Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.20 : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇಗುಲದ ಮುಂಭಾಗದಲ್ಲಿರುವ ಕುದುಕುಳಿ ಕುಶಾಲಪ್ಪನವರ ಗದ್ದೆಯಲ್ಲಿ ಪ್ರಥಮ ವರ್ಷದ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆ. ಗೌಡ ಯುವ ಒಕ್ಕೂಟದ ಅಧ್ಯಕ್ಷ ಭರತ್ ಕಾವೇರಿಮನೆ ಅವರು ಕ್ರೀಡಾಕೂಟದ ವಿವರಗಳನ್ನು ನೀಡಿ, ಆ.29 ರಂದು ಕೆಸರುಗದ್ದೆಯ ಕ್ರಿಕೆಟ್ ಪಂದ್ಯಾವಳಿ ಆಯೋಜಿತವಾಗಿದ್ದು, ಈಗಾಗಲೆ 24 ತಂಡಗಳು ನೋಂದಣಿಯಾಗಿದೆ. 3 ಓವರ್‌ಗಳಿಗೆ ಸೀಮಿತವಾದ ಈ ಪಂದ್ಯಾವಳಿಯನ್ನು ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಪಂದ್ಯಾವಳಿ ವಿಜೇತ ತಂಡಕ್ಕೆ 10 ಸಾವಿರ ರೂ., ದ್ವಿತೀಯ 8 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಗಳನ್ನು ಬಹುಮಾನವಾಗಿ ವಿತರಿಸಲಾಗುತ್ತದೆಂದರು. ಆ.30 ರಂದು ಬೆಳಗ್ಗೆ 10 ಗಂಟೆಗೆ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾವಳಿ ನಡೆಯಲಿದ್ದು, ಇದನ್ನು ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಉದ್ಘಾಟಿಸಲಿದ್ದಾರೆ. ಪಂದ್ಯಾವಳಿ ವಿಜೇತ ತಂಡಕ್ಕೆ 10 ಸಾವಿರ, ದ್ವಿತೀಯ 8 ಸಾವಿರ ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತದೆಂದರು. ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾವಳಿಯನ್ನು ಒಕ್ಕೂಟದ ಖಜಾಂಚಿ ಕಾವೇರಿಮನೆ ಸುಗು ಅವರು ಉದ್ಘಾಟಿಸಲಿದ್ದು, ವಿಜೇತ ತಂಡಕ್ಕೆ 10 ಸಾವಿರ ಮತ್ತು ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 8 ಸಾವಿರ ರೂ.ನಗದು ಬಹುಮಾನ ನೀಡಲಾಗುತ್ತದೆ. ಮಹಿಳೆೆಯರು ಮತ್ತು ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು, ಪ್ರತಿ ವಿಭಾಗದ ವಿಜೇತ ತಂಡಗಳಿಗೆ 15 ಸಾವಿರ ನಗದು, ದ್ವ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 10 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಪಂದ್ಯಾವಳಿಯನ್ನು ಒಕ್ಕೂಟದ ಕ್ರೀಡಾಧ್ಯಕ್ಷರಾದ ಬಾರಿಕೆ ಅರುಣ್ ಉದ್ಘಾಟಿಸಲಿದ್ದಾರೆಂದರು. ವಿವಿಧ ವಿಭಾಗಗಳಲ್ಲಿ ಓಟದ ಸ್ಪರ್ಧೆ- ಕೆಸರು ಗದ್ದೆ ಕ್ರೀಡಾಕೂಟದ ಪ್ರಮುಖ ಆಕರ್ಷಣೆಯಾಗಿ ವಿವಿಧ ವಿಭಾಗಗಳಲ್ಲಿ ಓಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಎಲ್‌ಕೆಜಿ-ಯುಕೆಜಿ ಮತ್ತು 1ನೇ ತರಗತಿ ವಿಭಾಗ, 2 ರಿಂದ 4ನೇ ತರಗತಿ ಮಕ್ಕಳ ವಿಭಾಗ, 5 ರಿಂದ 7ನೇ ತರಗತಿವರೆಗಿನ ಮಕ್ಕಳ ವಿಭಾಗ, ಪ್ರೌಢಶಾಲಾ ವಿಭಾಗ, ಪದವಿ ಮತ್ತು ಪದವಿಪೂರ್ವ ವಿಭಾಗ, 30 ವರ್ಷ ಮೇಲ್ಪಟ್ಟವರ ವಿಭಾಗ, 50 ವರ್ಷ ಮೇಲ್ಪಟ್ಟವರ ವಿಭಾಗಗಳಲ್ಲಿ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ಹೆಚ್ಚಿನ ಮಾಹಿತಿಗಾಗಿ ಒಕ್ಕೂಟದ ಅಧ್ಯಕ್ಷ ಭರತ್ ಕಾವೇರಿಮನೆ ಅವರನ್ನು ಮೊ.8431515404 ಮೂಲಕ ಸಂಪರ್ಕಿಸಬಹುದು. ಸಮಾರೋಪ- ಸಮಾರೋಪ ಸಮಾರಂಭ ಸಂಜೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಬಾರಿಕೆ ರತನ್, ಖಜಾಂಚಿ ದೀಪಕ್ ಬಾರಿಕೆ, ಉಪಾಧ್ಯಕ್ಷ ಬಾರಿಕೆ ಲೋಕೇಶ್, ಕ್ರೀಡಾಧ್ಯಕ್ಷ ಬಾರಿಕೆ ಅರುಣ್ ಹಾಗೂ ಕಾವೇರಿಮನೆ ಸುಗು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ…

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.