ಮಡಿಕೇರಿ NEWS DESK ಆ.15 : ಸಿದ್ದಾಪುರ ಸಮೀಪದ ಇಂಜಿಲಗೆರೆ ಭಗವತಿ ಯುವಕ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಹಿರಿಯರಾದ ವೆಂಕಪ್ಪ ರೈ ಅವರು ಧ್ವಜಾರೋಹಣ ನೆರವೇರಿಸಿ ಗೌರವ ಅರ್ಪಿಸಿದರು. ಭಗವತಿ ಯುವಕ ಸಂಘದ ಪ್ರಮುಖರು, ಗ್ರಾಮಸ್ಥರು ಹಾಗೂ ಮಕ್ಕಳು ಪಾಲ್ಗೊಂಡು ಸಿಹಿ ಹಂಚಿ ಸಂಭ್ರಮಿಸಿದರು.









