
ಮಡಿಕೇರಿ NEWS DESK ಆ.20 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 49ನೇ ವರ್ಷದ ಅದ್ಧೂರಿ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 26ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಪೂಜೆ ನಡೆಯಲಿದೆ. ಬಳಿಕ 13 ದಿನಗಳ ಕಾಲ ಪ್ರತಿದಿನ ಸಂಜೆ ಭಜನೆ ಮತ್ತು ಮಹಾಪೂಜೆ ನಡೆಯಲಿದೆ. ಸೆಪ್ಟೆಂಬರ್ 23ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 26ರಂದು ಮಹಾಪೂಜೆಯ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ಧೂರಿ ಶೋಭಾಯಾತ್ರೆಯ ಮೂಲಕ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಕೊಂಡೊಯ್ದು ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಸೆಪ್ಟೆಂಬರ್ 20ರಂದು ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ಕೂಡ ಆಯೋಜಿಸಲಾಗಿದೆ.
ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಹಾಗೂ ತನು, ಮನ, ಧನ ಸಹಾಯದ ಮೂಲಕ ಸಹಕರಿಸುವಂತೆ ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಮನವಿ ಮಾಡಿದ್ದಾರೆ.









