Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, ಆ.17 NEWS DESK : ನಾಕೂರು–ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ಲಗ್ಗೆಯಿಟ್ಟು ಕಾಫಿ, ಅಡಿಕೆ ಹಾಗೂ ತೆಂಗಿನ ಮರಗಳನ್ನು ನಾಶಪಡಿಸಿದೆ ಎಂದು ಪ್ರಗತಿಪರ ಕೃಷಿಕ ಹೆರೂರು ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ.  ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಭಾನುವಾರ ಚಂದ್ರಶೇಖರ್ ಅವರ ತೋಟಕ್ಕೆ ಕಾಡಾನೆಗಳು ನುಗ್ಗಿ ಕಟಾವಿಗೆ ಬಂದಿದ್ದ ಸುಮಾರು 20 ಫಸಲು ಭರಿತ ಅಡಿಕೆ ಮರಗಳು, ರೋಬಸ್ಟಾ ಕಾಫಿ ಗಿಡಗಳು ಹಾಗೂ ತೆಂಗಿನ ಮರಗಳನ್ನು ಬುಡಸಮೇತ ಕಿತ್ತು ನಾಶಪಡಿಸಿವೆ. ಇದರಿಂದ ರೂ.80 ಸಾವಿರಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಇದೇ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿ ಸುಮಾರು 100 ಅಡಿಕೆ ಮರಗಳನ್ನು ಬುಡಸಮೇತ ಮುರಿದು ನಾಶಪಡಿಸಿದ್ದವು. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು. ಆ ಘಟನೆಯ ನೋವು ಮಾಸುವ ಮುನ್ನವೇ ಇದೀಗ ಮತ್ತೆ ಕಟಾವಿಗೆ ಬಂದಿದ್ದ ಕಾಫಿ ಹಾಗೂ ಅಡಿಕೆ ಬೆಳೆ ನಾಶವಾಗಿರುವುದು ಕೃಷಿಕರಿಗೆ ಮತ್ತಷ್ಟು ಸಂಕಷ್ಟ ತಂದಿದೆ.
ರೈತರು ಬೆಳೆದ ಫಸಲಿಗೆ ಸೂಕ್ತ ಬೆಲೆ ಸಿಗದೆ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಿದ್ದರೂ ಕಾಡಾನೆಗಳು ಬೆಳೆಗಳನ್ನು ನಾಶಪಡಿಸುತ್ತಿವೆ ಎಂದು ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಿಂದಾಗ್ಗೆ ಕಾಡಾನೆಗಳು ತೋಟಗಳಿಗೆ ಲಗ್ಗೆಯಿಡುತ್ತಿರುವುದರಿಂದ ಕೃಷಿಕರು ನಿರಂತರವಾಗಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಳ್ಳಬೇಕು ಹಾಗೂ ಬೆಳೆ ನಷ್ಟಕ್ಕೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೃಷಿಕರು ಒತ್ತಾಯಿಸಿದ್ದಾರೆ.
ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡದಿದ್ದಲ್ಲಿ ಅರಣ್ಯ ಇಲಾಖೆ ಕಚೇರಿ ಎದುರು ರೈತರನ್ನು ಒಗ್ಗೂಡಿಸಿ ಉಗ್ರ ಹೋರಾಟ ನಡೆಸುವುದಾಗಿ ಕೃಷಿಕರು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಕಾಡಾನೆಗಳ ನಿರಂತರ ಹಾವಳಿ, ಆನೆ–ಮಾನವ ಸಂಘರ್ಷ ನಿಯಂತ್ರಣದಲ್ಲಿನ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಪರಿಹಾರ ವಿತರಣೆಯಲ್ಲಿನ ವಿಳಂಬ ಧೋರಣೆಯನ್ನು ಖಂಡಿಸಿ ರೈತ ಸಂಘದ ವತಿಯಿಂದ ಕುಶಾಲನಗರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತಾಪಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ರೈತ ಸಂಘದ ಮುಖಂಡ ಎನ್.ಸಿ.ಪೊನ್ನಪ್ಪ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.