




ಮಡಿಕೇರಿ ಆ.15 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜವಂದನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಕಾರ್ಯದರ್ಶಿ ಬೊಪ್ಪಂಡ ಸರಳಾ ಕರುಂಬಯ್ಯ, ನಿರ್ದೇಶಕರಾದ ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಮುದ್ದಪ್ಪ, ಮೂವೆರ ಜಯರಾಂ, ಪೆಮ್ಮುಡಿಯಂಡ ಉತ್ತಪ್ಪ, ಪುಲ್ಲೆರ ವಸಂತ, ವ್ಯವಸ್ಥಾಪಕಿ ಮೈನಾ ಬೋಜಮ್ಮ, ಸೌಹಾರ್ದ ಸಹಕಾರ ಸಂಘದ ಉಪಾಧ್ಯಕ್ಷ ಕುಡುವಂಡ ಉತ್ತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಮಾ, ಕೊಡವ ವಿದ್ಯಾನಿಧಿಯ ವ್ಯವಸ್ಥಾಪಕ ಮೇದುರ ಕಾವೇರಪ್ಪ, ನಾಟೋಳಂಡ ಪ್ರಕಾಶ್, ಕುಪಂಡ ವಸಂತ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.









