Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ ಮಾಡಿರುವ ಅನುದಾನ ಮತ್ತು ಅರಣ್ಯ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಶಾಸಕದ್ವಯರು ಶ್ವೇತಪತ್ರ ಹೊರಡಿಸಬೇಕು ಮತ್ತು ವನ್ಯಜೀವಿ ದಾಳಿ ತಡೆಗೆ ಶಾಶ್ವತ ಯೋಜನೆ ರೂಪಿಸಲು ಸರಕಾರ ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಅಮಾಯಕ ಮಾನವ ಜೀವಗಳು ನಿರಂತರವಾಗಿ ಬಲಿಯಾಗುತ್ತಿವೆ. ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದರೂ ರಾಜ್ಯ ಸರಕಾರಕ್ಕೆ ಕೊಡಗಿನ ಮೇಲೆ ಕರುಣೆಯೇ ಇಲ್ಲದಾಗಿದೆ. ಜಿಲ್ಲೆಯ ಶಾಸಕರು ಸರಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿಲ್ಲವೆಂದು ಟೀಕಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ಬ್ಯಾರಿಕೇಡ್ ಅಳವಡಿಕೆ ಮತ್ತು ಆನೆ ಕಂದಕಗಳ ನಿರ್ಮಾಣದಿಂದ ಕಾಡಾನೆಗಳ ಉಪಟಳ ನಿಯಂತ್ರಣದಲ್ಲಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಗತ್ಯ ಕ್ರಮ ಕೈಗೊಳ್ಳದೆ ಇರುವುದರಿಂದ ವನ್ಯಜೀವಿಗಳ ದಾಳಿ ನಿಯಂತ್ರಣ ಮೀರಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಎಲ್ಲಾ ಕ್ಷೇತ್ರಗಳ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ರಾಜ್ಯ ಸರಕಾರ ಪ್ರತಿವರ್ಷ ಬಜೆಟ್ ನಲ್ಲಿ ಕಾಡಾನೆ ಉಪಟಳ ತಡೆಗೆ ಅನುದಾನ ಘೋಷಿಸಿದೆಯೇ ಹೊರತು ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿದ್ದಾಗ ನೀಡಿದ್ದ ಭರವಸೆಗಳು ಯಾವುದೂ ಈಡೇರಿಲ್ಲ. ಕೊಡಗಿನ ಜನರನ್ನು ಕತ್ತಲೆಯಲ್ಲಿಟ್ಟಿರುವ ಅರಣ್ಯ ಇಲಾಖೆಯ ಬಳಿ ಕಾಡಾನೆ ದಾಳಿಯನ್ನು ತಡೆಯುವ ಯಾವುದೇ ಸ್ಪಷ್ಟ ಯೋಜನೆಗಳಿಲ್ಲ. ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಅರಿಯದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರು ಅನುಭವಿಸುತ್ತಿರುವ ಕಷ್ಟನಷ್ಟಗಳ ಬಗ್ಗೆ ಅಧ್ಯಯನ ನಡೆಸುತ್ತಿಲ್ಲ. ಅರಣ್ಯ ಇಲಾಖೆ ರಾಜ್ಯ ಸರಕಾರದ ಹಿಡಿತದಲ್ಲಿಲ್ಲ ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿರುವ ರಾಮಲಿಂಗಾ ರೆಡ್ಡಿ ಅವರು ಈ ತಿಂಗಳ ಕೊನೆಯಲ್ಲಿ ಕೊಡಗು ಜಿಲ್ಲೆಗೆ ಬರುವುದಾಗಿ ಭರವಸೆ ನೀಡಿದ್ದಾರೆ. ಅರಣ್ಯ ಸಚಿವರ ಆಗಮನದಿಂದ ಸಮಸ್ಯೆ ಬಗೆಹರಿದು ಬಿಡುತ್ತದೆ ಎನ್ನುವ ಭ್ರಮೆ ಯಾರಿಗೂ ಬೇಡ. ಈ ಹಿಂದೆಯೂ ಅನೇಕ ಅರಣ್ಯ ಸಚಿವರು ಜಿಲ್ಲೆಗೆ ಬಂದು ಸಭೆ ನಡೆಸಿ ಹೋಗಿದ್ದಾರೆ. ಆದರೆ ಇಲ್ಲಿಯವರೆಗೆ ವನ್ಯಜೀವಿ ಉಪಟಳದ ವಿರುದ್ಧ ಯಾವುದೇ ಶಾಶ್ವತ ಪರಿಹಾರ ದೊರೆತ್ತಿಲ್ಲ.
ಅರಣ್ಯ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಸಾಲದು, ಗ್ರಾಮಸ್ಥರ ಹಾಗೂ ರೈತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಬೇಕು. ತಜ್ಞರಿಂದ, ಪ್ರಾಣಿ ಪ್ರಿಯರಿಂದ ಹಾಗೂ ಪರಿಸರವಾದಿಗಳಿಂದ ಸಲಹೆಯನ್ನು ಪಡೆದು ಶಾಶ್ವತ ಪರಿಹಾರಕ್ಕೆ ಯೋಜನೆಯನ್ನು ರೂಪಿಸಬೇಕು. ಈ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರಕಾರ ಕೊಡಗು ಜಿಲ್ಲೆಗೆ ಪ್ರತ್ಯೇಕವಾಗಿ ವಾರ್ಷಿಕ 500 ಕೋಟಿ ರೂ. ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ…

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.