
ಮಡಿಕೇರಿ NEWS DESK ಆ.16 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ ಮುಖ್ಯಮಂತ್ರಿ ಅವರು, ನಂತರ ಭಗಂಡೇಶ್ವರ ದೇವಾಲಯದಲ್ಲಿ ಹೆಚ್ಚಿನ ಮಳೆ, ಬೆಳೆಯಾಗಿ ನಾಡಿನಲ್ಲಿ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ತರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಮಹಾಗಣಪತಿ, ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇ0ದ್ರಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ವಯ್ಯ,
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು ಇತರರು ಇದ್ದರು.









