






ಮಡಿಕೇರಿ ಆ.15 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳು ಧ್ವಜವಂದನೆ ಸಲ್ಲಿಸಿದರು. ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಹಾಗೂ ಶಾಲೆಯ ಪ್ರಾಂಶುಪಾಲೆ ಬಾಳೆಯಡ ಸವಿತ ಪೂವಯ್ಯ ಅವರು ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಕಾರ್ಯಾಧ್ಯಕ್ಷ ಕೇಕಡ ವಿಜುದೇವಯ್ಯ, ಕರೆಸ್ಪಾಂಡೆಂಟ್ ಕನ್ನಂಡ ಕವಿತಾ ಬೊಳ್ಳಪ್ಪ, ನಿರ್ದೇಶಕರಾದ ಬೊಪ್ಪಂಡ ಸರಳಾ ಕರುಂಬಯ್ಯ, ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಮುದ್ದಪ್ಪ, ಮೂವೆರ ಜಯರಾಂ, ಪೆಮ್ಮುಡಿಯಂಡ ಉತ್ತಪ್ಪ ಹಾಗೂ ಪುಲ್ಲೆರ ವಸಂತ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.









