Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
  • *ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
  • *ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*
  • *ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.17 NEWS DESK : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದರೂ ಅರಣ್ಯ ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಅರಣ್ಯ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ಸಿದ್ದಾಪುರ ಸಮೀಪದ ಮಾಲ್ದಾರೆಯ ಘಟ್ಟದಳ್ಳ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‍ಗಳನ್ನು ಕಿತ್ತು ಕಛೇರಿಯ ಒಳನುಗ್ಗುವ ಪ್ರಯತ್ನಕ್ಕೆ ಮುಂದಾದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಈ ಸಂದರ್ಭ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ನಡೆಯಿತು. ಪರಿಸ್ಥಿತಿ ಕೈಮೀರಬಹುದೆನ್ನುವ ಕಾರಣದಿಂದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಕರೆಸಲಾಯಿತು.
ಈ ಸಂದರ್ಭ ಪ್ರತಿಭಟನಾಕಾರರ ಬಳಿಗೆ ಬಂದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ ಅವರನ್ನು ಪ್ರತಿಭಟನಾಕಾರರು ತೀವ್ರ ತರಾಟೆಗೆ ತೆಗೆದುಕೊಂಡರು. ಮಾಲ್ದಾರೆಯಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಮಡಿಕೇರಿಗೆ ತಂದ ಉದ್ದೇಶವೇನು. ಕಾಡಾನೆ ಮಾನವ ಸಂಘರ್ಷ ತಡೆಯಲು ತಮಗೆ ಸಾಧ್ಯವಾಗುವುದಿಲ್ಲ ಎಂದಾದಲ್ಲಿ ಕೆಲಸ ಬಿಟ್ಟು ಹೋಗಿ, ಇಲ್ಲವೆ ವರ್ಗಾವಣೆ ಪಡೆದು ಕೊಡಗಿನಿಂದ ಹೊರ ಹೋಗಿ ಎಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಆನೆ ದಾಳಿಯನ್ನು ತಡೆಯಲಾಗದವರು, ಜನರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸ್ ಸಹಕಾರ ಪಡೆಯುತ್ತಿದ್ದಾರೆ, ಪ್ರಸ್ತುತ ಕಾಡಾನೆಗಳ ಹಾವಳಿ ಜಿಲ್ಲೆಯಾದ್ಯಂತ ಕಂಡು ಬರುತ್ತಿದೆ. ಇದರಿಂದ ಸಾಕಷ್ಟು ಜೀವಹಾನಿಯೂ ಸಂಭವಿಸುತ್ತಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಯಡವನಾಡಿನಲ್ಲಿ ಕಾಡಾನೆ ದಾಳಿ ಪ್ರಕರಣದ ಬಳಿಕ ಕಾಡಾನೆಗಳನ್ನು ಸ್ಥಳಾಂತರಿಸುವುದಾಗಿ ತಿಳಿಸಲಾಗಿತ್ತು. ಆದರೆ, ಇಲ್ಲಿಯವರೆಗೂ ಆ ನಿಟ್ಟಿನ ಪ್ರಯತ್ನ ನಡೆದಿಲ್ಲ. ಇದಕ್ಕೆ ಕಾರಣವೇನು, ನಿಮ್ಮ ಸಂಕಷ್ಟಗಳೇನು ಎಂಬುವುದನ್ನು ತಿಳಿಸುವಂತೆ ಆಗ್ರಹಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಮಾತನಾಡಿ, ವರ್ಷದ ಹಿಂದೆಯಷ್ಟೆ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿಯೊಬ್ಬಾಕೆ ಸಾವನ್ನಪ್ಪಿದ್ದಳು. ಆ ಹಂತದಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳದಿರುವುದೇ ಇಂದು ಸಮಸ್ಯೆ ಗಂಭೀರತೆಯನ್ನು ಪಡೆಯಲ್ಲು ಮತ್ತು ಜೀವಹಾನಿ ಹೆಚ್ಚಾಗಲು ಕಾರಣವೆಂದು ಆರೋಪಿಸಿದರು. *ಸಭೆ ನಡೆಸಿ*
ಕಾಡಾನೆ ದಾಳಿ ಸಮಸ್ಯೆಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಪಕ್ಷಗಳು ಹಾಗೂ ಪ್ರಮುಖರನ್ನು ಒಳಗೊಂಡಂತೆ ಸಭೆಯೊಂದನ್ನು ಇದೇ ಆ.20ರ ಒಳಗಾಗಿ ಕರೆಯಬೇಕೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದರು. *ಶೀಘ್ರ ಕಾರ್ಯಾಚರಣೆ* ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ, ಸೋನಲ್ ವೃಷ್ಣಿ ಅವರು ಇಲಾಖೆಯ ಮೇಲಧಿಕಾರಿಗಳನ್ನು ಸಂಪರ್ಕಿಸಿ ಇದೇ ಆ.22ಕ್ಕೆ ಸಭೆ ನಡೆಸುವ ಪ್ರಯತ್ನ ಮಾಡಲಾಗುವುದು ಮತ್ತು ಮೂರು ಕಾಡಾನೆಗಳ ಸೆರೆಗೆ ಮಂಗಳವಾರದಿಂದಲೇ ಕಾರ್ಯಾಚರಣೆÉ ಆರಂಭಿಸಲಾಗುವುದು ಎಂದರು. ಕಾಡಾನೆ ಹಾವಳಿ ತಡೆಗೆ 8ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ನಡೆಯಲಿದೆ. ಹೆಚ್ಚುವರಿ 8 ಕಿ.ಮೀ. ಕಾಮಗಾರಿಗೆ ವಿಸ್ತøತ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಜಿಲ್ಲೆಯ 560 ಗ್ರಾಮಗಳ ಪೈಕಿ 340 ಗ್ರಾಮಗಳಲ್ಲಿ ಕಾಡಾನೆ ಹಾವಳಿ ಇದ್ದು, ಇದನ್ನು ತಡೆಗಟ್ಟುವ ಸಲುವಾಗಿ ಅಗತ್ಯ ಮ್ಯಾಪಿಂಗ್ ಮಾಡಿ ಯೋಜನೆಯನ್ನು ರೂಪಿಸಲಾಗುತ್ತದೆ. ಸುಮಾರು 200 ಹೆಕ್ಟೇರ್ ಪ್ರದೇಶದಲ್ಲಿ ಕಾಡಾನೆಗಳ ಆಹಾರವಾಗಿರುವ ಬಿದಿರು ಬೆಳೆಯುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಆ.17 NEWS DESK : ಕಿಡಗರಹಳ್ಳಿ ಬೈತುರಪ್ಪ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು.…

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026

*ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಆಗಷ್ಟ್ 17, 2026

*ಕಾಡಾನೆಗಳ ದಾಳಿಯಿಂದ ಬೆಳೆ ಹಾನಿ*

ಆಗಷ್ಟ್ 17, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 2026

*ಮರೆನಾಡಿನ ಬಿರುನಾಣಿಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವ ಜನಸಂಪರ್ಕ ಅಭಿಯಾನ ಆರಂಭ*

ಆಗಷ್ಟ್ 17, 2026

*ಪತ್ರಕರ್ತ ಶ್ರೀಧರ್ ಹೂವಲ್ಲಿ ರಚಿಸಿರುವ ಕೊಡವ ಮಕ್ಕಡ ಕೂಟದ 126ನೇ ಪುಸ್ತಕ “ಕಥಾಂಜಲಿ” ಲೋಕಾರ್ಪಣೆ : ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಬೇಕು : ಅಡಗೂರು ಹೆಚ್.ವಿಶ್ವನಾಥ್ ಅಭಿಮತ*

ಆಗಷ್ಟ್ 16, 2026

*ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ, ವಿಶೇಷ ಪೂಜೆ*

ಆಗಷ್ಟ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.