Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.20 NEWS DESK : ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಶ್ರಯದಲ್ಲಿ ಡಿ.25 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್’ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕುಶಾಲನಗರ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ತಿಳಿಸಿದರು. ಕುಶಾಲನಗರದ ಕನ್ನಿಕಾ ಇಂಟರ್‌ನ್ಯಾಷನಲ್ ಆವರಣದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಪೀಳಿಗೆಯನ್ನು ಅಂತರರಾಷ್ಟ್ರೀಯ ಮಟ್ಟದ ಉದ್ಯಮಿಗಳನ್ನಾಗಿ ರೂಪಿಸುವ ಉದ್ದೇಶದಿಂದ ಸಮಾವೇಶದಲ್ಲಿ ಗುಣಮಟ್ಟದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಉದ್ಯೋಗ ಅರಸುವ ಬದಲು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಲು ಯುವಜನತೆಗೆ ಅಗತ್ಯವಾದ ಮಾರ್ಗದರ್ಶನ, ತರಬೇತಿ ಹಾಗೂ ಪ್ರೇರಣೆಯನ್ನು ನೀಡಲಾಗುವುದು. ನವೋದ್ಯಮಗಳ ಸ್ಥಾಪನೆ, ಈಗಿರುವ ವ್ಯಾಪಾರ-ಉದ್ಯಮಗಳ ಅಭಿವೃದ್ಧಿ, ಆರ್ಥಿಕ ಪಾಲುದಾರಿಕೆ, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸದ್ಬಳಕೆ, ಆಮದು-ರಫ್ತು, ರಿಯಲ್ ಎಸ್ಟೇಟ್, ಆಧುನಿಕ ಉದ್ಯಮಗಳು, ಸ್ಪರ್ಧಾತ್ಮಕ ಸವಾಲುಗಳು, ಕೃಷಿ ಚಟುವಟಿಕೆಗಳ ವೈವಿಧ್ಯತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಹೊಸ ಆವಿಷ್ಕಾರಗಳ ಅಳವಡಿಕೆ ಕುರಿತು ಪರಿಣಿತರಿಂದ ಮಾಹಿತಿ ಮತ್ತು ಸಲಹೆ ನೀಡಲಾಗುವುದು ಎಂದು ಹೇಳಿದರು.ವಿಶ್ವದ ಪ್ರತಿಷ್ಠಿತ ಪ್ರೇರಣಾದಾಯಕ ಭಾಷಣಕಾರರು, ಅನುಭವಿಗಳು ಹಾಗೂ ಸಾಧಕರು ಯುವಜನತೆಗೆ ಮಾರ್ಗದರ್ಶನ ನೀಡಲಿದ್ದಾರೆ. ದಕ್ಷಿಣ ಭಾರತದ ಐದು ರಾಜ್ಯಗಳ ಸಮುದಾಯದ ಗಣ್ಯರು, ಪ್ರತಿನಿಧಿಗಳು, ಕರ್ನಾಟಕದ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಸಚಿವರು ಹಾಗೂ ರಾಜ್ಯದ ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು. ಸುಮಾರು ರೂ.15 ಕೋಟಿ ವೆಚ್ಚದಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶದಲ್ಲಿ 1.5 ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಇಂತಹ ಸಮಾವೇಶ ನಡೆಸುವ ಉದ್ದೇಶವಿದ್ದು, ಮುಂದಿನ ಐದು ವರ್ಷಗಳಲ್ಲಿ ಸುಮಾರು 5 ಸಾವಿರ ನವೋದ್ಯಮಗಳ ಸ್ಥಾಪನೆ ಹಾಗೂ 5 ಲಕ್ಷ ಉದ್ಯೋಗಗಳ ಸೃಷ್ಟಿ ಗುರಿಯನ್ನು ಹೊಂದಲಾಗಿದೆ ಎಂದು ನಾಗೇಂದ್ರ ಪ್ರಸಾದ್ ತಿಳಿಸಿದರು. ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕೇವಲ ಸಂಘಟನೆಯಾಗಿ ಉಳಿಯದೆ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಕಲ್ಪವೃಕ್ಷದಂತೆ ಕಾರ್ಯನಿರ್ವಹಿಸುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗೆ ರೂ.40 ಕೋಟಿಗೂ ಅಧಿಕ ಮೊತ್ತವನ್ನು ಅಶಕ್ತರು ಹಾಗೂ ಅಗತ್ಯವಿರುವವರಿಗೆ ನೆರವಿನ ರೂಪದಲ್ಲಿ ನೀಡಲಾಗಿದೆ ಎಂದರು. ಯುವಜನರಲ್ಲಿ ಉದ್ಯಮಗಳನ್ನು ನಡೆಸುವ ಆತ್ಮವಿಶ್ವಾಸ ಹಾಗೂ ಸವಾಲುಗಳನ್ನು ಎದುರಿಸುವ ನೈಪುಣ್ಯ ಹೆಚ್ಚಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಯುವಕ-ಯುವತಿ ಹಾಗೂ ವಿದ್ಯಾರ್ಥಿಗಳು ಸಮಾವೇಶದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. :: ಆ.23ರಂದು ಸಂಕಲ್ಪ ಯಾತ್ರೆ :: ಸಮಾವೇಶದ ಹಿನ್ನೆಲೆಯಲ್ಲಿ ಆ.23ರಂದು ಬೆಳಿಗ್ಗೆ 10.30ಕ್ಕೆ ಕುಶಾಲನಗರದಲ್ಲಿ ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ ಆಯೋಜಿಸಲಾಗಿದೆ. ಬೈಚನಹಳ್ಳಿಯಿಂದ ಆರಂಭವಾಗುವ ಯಾತ್ರೆ ದ್ವಿಚಕ್ರವಾಹನ ರ್ಯಾಲಿ, ಪಾದಯಾತ್ರೆ ಹಾಗೂ ಸಾಮೂಹಿಕ ಸಭೆಗಳ ಮೂಲಕ ಮುಖ್ಯರಸ್ತೆ, ಕುಶಾಲನಗರ ರಥಬೀದಿ ಮಾರ್ಗವಾಗಿ ಆಂಜನೇಯ ದೇವಾಲಯದವರೆಗೆ ಸಾಗಲಿದೆ. ಕುಶಾಲನಗರ ಡಿವೈಎಸ್ಪಿ ಚಂದ್ರಶೇಖರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಾಗೇಂದ್ರ ಪ್ರಸಾದ್ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಸಮಾವೇಶದ ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಕಾರ್ಯದರ್ಶಿ ಪ್ರವೀಣ್, ಖಜಾಂಚಿ ಪಿ.ಎಸ್. ಪ್ರಶಾಂತ್, ಕನ್ನಿಕಾ ಪರಮೇಶ್ವರಿ ಸಹಕಾರ ಸಂಘದ ಅಧ್ಯಕ್ಷ ಅಮೃತ್ ರಾಜ್ ಹಾಗೂ ವಾಸವಿ ಸಮಾಜದ ನಿರ್ದೇಶಕ ಕೆ.ಜೆ. ಸತೀಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಆ.20 NEWS DESK : ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹೊಸ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲೆಯ…

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.