳೊಳಗೆ ಫಲಿತಾಂಶ ಪ್ರಕಟಿಸಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಉದ್ದೇಶವನ್ನು ಹೆಚ್. ಪ್ರಸನ್ನ ಅವರು ವಿವರಿಸಿದರು. ನೇಮಕಾತಿ ಪರೀಕ್ಷೆಗಳು ಪೂರ್ಣಗೊಂಡ ಕೂಡಲೇ ಆಯಾ ಜಿಲ್ಲೆಗಳಲ್ಲಿ ಲಭ್ಯವಿರುವ ಸ್ಕ್ಯಾನಿಂಗ್ ಯಂತ್ರಗಳ ಮೂಲಕ ಔಒಖ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ, ಆಯೋಗದ ಅಧಿಕೃತ ಅಂತರ್ಜಾಲ ತಾಣದಲ್ಲಿ ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ಅಭ್ಯರ್ಥಿಗಳು ತಮ್ಮ ಔಒಖ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಅನುಕೂಲವಾಗಲಿದೆ. ಅಲ್ಲದೆ, ಪರೀಕ್ಷೆ ಪೂರ್ಣಗೊಂಡ ಒಂದು ವಾರದೊಳಗೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು. ಸಭೆಯಲ್ಲಿ ಆಯೋಗದ ಸದಸ್ಯರು ವಿವಿಧ ಸಲಹೆಗಳನ್ನು ನೀಡಿದ್ದು, ನೇಮಕಾತಿ ಪ್ರಕ್ರಿಯೆಗಳನ್ನು ಸಂಪೂರ್ಣ ಪಾರದರ್ಶಕವಾಗಿ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು. ಸರ್ಕಾರಿ ಉದ್ಯೋಗದ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಯಾವುದೇ ವ್ಯಕ್ತಿಗಳು ನೀಡುವ ಆಮಿಷಗಳಿಗೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ಅವಲಂಬಿಸುವಂತೆ ಆಯೋಗವು ಮನವಿ ಮಾಡಿದೆ. ಯಾವುದೇ ರೀತಿಯ ಮಧ್ಯವರ್ತಿಗಳ ಅಥವಾ ಅನಧಿಕೃತ ವ್ಯಕ್ತಿಗಳ ಭರವಸೆಗಳಿಗೆ ಬಲಿಯಾಗದೆ ಪರೀಕ್ಷೆಗಳಿಗೆ ಸಿದ್ಧತೆಗಳನ್ನು ಮಾಡಿಕೊಂಡು ಸರ್ಕಾರದ ನೇಮಕಾತಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಲೋಕಸೇವಾ ಆಯೋಗದ ಮಾದರಿಯ ಪಾರದರ್ಶಕತೆ, ತಂತ್ರಜ್ಞಾನ ಬಳಕೆ ಮತ್ತು ತ್ವರಿತ ನೇಮಕಾತಿ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಿ ಸರ್ಕಾರದ ಆಶಯದಂತೆ ಕಾರ್ಯನಿರ್ವಹಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.