
ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿoದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿ.ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ವಿರುದ್ಧದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕೂ ಮೊದಲೇ ಆರೋಪಿ ಸ್ಥಾನದಲ್ಲಿರುವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯ ಸರಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ನಾಗೇದ್ರ ಅವರನ್ನು ಸಚಿವ ಸಂಪುಟದಿoದ ಕೈಬಿಡುವಲ್ಲಿಯವರೆಗೆ ಬಿಜೆಪಿ ನಿರಂತರ ಪ್ರತಿಭಟನೆ ನಡೆಸಲಿದೆ ಎಂದು ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.









